Saturday, July 5, 2025
Homeರಾಜ್ಯಮಂಗಳೂರು : ಯುವತಿಯನ್ನು ದೈಹಿಕವಾಗಿ ಬಳಸಿಕೊಂಡು ಕೈಕೊಟ್ಟಿದ್ದ ಬಿಜೆಪಿ ಮುಖಂಡನ ಪುತ್ರ ಅರೆಸ್ಟ್

ಮಂಗಳೂರು : ಯುವತಿಯನ್ನು ದೈಹಿಕವಾಗಿ ಬಳಸಿಕೊಂಡು ಕೈಕೊಟ್ಟಿದ್ದ ಬಿಜೆಪಿ ಮುಖಂಡನ ಪುತ್ರ ಅರೆಸ್ಟ್

Mangaluru: BJP leader's son arrested for physically abusing young woman

ಮಂಗಳೂರು,ಜು.5- ಮದುವೆ ಯಾಗುವುದಾಗಿ ಯುವತಿಯನ್ನು ನಂಬಿಸಿ ದೈಹಿಕ ಸಂಪರ್ಕ ಬೆಳಸಿ ನಂತರ ಗರ್ಭಿಣಿಯಾಗಿರುವುದು ಗೊತ್ತಾಗುತ್ತಿದ್ದಂತೆಯೇ ಕೈಕೊಟ್ಟಿದ್ದ, ಬಿಜೆಪಿ ಮುಖಂಡನ ಪುತ್ರನನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ.

ದಕ್ಷಿಣಕನ್ನಡ ಜಿಲ್ಲೆ ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ್‌‍ರಾವ್‌ ಎನ್ನುವವರ ಪುತ್ರ ಕೃಷ್ಣ ರಾವ್‌ ಬಂಧಿತ ಆರೋಪಿ. ಕೆಲ ದಿನಗಳ ಹಿಂದೆ ಕೃಷ್ಣರಾವ್‌ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿತ್ತು. ಯುವತಿ ಗರ್ಭಿಣಿ ಆಗುತ್ತಿದ್ದಂತೆ ಆತ ಆಕೆಯನ್ನು ಮದುವೆಯಾಗಲು ನಿರಾಕರಿಸಿ ನಾಪತ್ತೆಯಾಗಿದ್ದ. ಗರ್ಭಿಣಿಯಾದ ಬಳಿಕ ಸಂತ್ರಸ್ತ ಯುವತಿ ಗಂಡು ಮಗುವಿಗೆ ಜನ ನೀಡಿದ್ದಾರೆ.

ಕಂಗಾಲಾದ ಸಂತ್ರಸ್ತ ಯುವತಿಯ ಮನೆಯವರು ಪೊಲೀಸರಿಗೆ ದೂರು ನೀಡಿದ್ದು, ಪುತ್ತೂರು ಪೊಲೀಸರು ಕೃಷ್ಣರಾವ್‌ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್‌ 64(1) ಮತ್ತು 69ರಡಿ ಪ್ರಕರಣ ದಾಖಲಿಸಿಕೊಂಡು ತಲೆಮರೆಸಿಕೊಂಡಿದ್ದ ಆರೋಪಿಯನ್ನು ಇದೀಗ ಬಂಧಿಸಿದ್ದಾರೆ.

ಲವ್‌, ಸೆಕ್‌್ಸ, ದೋಖಾ ಪ್ರಕರಣದ ಆರೋಪಿ ಕೃಷ್ಣ ಜೆ ರಾವ್‌ ಎಂಬಾತನನ್ನು ಪೋಲೀಸರು ಮೈಸೂರಿನಲ್ಲಿ ವಶಕ್ಕೆ ಪಡೆದಿದ್ದು, ರಾತ್ರಿಯೇ ಪುತ್ತೂರಿಗೆ ಕರೆತಂದಿರುವ ಪೋಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ. ಕಳೆದ 10 ದಿನಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಬೇಕೆಂದು ಹಲವು ಸಂಘಟನೆಗಳಿಂದ ಪ್ರತಿಭಟನೆಯೂ ನಡೆದಿತ್ತು.

ಪ್ರಕರಣದ ಹಿನ್ನೆಲೆ:
ಮಂಗಳೂರಿನ ಖಾಸಗಿ ಕಾಲೇಜಿನ ಫಾರೆನ್ಸಿಕ್‌ ಸೈನ್‌್ಸ ವಿದ್ಯಾರ್ಥಿನಿ ದೂರು ನೀಡಿದ್ದರು. ಪುತ್ತೂರಿನಲ್ಲಿ ಹೈಸ್ಕೂಲ್‌ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವೇಳೆ ಇಬ್ಬರಿಗೂ ಪ್ರೇಮಾಂಕುರವಾಗಿತ್ತು. ಬಳಿಕ 2024ರ ಅಕ್ಟೋಬರ್‌ 11ರಂದು ಕೃಷ್ಣ ರಾವ್‌ಮನೆಗೆ ಕರೆದು ದೈಹಿಕ ಸಂಪರ್ಕ ಬೆಳೆಸಿದ ಆರೋಪ ಮಾಡಿದ್ದಾರೆ.

