ಮಂಡ್ಯ,ಆ.13-ಹೃದಯಾಘಾತದಿಂದ ಎಂಜಿನಿಯರಿಂಗ್ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ.ಜಿಲ್ಲೆಯ ಕೆಆರ್‌ಪೇಟೆ ತಾಲೂಕಿನ ಕರೋಟಿ ಗ್ರಾಮದ ನವೀನ್ (21) ಮೃತ ಎಂಜಿನಿಯರಿಂಗ್ ವಿದ್ಯಾರ್ಥಿ.
ನವೀನ್ ಬೆಂಗಳೂರಿನ ಕಾಲೇಜುವೊಂದರಲ್ಲಿ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದು ರಜೆ ಇದ್ದ ಹಿನ್ನೆಲೆಯಲ್ಲಿ ಮನೆಗೆ ಬಂದಿದ್ದನು. ನಿನ್ನೆ ಬೆಳಗ್ಗೆ ಮನೆಯಲ್ಲಿ ಹಠಾತ್ ಹೃದಯಾಘಾತವಾಗಿ ನವೀನ್ ಕುಸಿದು ಬಿದ್ದಿದ್ದಾನೆ.
ತಕ್ಷಣ ಪೋಷಕರು ಕಿಕ್ಕೇರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ಚನ್ನರಾಯಪಟ್ಟಣಕ್ಕೆ ಕರೆದುಕೊಂಡು ಹೋಗಲು ತಿಳಿಸಿದ್ದಾರೆ. ಚನ್ನರಾಯಪಟ್ಟಣಕ್ಕೆ ಕರೆದುಕೊಂಡು ಹೋಗುತ್ತಿದ್ದ ಮಾರ್ಗಮಧ್ಯೆ ನವೀನ್ ಸಾವನ್ನಪ್ಪಿದ್ದಾನೆ.
ಕಿಕ್ಕೇರಿ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡಿದ್ದರೆ ನನ್ನ ಮಗ ಉಳಿಯುತ್ತಿದ್ದ, ಆಸ್ಪತ್ರೆಯ ಸಿಬ್ಬಂದಿ ಪ್ರಾಥಮಿಕ ಚಿಕಿತ್ಸೆ ನೀಡದೇ ಇರುವುದು ಮಗನ ಸಾವಿಗೆ ಕಾರಣ ಎಂದು ಪೋಷಕರು ತಮ ಆಕ್ರೋಶವನ್ನು ಹೊರಹಾಕಿದ್ದಾರೆ.ಮಗನ ಹಠಾತ್ ನಿಧನದಿಂದ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು.
- ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಖಂಡಿಸಿ ರಾಜ್ಯಾದ್ಯಂತ ಭುಗಿಲೆದ್ದ ಪ್ರತಿಭಟನೆ
- ಬೆಂಗಳೂರಲ್ಲಿ ಶಾಲಾ ಬಸ್ಗೆ ಬೆಂಕಿಬಿದ್ದು ಅಪರಿಚಿತ ವ್ಯಕ್ತಿ ಸಜೀವ ದಹನ
- ಬೆಂಗಳೂರಲ್ಲಿ ಹಾಡಹಗಲೇ ಲೇಡಿಸ್ ಪಿಜಿಗೆ ನುಗ್ಗಿ ಚಿನ್ನಾಭರಣ , ಮೊಬೈಲ್ ದರೋಡೆ
- ವಿಧಾನಸಭೆಯಲ್ಲಿ ಪ್ರತಿದ್ವನಿಸಿದ ಕೊಪ್ಪಳದ ಗವಿ ಸಿದ್ದಪ್ಪ ಕೊಲೆ ಪ್ರಕರಣ
- ರಾಜಸ್ಥಾನ : ಪಿಕಪ್ ವ್ಯಾನ್ ಟ್ರಕ್ಗೆ ಡಿಕ್ಕಿಯಾಗಿ 7 ಮಕ್ಕಳು ಸೇರಿ 11 ಜನರು ಸಾವು