ಸಮಾಜ ಸೇವಕಿ ಮಂಗಳಾ ನಾಗರಾಜ್‍ಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ

Social Share

ಬೆಂಗಳೂರು,ಮಾ.8- ವಿವಿಧ ಕ್ಷೇತ್ರಗಳಲ್ಲಿ ಸಲ್ಲಿಸಿದ ಸೇವೆಗಳನ್ನು ಪರಿಗಣಿಸಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಸಮಾಜ ಸೇವಕಿ ಮಂಗಳ ನಾಗರಾಜ್ ಅವರಿಗೆ ಪ್ರಸಕ್ತ ಸಾಲಿನ ಪ್ರತಿಷ್ಠಿತ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಲಭಿಸಿದೆ.
ಮಹಿಳೆಯರ ಸಬಲೀಕರಣ, ಸಮಾಜಸೇವೆ, ಮಾಧ್ಯಮ ಹಾಗೂ ಸಾಂಸ್ಕøತಿಕ, ಶಿಕ್ಷಣ, ಸಾಹಿತ್ಯ, ಉತ್ತರ ಕರ್ನಾಟಕ ಜನಜಾಗೃತಿ ವೇದಿಕೆ, ನಾಗರಾಜ ಜಮಖಂಡಿ ಮೆಮೋರಿಯಲ್ ಟ್ರಸ್ಟ್ ಮೂಲಕ ವಿವಿಧ ಸಮಾಜ ಸೇವೆಗಳನ್ನು ಕಳೆದ ಹಲವು ವರ್ಷಗಳಿಂದ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಯನ್ನು ನೀಡಿದೆ.
ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್ ಸೇರಿದಂತೆ ವಿವಿಧ ಗಣ್ಯರು ಮಂಗಳ ನಾಗರಾಜ್ ಅವರಿಗೆ ರಾಣಿ ಚೆನ್ನಮ್ಮ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಿದರು.
ತಮ್ಮ ಸೇವೆಯನ್ನು ಗುರುತಿಸಿ ಪ್ರಶಸ್ತಿ ನೀಡಿದ ಸಿಎಂ ಬೊಮ್ಮಾಯಿ, ಸಚಿವ ಹಾಲಪ್ಪ ಆಚಾರ್ ಸೇರಿದಂತೆ ಎಲ್ಲರಿಗೂ ಮಂಗಳಾ ನಾಗರಾಜ್ ಕೃತಜ್ಞತೆ ಸಲ್ಲಿಸಿದ್ದಾರೆ.

Articles You Might Like

Share This Article