ಮಂಡ್ಯಕ್ಕೆ ಸ್ಮಾರ್ಟ್ ಸಿಟಿ ಯೋಜನೆ ಮಂಜೂರು ಮಾಡಲು ಒತ್ತಾಯ

Social Share

ಬೆಂಗಳೂರು,ಮಾ.10- ಮಂಡ್ಯ ನಗರವನ್ನು ಸ್ಮಾರ್ಟ್ ಸಿಟಿ ಯೋಜನೆಗೆ ಒಳಪಡಿಸಿ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸುವಂತೆ ವಿಧಾನ ಪರಿಷತ್ ಸದಸ್ಯರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ.

ಕಾಂಗ್ರೆಸ್‍ನ ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ, ಮಧು ಜಿ. ಮಾದೇಗೌಡ ಅವರು ಪ್ರಧಾನಿಗೆ ಪತ್ರ ಬರೆದಿದ್ದು, ಹಲವು ಕೊರಿಕೆಗಳನ್ನು ಸಲ್ಲಿಸಿದ್ದಾರೆ. ಮಂಡ್ಯ ನಗರದಲ್ಲಿ ಸುಮಾರು 1.52 ಲಕ್ಷ ಜನಸಂಖ್ಯೆ ಇದ್ದು, ದಿನೇ ದಿನೆ ಮತ್ತಷ್ಟು ಹೆಚ್ಚಾಗುತ್ತಿದೆ. ಇಲ್ಲಿ ಪ್ರಥಮ ದರ್ಜೆ ಕಾಲೇಜುಗಳು, ಇಂಜನಿಯರಿಂಗ್ ಕಾಲೇಜುಗಳಿವೆ.

BIG NEWS : ಕರ್ನಾಟಕ, ಹರಿಯಾಣದಲ್ಲಿ H3N2ಗೆ ಇಬ್ಬರು ಬಲಿ

ಮಂಡ್ಯ ನಗರದಲ್ಲಿ ಅಸಮರ್ಪಕವಾದ ರಸ್ತೆ, ಚರಂಡಿ, ಯುಜಿಡಿ ವ್ಯವಸ್ಥೆ ಇದೆ. ಸಮಪರ್ಕವಾದ ಕುಡಿಯುವ ನೀರಿನ ವ್ಯವಸ್ಥೆ, ವೈಜ್ಞಾನಿಕವಾಗಿ ತ್ಯಾಜ್ಯ ವಿಲೇವಾರಿ, ಸೋಲಾರ್ ಬೀದಿ ದೀಪಗಳು ಹಾಗೂ ನಗರದಲ್ಲಿರುವ ಉದ್ಯಾನವನಗಳ ನಿರ್ವಹಣೆ ದೃಷ್ಟಿಯಿಂದ ಮಂಡ್ಯ ನಗರವನ್ನು ಸ್ಮಾರ್ಟ್ ಸಿಟಿ ಯೋಜನೆಗೆ ಒಳಪಡಿಸಬೇಕು. ಈ ಮೂಲಕ ಆರೋಗ್ಯ, ಶಿಕ್ಷಣ, ಕೃಷಿ, ಉದ್ದಿಮೆ, ಉದ್ಯೋಗ ಕ್ಷೇತ್ರ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಮೈಸೂರು-ಬೆಂಗಳೂರು ನಡುವೆ ಬರುವ ಮಂಡ್ಯ ನಗರ ಅಭಿವೃದ್ಧಿಗೆ ಸಹಕಾರಿಯಾಗುವಂತೆ ಹೊರವರ್ತುಲ ರಸ್ತೆ ನಿರ್ಮಾಣ ಮಾಡಬೇಕಿದೆ. ಜೊತೆಗೆ ಮಂಡ್ಯ ಮೆಡಿಕಲ್ ಕಾಲೇಜನ್ನು ದೆಹಲಿಯ ಏಮ್ಸ್ ಮಾದರಿಯಲ್ಲಿ ಮೇಲ್ದರ್ಜೆಗೇರಿಸಿ ಜಿಲ್ಲೆಯ 18 ಲಕ್ಷ ಜನರ ವೈದ್ಯಕೀಯ ಸೇವೆಗೆ ಆದ್ಯತೆ ನೀಡಬೇಕಿದೆ, ಮದ್ದೂರಿನ ಸುತ್ತಮುತ್ತ ಪ್ರದೇಶಕ್ಕೆ ಅನುಕೂಲವಾಗುವಂತೆ ಟ್ರಾಮಕೇರ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ನಿರ್ಮಾಣ ಮಾಡಬೇಕಿದೆ ಎಂದು ಸಲಹೆ ನೀಡದ್ದಾರೆ.

ರುದ್ರಪ್ರಯಾಗ, ತೆಹ್ರಿಗಳಲ್ಲಿ ಹೆಚ್ಚು ಭೂ ಕುಸಿತ ಸಂಭವಿಸಲಿವೆಯಂತೆ

ಜಿಲ್ಲೆಯ ಕೆ.ಆರ್.ಪೇಟೆ, ಪಾಂಡವಪುರ ಮತ್ತು ನಾಗಮಂಗಲ ತಾಲ್ಲೂಕುಗಳಲ್ಲಿ ತೋಟಗಾರಿಕೆ ಬೆಳೆಗಳು, ತರಕಾರಿಗಳನ್ನು ಹೆಚ್ಚಾಗಿ ಬೆಳೆಯುತ್ತಾರೆ. ದರ ಕುಸಿತದ ಸಂದರ್ಭದಲ್ಲಿ ರೈತರಿಗೆ ತುಂಬಾ ನಷ್ಟ ಉಂಟಾಗುತ್ತಿದೆ.
ಕೃಷಿ ಉತ್ಪನ್ನಗಳನ್ನು ಸಂರಕ್ಷಿಸಲು ಮೂರು ತಾಲ್ಲೂಕುಗಳಲ್ಲೂ ಕೋಲ್ಡ್ ಸ್ಟೊರೇಜ್‍ಗಳನ್ನು ನಿರ್ಮಿಸಬೇಕು.

ದೇಶದಲ್ಲಿ ಕೊರೊನಾ ಮಹಾಮಾರಿಗೆ ಮತ್ತೆ ಮೂರು ಬಲಿ

ಜಿಲ್ಲೆಯ ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಕೆಂದ್ರೀಯ ವಿದ್ಯಾಲಯಗಳನ್ನು ಸ್ಥಾಪಿಸಬೇಕು. ಮಂಡ್ಯ ಜಿಲ್ಲೆಗೆ ಐಐಟಿ ಸಂಸ್ಥೆಯನ್ನು ಸ್ಥಾಪಿಸಬೇಕು. ಜಿಲ್ಲೆಯಾದ್ಯಂತಹ ಕೃಷಿ ಆಧಾರಿತ ಉದ್ದಿಮೆಗಳನ್ನು ಪ್ರಾರಂಭಿಸಿ ಸ್ಥಳೀಯರಿಗೆ ಉದ್ಯೋಗವಕಾಶ ಕಲ್ಪಿಸಿಕೊಡಬೇಕು ಎಂದು ಮನವಿ ಮಾಡಿದ್ದಾರೆ.

Mandya, smart city, project,

Articles You Might Like

Share This Article