Wednesday, February 28, 2024
Homeರಾಜ್ಯಧಾರ್ಮಿಕ ಧ್ವಜ ಹಾರಿಸಲು ಅವಕಾಶವಿಲ್ಲ : ಸಚಿವ ಚಲುವರಾಯಸ್ವಾಮಿ

ಧಾರ್ಮಿಕ ಧ್ವಜ ಹಾರಿಸಲು ಅವಕಾಶವಿಲ್ಲ : ಸಚಿವ ಚಲುವರಾಯಸ್ವಾಮಿ

ಬೆಂಗಳೂರು,ಜ.28- ಸಂವಿಧಾನದಡಿಯಲ್ಲಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಧ್ವಜ ಹಾರಿಸಲಷ್ಟೇ ಅವಕಾಶವಿದೆ. ಇದರ ಹೊರತಾಗಿ ಯಾವುದೇ ರಾಜಕೀಯ, ಧಾರ್ಮಿಕ ಧ್ವಜ ಹಾರಿಸಲು ಅವಕಾಶವಿಲ್ಲ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ತಿಳಿಸಿದರು.

ಅವರು ಇಂದು ಕೆರಗೋಡು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಹನುಮ ಧ್ವಜ ಹಾರಿಸಿರುವ ವಿಚಾರವಾಗಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಪ್ರತಿಕ್ರಿಯಿಸಿ ಮಾತನಾಡಿದರು. ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಜಾಗದಲ್ಲಿ ರಾಷ್ಟ್ರೀಯ ಧ್ವಜ ಹಾರಿಸಬಹುದು. ಅದು ಹೊರತುಪಡಿಸಿ ಸರ್ಕಾರಿ ಜಾಗದಲ್ಲಿ ಬೇರೆ ಧ್ವಜವನ್ನು ಹಾರಿಸುವಂತಿಲ್ಲ. ತ್ರಿವರ್ಣ ಧ್ವಜಕ್ಕೆ ಅನುಮತಿ ಪಡೆದು ಬೇರೆ ಧ್ವಜ ಹಾರಿಸೋದು ತಪ್ಪು.

ನಾಳೆ ಬೆಳಿಗ್ಗೆ ಡಿಸಿ ಕಚೇರಿ ಮುಂದೆ ಹಾರಿಸುತ್ತೇವೆ ಎನ್ನುತ್ತಾರೆ. ಆಗ ಅವಕಾಶ ಕೊಡಲು ಆಗುತ್ತದೆಯೇ? ಇದೊಂದು ಕಡೆ ಅವಕಾಶ ಕೊಟ್ಟರೆ ಎಲ್ಲಾ ಕಡೆ ಕೇಳುತ್ತಾರೆ. ಇದು ತಪ್ಪು ಎಂದರು. ಸ್ಥಳೀಯ ಯುವಕರು ಒಳ್ಳೆಯವರೇ. ಅವರನ್ನು ದಾರಿ ತಪ್ಪಿಸುತ್ತಿದ್ದಾರೆ. ಎಲ್ಲಾ ಯುವಕರ ಜೊತೆ ಮಾತನಾಡುತ್ತೇನೆ. ಬೇರೆ ಸ್ಥಳದಲ್ಲಿ ಹನುಮಾನ್ ಧ್ವಜ ಹಾರಿಸಲು ಖಾಸಗಿ ಜಾಗದಲ್ಲಿ ಅಥವಾ ದೇವಾಲಯದ ಮುಂದೆ ಹಾಕಲು ಅವಕಾಶ ಕೊಡೋಣ. ಆದರೆ ಸರ್ಕಾರಿ ಕಚೇರಿ ಮುಂದೆ ಬೇಡ ಎಂದರು.ನಾನು ರಾಮ ಭಕ್ತ, ನಮ್ಮ ಮನೆ ದೇವರು ವಿಷ್ಣು. ನಾವು ಯಾವುದೇ ಧ್ವಜದ ವಿರೋಗಳಲ್ಲ.

ಬಿಜೆಪಿಯವರ ಅತ್ಯುತ್ಸಾಹಕ್ಕೆ ನಾವು ಅಡ್ಡಿಪಡಿಸುವುದಿಲ್ಲ : ಡಿಕೆಶಿ

ಪಂಚಾಯಿತಿಯಲ್ಲಿ ಸಭೆಯಲ್ಲಿ ಹನುಮ ಧ್ವಜ ಹಾರಿಸಲು ಅನುಮೋದನೆ ನೀಡಿದ್ದರೆ ತಪ್ಪು. ಅವರ ವಿರುದ್ಧವೂ ಕ್ರಮ ಆಗುತ್ತದೆ. ಇದರಲ್ಲಿ ನಾನಾಗಲೀ, ಸ್ಥಳೀಯ ಶಾಸಕರಾಗಲೀ ರಾಜಕೀಯ ಮಾಡುತ್ತಿಲ್ಲ. ಸರ್ಕಾರಿ ಕಚೆರಿ ಮುಂದೆ ಹನುಮ ಧ್ವಜ ಹಾರಿಸಿರುವುದು ಸಂವಿಧಾನ ವಿರುದ್ಧ ಆಗಿರುವುದರಿಂದ ಅದನ್ನ ತೆರವು ಮಾಡಲಾಗಿದೆ ಎಂದರು.

RELATED ARTICLES

Latest News