ಪಾಟ್ನಾ,ಜ.28- ಸರಸ್ವತಿ ಮೂರ್ತಿ ಮೆರವಣಿಗೆಯ ವೇಳೆ ಗುಂಡಿನ ದಾಳಿ ನಡೆದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆಗೆ ಬಿಹಾರದ ಪೊಲೀಸ್ ಕೇಂದ್ರ ಕಚೇರಿಯ ಕೂಗಳತೆಯ ದೂರದಲ್ಲಿ ನಡೆದಿದೆ. ಸೈದ್‍ಪುರ ಹಾಸ್ಟೆಲ್‍ನ ವಿದ್ಯಾರ್ಥಿಗಳು ಸರಡಸ್ವತಿ ವಿಗ್ರಹವನ್ನು ಗಂಗಾ ನದಿಯಲ್ಲಿ ವಿಸರ್ಜಿಸುವ ಮುನ್ನಾ ಮೆರವಣಿಗೆ ನಡೆಸುತ್ತಿದ್ದರು.
ಈ ವೇಳೆ ಮೆರವಣಿಗೆಯಲ್ಲಿದ್ದ ವ್ಯಕ್ತಿಯೊಬ್ಬರು ತಮ್ಮ ಪಿಸ್ತೂಲಿನಿಂದ ಆರು ಸುತ್ತು ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಜೆಹನಾಬಾದ್ ೀರಜ್ ಗಾಯಗೊಂಡಿದ್ದರು. ತಕ್ಷಣವೇ ಆತನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅಲ್ಲಿ ೀರಜ್ ಮೃತಪಟ್ಟಿದ್ದಾನೆ.
ಕಮಲ್ ಕಾಂಗ್ರೆಸ್ ಸೇರುವುದನ್ನು ಅಲ್ಲಗಳೆದ ಮಕ್ಕಳ್ ನಿಧಿ ಮೈಯಂ ಪಕ್ಷ
ಈ ಬಗ್ಗೆ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಗಾಂ ಮೈದಾನ್‍ನ ಪೊಲೀಸ್ ಠಾಣೆಯ ಅಧಿಕಾರಿ ಅರುಣ್ ಸಿಂಗ್, ಬಹದರ್‍ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪಾಟ್ನಾ ವಿಶ್ವವಿದ್ಯಾಲಯದ ಹಾಸ್ಟೆಲ್ ವಿದ್ಯಾರ್ಥಿಗಳು ಸರಸ್ವತಿ ಮೂರ್ತಿಯ ಮೆರವಣಿಗೆ ಮಾಡುವಾಗ ದುರ್ಘಟನೆ ನಡೆದಿದೆ. ಕುಟುಂಬದ ಸದಸ್ಯರು ನೀಡಿದ ದೂರು ಆಧರಿಸಿ ಪ್ರಕರಣ ದಾಖಲಿಸಲಾಗಿದೆ. ಶೀಘ್ರವೇ ಆರೋಪಿಯನ್ನು ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.
Man, Dies, Firing During, Saraswati, Idol, Immersion, Patna,