Thursday, December 5, 2024
Homeಜಿಲ್ಲಾ ಸುದ್ದಿಗಳು | District Newsಹಾಸನ / Hassanಕೌಟಂಬಿಕ ಕಲಹದ ಹಿನ್ನೆಲೆಯಲ್ಲಿ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

ಕೌಟಂಬಿಕ ಕಲಹದ ಹಿನ್ನೆಲೆಯಲ್ಲಿ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

Man commits suicide by shooting himself

ಹಾಸನ,ನ.21- ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ವ್ಯಕ್ತಿಯೊಬ್ಬ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಯಸಳೂರು ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕರುಣಾಕರ (40) ಆತಹತ್ಯೆಗೆ ಶರಣಾದ ವ್ಯಕ್ತಿ.

ಸಕಲೇಶಪುರ ತಾಲ್ಲೂಕಿನ ಬಾಚೀಹಳ್ಳಿ ಗ್ರಾಮದವರಾದ ಕರುಣಾಕರ ಕಾಫಿ ಬೆಳೆಗಾರರಾಗಿದ್ದರು. ಕೌಟುಂಬಿಕ ಕಲಹದಿಂದ ನೊಂದಿದ್ದ ಈತ ಮನೆಯಲ್ಲಿ ಬಂದೂಕಿನಿಂದ ಹಾರಿಸಿಕೊಂಡು ಆತಹತ್ಯೆ ಮಾಡಿಕೊಂಡಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಯಸಳೂರು ಪೊಲೀಸ್‌‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Latest News