Sunday, September 8, 2024
Homeರಾಜ್ಯಮಂಡ್ಯದ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 100 ಕೋಟಿ ಮೀಸಲು

ಮಂಡ್ಯದ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 100 ಕೋಟಿ ಮೀಸಲು

ಬೆಂಗಳೂರು ಜ. 24- ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 100 ಕೋಟಿ ರೂಪಾಯಿಗಳನ್ನು ಮೀಸಲಿರಿಸಲಾಗಿದ್ದು, 30 ಕೋಟಿ ರೂಪಾಯಿಗಳ ಬಿಡುಗಡೆಗೆ ಪ್ರಸ್ತಾವನೆ ಸಲಿಕೆಯಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ.

ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಮಂಡ್ಯ ಶಾಸಕ ರವಿಕುಮಾರ್ ಗಣಿಗ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಡಿಸೆಂಬರ್ 20 21ರಂದು ಆಯೋಜಿಸಲಾಗಿರುವ ಸಾಹಿತ್ಯ ಸಮ್ಮೇಳನಕ್ಕೆ ಅನುದಾನ ಬಿಡುಗಡೆ ಮಾಡುವ ಕುರಿತು ಪರಿಶೀಲಿಸಲಾಗುತ್ತಿದೆ. ಈಗಾಗಲೇ 2024 25ನೇ ಸಾಲಿನ ಕ್ರಿಯಾ ಯೋಜನೆಯಲ್ಲಿ ಸಾಹಿತ್ಯ ಸಮ್ಮೇಳನಕ್ಕೆ ಅನುದಾನ ಮೀಸಲಿರಿಸಲಾಗಿದೆ ಎಂದು ಹೇಳಿದರು.

ಆರಂಭದಲ್ಲಿ ಸಭಾಧ್ಯಕ್ಷರು ಪ್ರಶ್ನೆ ಕೇಳಲು ಶಾಸಕರನ್ನು ಆಹ್ವಾನಿಸುವ ಸಂದರ್ಭದಲ್ಲಿ ರವಿಕುಮಾರ್ ಗಾಣಿಗ ಎಂದು ಉಲ್ಲೇಖಿಸಿದರು. ಇದಕ್ಕೆ ಸ್ಪಷ್ಟನೆ ನೀಡಿದ ಶಾಸಕರು, ಅದು ಗಾಣಿಗ ಗಣಿಗ ಎಂದು ತಿದ್ದುಪಡಿ ಮಾಡಿದರು. ಇದಕ್ಕೂ ಮೊದಲು ಉಮೇಶ್ ಕತ್ತಿ ಅವರ ಹೆಸರನ್ನು ಕೂಗುವಾಗಲೂ ಸಭಾಧ್ಯಕ್ಷರು ಉಮೇಶ್ ಹುಕ್ಕೇರಿ ಎಂದು ಹೇಳಿದಾಗ, ಬಿಜೆಪಿಯ ಶಾಸಕರು ಲೋಪವನ್ನು ಸರಿಪಡಿಸಿದರು.

RELATED ARTICLES

Latest News