ಬೆಂಗಳೂರು, ಸೆ.3- ಬಿಎಂಟಿಸಿ ಬಸ್‌ಗಳಲ್ಲಿ ಪ್ರಯಾಣಿಕರ ಗಮನ ಬೇರೆಡೆ ಸೆಳೆದು ಮೊಬೈಲ್‌ಗಳನ್ನು ಕಳ್ಳತನ ಮಾಡುತ್ತಿದ್ದ ಆಂಧ್ರದ ಪೇಂಟರ್‌ನನ್ನು ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಬಂಧಿಸಿ, 10 ಲಕ್ಷ ಮೌಲ್ಯದ 60 ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ.
ಆನೇಕಲ್ ತಾಲೂಕಿನ ಮಾಯಸಂದ್ರ ಗ್ರಾಮದಲ್ಲಿ ಗ್ರಾಮದ ನಿವಾಸಿ ಒಬ್ಬರು ಮೆಜೆಸ್ಟಿಕ್‌ನಿಂದ ಅತ್ತಿಬೆಲೆ ಕಡೆಗೆ ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಹೊಸರೋಡ್ ಬಸ್ ನಿಲ್ದಾಣ ಹತ್ತಿರ ಅವರ ಗಮನ ಬೇರೆಡೆ ಸೆಳೆದು ಆರೋಪಿ ಮೊಬೈಲ್ ಪೋನ್ ಕಳವು ಮಾಡಿಕೊಡು ಪರಾರಿಯಾಗಿದ್ದನು.
ಈ ಬಗ್ಗೆ ಅವರು ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಬಿಎಂಟಿಸಿ ಮತ್ತು ಖಾಸಗಿ ಬಸ್‌ಗಳಲ್ಲಿ ಪ್ರಯಾಣಿಸುವವರ ಮೇಲೆ ನಿಗಾವಹಿಸಿ ಖಚಿತ ಮಾಹಿತಿ ಸಂಗ್ರಹಿಸಿದ್ದಾರೆ.
ಕೋನಪ್ಪನ ಅಗ್ರಹಾರ ಬಸ್ ನಿಲ್ದಾಣದಲ್ಲಿ ಆರೋಪಿ ರವಿ (20)ಎಂಬಾತನನ್ನು ವಶಕ್ಕೆ ಪಡೆದು ಆತನ ಬಳಿ ಇದ್ದ ಬ್ಯಾಗ್ ಪರಿಶೀಲಿಸಿದಾಗ 60 ಮೊಬೈಲ್‌ಗಳು ಪತ್ತೆಯಾಗಿವೆ. ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ, ಈತ ಆಂಧ್ರಪ್ರದೇಶದ ನಿವಾಸಿ, ವೃತ್ತಿಯಲ್ಲಿ ಪೇಂಟರ್ ಎಂಬುವುದು ಗೊತ್ತಾಗಿದೆ. ಇನ್ಸ್ ಪೆಕ್ಟರ್ ಸತೀಶ್ ಹಾಗೂ ಸಿಬ್ಬಂದಿ ತಂಡ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿದ್ಧಾರೆ.