Monday, March 4, 2024
Homeರಾಜ್ಯಮನೆಮನೆಯಲ್ಲೂ ಹನುಮ ಧ್ವಜ ಹಾರಿಸಲು ವಿಜಯೇಂದ್ರ ಕೆರೆ

ಮನೆಮನೆಯಲ್ಲೂ ಹನುಮ ಧ್ವಜ ಹಾರಿಸಲು ವಿಜಯೇಂದ್ರ ಕೆರೆ

ಬೆಂಗಳೂರು,ಜ.28- ಮನೆಮನೆಯಲ್ಲೂ ಹನುಮ ಧ್ವಜ ಹಾರಿಸುವ ಅಭಿಯಾನದ ಮೂಲಕ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನೀತಿಯನ್ನು ವಿರೋಧಿಸಬೇಕು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಜನತಗೆ ಕರೆಕೊಟ್ಟಿದ್ದಾರೆ.

ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರೇ , ನಿಮಗೆ ತಾನು ಹಿಂದೂ ಎಂದು ಕರೆದುಕೊಳ್ಳುವ ಯಾವ ನೈತಿಕತೆಯು ಉಳಿದಿಲ್ಲ. ನನ್ನ ಹೆಸರಿನಲ್ಲಿ ರಾಮ ಇದ್ದಾನೆ, ನಾನೂ ಹಿಂದು ಎಂದು ಹೇಳಿಕೊಳ್ಳುವ ಯಾವ ನೈತಿಕತೆಯೂ ಇಲ್ಲ ಎಂದು ವಾಗ್ದಳಿ ನಡೆಸಿದ್ದಾರೆ.

ಸರಕು ಸಾಗಣೆ ಹಡಗಿನ ಮೇಲೆ ಹೌತಿ ಉಗ್ರರ ದಾಳಿ

ಕರ್ನಾಟಕದಲ್ಲಿರುವ ಕಾಂಗ್ರೆಸ್ ಸರಕಾರ ಹನುಮ ಧ್ವಜವನ್ನು ನಿಷೇಧಿಸಿದೆಯೇ? ನಿಷೇಧ ಮಾಡದಿದ್ದರೆ, ಅನುಮತಿ ಪಡೆದು ಧ್ವಜ ಸ್ಥಂಭಕೆ ಕಟ್ಟಿದ ಹನುಮಧ್ವಜವನ್ನು ಕಿತ್ತು ಹಾಕಿದ್ದು ಯಾಕೆ? ಅಧಿಕಾರಿಗಳ ಉದ್ಧಟತನವಾದರೆ ಕೂಡಲೇ ಅವರನ್ನು ಅಮಾನತು ಮಾಡಿ ಕ್ರಮ ಕೈಗೊಳ್ಳಿ. ಆಳುವವರ ಮರ್ಜಿಗೆ ಅನುಗುಣವಾಗಿ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದರೆ ಎಂದು ಕಿಡಿಕಾರಿದ್ದಾರೆ.

ನೀವು ಮಾಡಿರುವುದು ಜನರ ಭಾವನೆಗಳನ್ನು ಕೆಣಕುವ ಕೆಲಸ. ಅಧಿಕಾರದ ಬಲದಿಂದ, ಅಧಿಕಾರದ ಮದದಿಂದ ಆಡಳಿತ ಯಂತ್ರದ ದುರುಪಯೋಗ ಮಾಡಿ ಧ್ವಜ ಇಳಿಸಿರಬಹುದು. ಇದೆ ಜನ ನಿಮ್ಮನ್ನು ಅಧಿಕಾರದಿಂದ ಇಳಿಸುತ್ತಾರೆ ಎಂಬುದನ್ನು ನೆನಪಿಟ್ಟುಕೊಳ್ಳಿ. ನಿಮ್ಮ ಈ ಹಿಂದೂ ವಿರೋಧಿ ನೀತಿಯನ್ನು ಕಟುವಾಗಿ ಖಂಡಿಸುತ್ತೇನೆ.

ಮಂಡ್ಯದ ಕೆರಗೋಡು ಗ್ರಾಮದಲ್ಲಿ ಅಯೋಧ್ಯೆಯ ಶ್ರೀ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ನಿಮಿತ್ತ ಹಾರಿಸಲಾಗಿದ್ದ ಹನುಮ ಧ್ವಜ ಇಳಿಸಿದ ಕಾಂಗ್ರೆಸ್ ಸರ್ಕಾರ ಎಂದು ವಿಜಯೇಂದ್ರ ಕಾಂಗ್ರೆಸ್ ಸರ್ಕಾರದ ವಿರುದ್ದ ಆರೋಪಗಳ ಸುರಿಮಳೆಗೈದಿದ್ದಾರೆ.

RELATED ARTICLES

Latest News