ಮಂಗಳೂರಿನ ಆಟೋ ಸ್ಪೋಟ ಪ್ರಕರಣ ಎನ್‍ಐಎಗೆ ಹಸ್ತಾಂತರ

Social Share

ಬೆಂಗಳೂರು,ನ.20-ಮಂಗಳೂರಿನ ಕಂಕನಾಡಿ ಬಳಿ ಆಟೋದಲ್ಲಿ ಕುಕ್ಕರ್ ಸ್ಪೋಟ ಗೊಂಡ ಪ್ರಕರಣವನ್ನು ರಾಜ್ಯ ಸರ್ಕಾರ ರಾಷ್ಟ್ರೀಯ ತನಿಖಾ ದಳ(ಎನ್‍ಐಎ)ಗೆ ಹಸ್ತಾಂತರಿಸಲಿದೆ.

ಇದು ಆಕಸ್ಮಿಕವಾಗಿ ಕುಕ್ಕರ್ ಸ್ಪೋಟ ಗೊಂಡ ಪ್ರಕರಣವಲ್ಲ. ಭಯೋತ್ಪಾದನಾ ಕೃತ್ಯ ಎಂದು ಪೊಲೀಸ್ ಮಹಾನಿರ್ದೇಶಕ ಪ್ರವೀಣ್‍ಸೂದ್ ಅವರು ಟ್ವೀಟ್ ಮಾಡಿರುವುದರಿಂದ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದೆ.

ಮೂಲಗಳ ಪ್ರಕಾರ ಕೊಯಮತ್ತೂರಿನಲ್ಲಿ ನಡೆಸಿದ ಕೃತ್ಯ ನಡೆಸಿದ ಭಯೋತ್ಪಾದಕರೇ ಮಂಗಳೂರಿನಲ್ಲೂ ನಡೆಸಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ಭಯೋತ್ಪಾದನಾ ಕೃತ್ಯ ಕಂಡುಬಂದಿರುವುದರಿಂದ ತತಕ್ಷಣವೇ ಸರ್ಕಾರ ಎನ್‍ಐಎ ಹಸ್ತಾಂತರ ಮಾಡಲಿದೆ ಎಂದು ಮೂಲಗಳು ತಿಳಿಸಿವೆ.

ಖಾಸಗಿ ಬಸ್ ಪಲ್ಟಿ : 40 ಮಂದಿಗೆ ಗಾಯ, 6 ಮಂದಿ ಸ್ಥಿತಿ ಗಂಭೀರ

ಈಗಾಗಲೇ ಬೊಮ್ಮಾಯಿ ಅವರು, ಆರಗ ಜ್ಞಾನೇಂದ್ರ ಅವರು ಗೃಹ ಇಲಾಖೆ ಅಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದಿದ್ದು, ಪ್ರಕರಣವನ್ನು ಎನ್‍ಐಎಗೆ ಹಸ್ತಾಂತರಿಸಲು ಪ್ರಕ್ರಿಯೆ ಆರಂಭಿಸಲು ಸೂಚಿಸಿರುವುದಾಗಿ ತಿಳಿದುಬಂದಿದೆ.

ಮಂಗಳೂರು ಆಟೋ ಸ್ಪೋಟ ಆಕಸ್ಮಿಕವಲ್ಲ, ಭಯೋತ್ಪಾದನಾ ಕೃತ್ಯ

Mangalore, #bomb, #blast, #NIA, #terrorism,

Articles You Might Like

Share This Article