ಥಾಣೆ, ಡಿ.8-ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಸಹಕಾರಿ ಬ್ಯಾಂಕ್‌ನಲ್ಲಿ ನಕಲಿ ನೋಟು ಠೇವಣಿ ಇಡಲು ಯತ್ನಿಸಿದ ವ್ಯಕ್ತಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
500 ಮುಖಬೆಲೆಯ 45,000 ರೂ.ಗಳನ್ನು ಠೇವಣಿ ಇಡಲು ಖಡವಳ್ಳಿ ನಿವಾಸಿಯಾದ ಆರೋಪಿಗಳು ಡಿ.3ರಂದು ಬ್ಯಾಂಕ್‌ಗೆ ಭೇಟಿ ನೀಡಿದ್ದರು. ಆದರೆ, ಪರಿಶೀಲನೆಯ ನಂತರ 45 ನೋಟುಗಳು ನಕಲಿ ಎಂದು ತಿಳಿದುಬಂದಿದೆ.
ಈ ಪ್ರಕರಣದಲ್ಲಿ ಇಲ್ಲಿಯವರೆಗೆ ಯಾವುದೇ ಬಂಧನವಾಗಿಲ್ಲ, ನೋಟುಗಳನ್ನು ಎಲ್ಲಿಂದ ತರಲಾಗಿದೆ ಎಂಬುದನ್ನು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ
ಡೊಂಬಿವಿಲಿ ಪೊಲೀಸರು ಆರೋಪಿಗಳ ವಿರುದ್ಧ ಸೆಕ್ಷನ್ 179 ಮತ್ತು ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಹಾಗು ಇತರೆ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.