Wednesday, December 4, 2024
Homeರಾಜ್ಯಅಂಗನವಾಡಿ ಕಾರ್ಯಕರ್ತೆಯ ಮೂಗು ಕತ್ತರಿಸಿದ ದುಷ್ಕರ್ಮಿ

ಅಂಗನವಾಡಿ ಕಾರ್ಯಕರ್ತೆಯ ಮೂಗು ಕತ್ತರಿಸಿದ ದುಷ್ಕರ್ಮಿ

ಬೆಳಗಾವಿ, ಜ.3- ಕುಂದಾನಗರಿ ಬೆಳಗಾವಿಯಲ್ಲಿ ಅಪರಾಧ ಚಟುವಟಿಕೆಗಳು ಹೆಚ್ಚುತ್ತಿದ್ದು, ಜನರಲ್ಲಿ ಮತ್ತೆ ಆತಂಕ ಶುರುವಾಗಿದೆ. ಅಂಗನವಾಡಿ ಮಕ್ಕಳು ಹೂವು ಕಿತ್ತರು ಎಂದು ಆರೋಪಿಸಿ ಅಂಗನವಾಡಿ ಕಾರ್ಯಕರ್ತೆಯ ಮೂಗನ್ನು ಧೂರ್ತನೊಬ್ಬ ಕತ್ತರಿಸಿರುವ ಘಟನೆ ತಾಲೂಕಿನ ಬಸುರ್ತೆ ಗ್ರಾಮದಲ್ಲಿ ನಡೆದಿದೆ.

ಅಂಗನವಾಡಿ ಪಕ್ಕದಲ್ಲೇ ಇದ್ದ ಮನೆಯೊಂದರ ಬಳಿ ಮಕ್ಕಳು ಆಟವಾಡುತ್ತ ಮಲ್ಲಿಗೆ ಹೂವು ಕಿತ್ತಿದ್ದಾರೆ. ಇದರಿಂದ ಆಕ್ರೋಶಗೊಂಡ ಮನೆಯಿಂದ ಹೊರಬಂದ ವ್ಯಕ್ತಿಯೊಬ್ಬ ಕುಡುಗೋಲು ತೆಗೆದುಕೊಂಡು ಬಂದು ಅಂಗನವಾಡಿ ಕಾರ್ಯಕರ್ತೆ ಮೇಲೆ ಹಲ್ಲೆ ನಡೆಸಿ ಆಕೆಯ ಮೂಗನ್ನು ಕತ್ತರಿಸಿದ್ದಾನೆ. ಇದರಿಂದ ಕುಸಿದುಬಿದ್ದ ಸುಗಂಧಾ ಮೋರೆ (50) ಎಂಬ ಅಂಗನವಾಡಿ ಕಾರ್ಯಕರ್ತೆಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಹಲ್ಲೆ ಮತ್ತು ಮೂಗನ್ನು ಕತ್ತರಿಸಿರುವುದರಿಂದ ನರಳಾಡುತ್ತಿರುವ ಆಕೆಯ ವೇದನೆ ನೋಡಿ ವೈದ್ಯರೇ ಮರುಗಿದ್ದಾರೆ. ಘಟನೆ ನಡೆದು ಒಂದು ದಿನ ಕಳೆದರೂ ಪೊಲೀಸರು ಕ್ರಮ ಕೈಗೊಳ್ಳದೆ ಇರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಹಿಂದೂ ಕಾರ್ಯಕರ್ತರ ಬಂಧನ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ಮಾಧ್ಯಮಗಳಲ್ಲಿ ವರದಿ ಪ್ರಸಾರವಾದ ನಂತರ ನಗರ ಪೊಲೀಸ್ ಆಯುಕ್ತ ಎಸ್.ಎನ್.ಸಿದ್ದರಾಮಪ್ಪ ಹಾಗೂ ಗ್ರಾಮೀಣ ಠಾಣೆ ಪೊಲೀಸರು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

RELATED ARTICLES

Latest News