ಹೊಸಪೇಟೆ, ಮಾ.7- ಪ್ರೀತಿಸಿದ ಹುಡುಗಿ ಸಿಗಲಿಲ್ಲ ಎಂದು ಹುಚ್ಚು ಪ್ರೇಮಿಯೊಬ್ಬ ಆಕೆಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಹರಪನಹಳ್ಳಿ ತಾಲೂಕಿನ ದುಗ್ಗಾವತಿ ಗ್ರಾಮದಲ್ಲಿ ನಡೆದಿದೆ.
ಐತಿಹಾಸಿಕ ದುಗ್ಗಮ್ಮ ದೇವಿ ಜಾತ್ರೆಯಲ್ಲಿ ಈ ಘಟನೆ ನಡೆದಿದ್ದು ಬಂದಿದ್ದ ಭಕ್ತರು ಇದರಿಂದ ಬೆಚ್ಚಿಬಿದ್ದಿದ್ದಾರೆ.
ಪ್ರತಿಭಾ ಕೊಲೆಯಾದ ಯುವತಿಯಾಗಿದ್ದು, ಆರೋಪಿ ಮೂಕಪ್ಪನವರ ಹನುಮಂತನನ್ನು ಪೊಲೀಸರು ಬಂಧಿಸಿದ್ದಾರೆ.
ಕಳೆದ 2ವರ್ಷದ ಹಿಂದೆ ಪ್ರತಿಭಾಳನ್ನು ಒಲಿಸಿಕೊಳ್ಳಲು ಆರೋಪಿ ಗ್ರಾಮದಲ್ಲಿ ಆಕೆ ಹಿಂದೆ ಸುತ್ತುತ್ತಿದ್ದ. ಆದರೆ ಆಕೆ ಪ್ರೀತಿಯನ್ನು ನಿರಾಕರಿಸಿದ್ದಳು.
ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಬಿಗ್ ರಿಲೀಫ್, ಜಾಮೀನು ಮಂಜೂರು
ಕಳೆದ ಒಂದೂವರೆ ವರ್ಷದ ಹಿಂದೆ ಪ್ರತಿಭಾಳನ್ನ ರಾಣೆಬೆನ್ನೂರಿನ ನಾಗರಾಜ್ ಎಂಬುವವರ ಜೊತೆ ಮದುವೆ ಮಾಡಿಕೊಡಲಾಗಿತ್ತು. ದಂಪತಿಗೆ ಗಂಡು ಮಗು ಇದೆ. ಮದುವೆಯಾದ ಬಳಿಕ ಚೆನ್ನಾಗಿ ಜೀವನ ನಡೆಸುತ್ತಿದ್ದ ಪ್ರತಿಭಾ ಚಿಕ್ಕಮ್ಮನ ಊರಿಗೆ ಜಾತ್ರೆಗೆ ಬಂದಿದ್ದಳು.
ಇನ್ನೇನು ತನ್ನೂರಿಗೆ ಹೋಗಬೇಕು ಎನ್ನುವಷ್ಟರಲ್ಲಿ ಪಾಗಲ್ ಪ್ರೇಮಿ ಹನುಮಂತ ಆಕೆಯನ್ನು ನಡು ರಸ್ತೆಯಲ್ಲೇ ಮನ ಬಂದಂತೆ ಚಾಕುವಿನಿಂದ ಹಲವು ಬಾರಿ ಇರಿದಿದ್ದಾನೆ.
ತೀವ್ರ ಗಾಯಗೊಂಡಿದ್ದ ಆಕೆಯನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯಯೇ ಸಾವನ್ನಪ್ಪಿದ್ದಾಳೆ. ಈ ಕುರಿತು ಹಲವಾಗಲು ಪೊಲೀಸ್ ಠಾಣೆಯಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
man, murder, lover, Hospet,