ಬೆಂಗಳೂರು, ಜ.24- ಮದುವೆಗೆ ನಿರಾಕರಿಸಿದ ನಾದಿನಿಯನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡುಗೆಹಳ್ಳಿ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಪ್ರಮುಖ ಆರೋಪಿ ದೇವರಾಜ ಮತ್ತು ಆತನ ಸಹಚರರನ್ನು ಪೊಲೀಸರು ಬಂಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ. ಆರೋಪಿ ದೇವರಾಜ ತನ್ನ ಹೆಂಡತಿ ತಂಗಿಯನ್ನು ಮದುವೆಯಾಗುವಂತೆ ಒತ್ತಾಯಿಸುತ್ತಿದ್ದ. ಮದುವೆಗೆ ನಾದಿನಿ ನಿರಾಕರಿಸಿದ್ದಳು. ಇದರಿಂದ ಕೋಪಗೊಂಡ ಆರೋಪಿ ತನ್ನ ಸಹಚರರ ಜತೆ ಸೇರಿ ಕಾರಿನಲ್ಲಿ ಆಕೆಯನ್ನು ಅಪಹರಿಸಿದ್ದನು.
ಈ ಬಗ್ಗೆ ಕೊಡುಗೆ ಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಕ್ರಮ ಕೈಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
