ಬೆಂಗಳೂರು,ಮಾ.9- ಕಳೆದ ಹಲವು ದಿನಗಳಿಂದ ರಾಜ್ಯ ರಾಜಕೀಯದಲ್ಲಿ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದ್ದ ಮಂಡ್ಯ ಲೋಕಸಭಾ ಕ್ಷೇತ್ರದ ಸದಸ್ಯೆ ಸುಮಲತಾ ಅಂಬರೀಶ್ ಕೊನೆಗೂ ಬಿಜೆಪಿ ಸೇರಲು ವೇದಿಕೆ ಸಿದ್ದವಾಗಿದೆ.
ಸುಮಲತಾ ಅಂಬರೀಶ್ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲು ವರಿಷ್ಠರು ಹಸಿರುನಿಶಾನೆ ತೋರಿದ್ದು, ಎಲ್ಲವೂ ನಿರೀಕ್ಷೆ ಯಂತೆ ನಡೆದರೆ ಶುಕ್ರವಾರವೇ ಬಿಜೆಪಿಗೆ ಸೇರ್ಪಡೆಯಾಗುವ ಸಾದ್ಯತೆ ಇದೆ.
ಈ ಹಿನ್ನಲೆಯಲ್ಲಿ ಶುಕ್ರವಾರ ಮಂಡ್ಯದ ನಿವಾಸದಲ್ಲಿ ಸುಮಲತ ಅಂಬರೀಶ್ ಪತ್ರಿಕಾಗೋಷ್ಠಿ ಕರೆದಿದ್ದು ತಮ್ಮ ಮುಂದಿನ ರಾಜಕೀಯ ನಿಲುವುಗಳ ಬಗ್ಗೆ ಅವರು ಪ್ರಕಟಿಸಲಿದ್ದಾರೆ ಎಂದು ಹೇಳಲಾಗಿದೆ.
ಸುಮಲತಾ ಅವರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂಬ ಸುಳಿವನ್ನು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಬಹಿರಂಗಪಡಿಸಿದ್ದಾರೆ. ಇದರ ಬೆನ್ನಲ್ಲೇ ಮಂಡ್ಯ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿ.ಪಿ.ಉಮೇಶ್ ಅವರ ಸೇರ್ಪಡೆಯಿಂದ ಜಿಲ್ಲೆಯಲ್ಲಿ ಬಿಜೆಪಿ ಬಲಿಷ್ಠವಾಗಿ ಬೆಳೆಯಲಿದೆ ಎಂದು ಹೇಳಿದ್ದಾರೆ.
ಪ್ರಭಾವಿಗಳ ಪಾಲಾಗುತ್ತಿದೆ ಬಿಡಿಎಗೆ ಸೇರಿದ 1ಸಾವಿರ ಕೋಟಿ ಬೆಲೆಯ ಅಸ್ತಿ : ಉಮಾಪತಿ ಶ್ರೀನಿವಾಸಗೌಡ
ಕಳೆದ ಹಲವು ದಿನಗಳಿಂದ ತಮ್ಮ ಬೆಂಬಲಿಗರು, ಹಿತೈಷಿಗಳು, ಆಪ್ತರ ಜೊತೆ ಸಮಾಲೋಚನೆ ನಡೆಸಿರುವ ಅವರು ಯಾವ ಪಕ್ಷ ಸೇರ್ಪಡೆ ಸೂಕ್ತ ಎಂಬ ಅಭಿಪ್ರಾಯವನ್ನು ಸಂಗ್ರಹಿಸಿದ್ದರು. ಬಹುತೇಕರು ಈಗಿನ ಪರಿಸ್ಥಿತಿಯಲ್ಲಿ ಬಿಜೆಪಿ ಸೇರ್ಪಡೆಯಾದರೆ 2024ರ ಲೋಕಸಭಾ ಚುನಾವಣೆಯಲ್ಲೂ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ಸಚಿವ ಸ್ಥಾನ ಪಡೆಯಬಹುದೆಂಬ ಸಲಹೆಯನ್ನು ಕೊಟ್ಟಿದ್ದರು.
ಇದರ ಜೊತೆ ಕೆಲ ದಿನಗಳ ಹಿಂದೆ ಸುಮಲತಾ ಅವರು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನು ಭೇಟಿಯಾಗಿದ್ದರು. ಅವರು ಕೂಡ ಪ್ರಸ್ತುತ ದಿನಗಳಲ್ಲಿ ಬಿಜೆಪಿಯೇ ಸೂಕ್ತ ಎಂಬ ಸಲಹೆಯನ್ನು ಕೊಟ್ಟಿದ್ದರು.
ಇದೆಲ್ಲವನ್ನು ಪರಿಗಣಿಸಿ ಸುಮಲತಾ ಅಂಬರೀಶ್ ಬಿಜೆಪಿಗೆ ಸೇರಲು ಸಜ್ಜಾಗಿದ್ದಾರೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ರ್ಪಧಿಸಿದ್ದ ಅವರಿಗೆ ಬಿಜೆಪಿ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಬೆಂಬಲ ಸೂಚಿಸಿತ್ತು.
ದೇವೇಗೌಡರು ಅಡಿಗಲ್ಲಿಟ್ಟ ಕಾಮಗಾರಿಗೆ ಮರು ನಾಮಕರಣ : ರೇವಣ್ಣ ಆಕ್ಷೇಪ
ಇದೇ 12ರಂದು ಪ್ರಧಾನಿ ನರೇಂದ್ರಮೋದಿ ಅವರು ಬೆಂಗಳೂರು-ಮೈಸೂರು ಎಕ್ಸ್‍ಪ್ರೆಸ್ ಹೈವೇಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಅಷ್ಟರೊಳಗೆ ಬಿಜೆಪಿ ಸೇರ್ಪಡೆಯನ್ನು ಅಕೃತವಾಗಿ ಘೋಷಣೆ ಮಾಡಲಿದ್ದಾರೆ.
Mandya, MP, Sumalatha, join, BJP, Friday,