ಸಹಪಾಠಿ ಯುವತಿಯನ್ನು ಗರ್ಭಿಣಿ ಮಾಡಿ ಕೃಷ್ಣ ರಾವ್‌ ಕೈ ಕೊಟ್ಟಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ಕರೆಸಿ ಯುವತಿ ಜೊತೆ ಲೈಂಗಿಕ ಸಂಪರ್ಕ ಬೆಳೆಸಿದ್ದಾನೆ. 2025ರ ಜನವರಿಯಲ್ಲಿ ಮತ್ತೆ ಬಲವಂತವಾಗಿ ಕೃಷ್ಣರಾವ್‌ ಯುವತಿ ಜೊತೆ ಲೈಂಗಿಕ ಸಂಪರ್ಕ ಮಾಡಿದ್ದ ಎನ್ನಲಾಗಿದೆ.

ಕೆಲ ತಿಂಗಳ ಬಳಿಕ ನಾನು ಗರ್ಭಿಣಿ ಎಂದು ಕೃಷ್ಣ ರಾವ್‌ಗೆ ಯುವತಿ ತಿಳಿಸಿದ್ದಳು. ಲವ್‌ ಹೆಸರಲ್ಲಿ ಯುವತಿಯನ್ನು ಗರ್ಭವತಿಯನ್ನಾಗಿ ಮಾಡಿ ಆ ಬಳಿಕ ಕೃಷ್ಣ ರಾವ್‌ ಉಲ್ಟಾ ಹೊಡೆದಿದ್ದ . ಯುವತಿಯನ್ನು ಮದುವೆಯಾಗಲು ನಿರಾಕರಿಸಿರುವ ಆರೋಪಿ ಕೃಷ್ಣ ರಾವ್‌ ವಿರುದ್ದ ಯುವತಿ ಹಾಗೂ ಪೋಷಕರು ಪುತ್ತೂರು ಮಹಿಳಾ ಠಾಣೆಗೆ ದೂರು ನೀಡಿದ್ದರು.

ದೂರಿನಲ್ಲೇನಿದೆ?
ಸಂತ್ರಸ್ತ ಯುವತಿ ಪುತ್ತೂರು ಮಹಿಳಾ ಪೊಲೀಸ್‌‍ ಠಾಣೆಯಲ್ಲಿ ನೀಡಿರುವ ದೂರಿನಂತೆ, ಆರೋಪಿ ಕೃಷ್ಣ ರಾವ್‌ ಮತ್ತು ದೂರುದಾರ ಯುವತಿ ಪ್ರೌಢಶಾಲೆಯಲ್ಲಿ ಸಹಪಾಠಿಗಳಾಗಿದ್ದರು. ಶಾಲಾ ದಿನಗಳ ನಂತರವೂ ಇಬ್ಬರ ನಡುವೆ ಸಂಬಂಧ ಮುಂದುವರಿದಿತ್ತು. ಪ್ರಸ್ತುತ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಬಿ.ಎಸ್ಸಿ ಪದವಿ ವ್ಯಾಸಂಗ ಮಾಡುತ್ತಿರುವ ಯುವತಿ, 2024ರ ಅಕ್ಟೋಬರ್‌ 11ರಂದು ಕೃಷ್ಣ ರಾವ್‌ ತನ್ನ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಕರೆದು ತಂದು ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಬಂಧ ಬೆಳೆಸಿದ್ದ. ನಂತರ 2025ರ ಜನವರಿಯಲ್ಲಿ, ಆತ ಮತ್ತೆ ಯುವತಿಯನ್ನು ಬಲವಂತವಾಗಿ ಲೈಂಗಿಕವಾಗಿ ಬಳಸಿಕೊಂಡಿದ್ದ. ಬಳಿಕ ತಾನು ಗರ್ಭಿಣಿ ಎಂದು ಅರಿತುಕೊಂಡು ಕೃಷ್ಣ ಮದುವೆಯಾಗಲು ನಿರಾಕರಿಸಿದ್ದಾನೆ ಎಂದು ಯುವತಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಪುತ್ತೂರಿನ ನಿವಾಸಿಯಾಗಿರುವ ವಿದ್ಯಾರ್ಥಿನಿ, ತಾನು ಮತ್ತು ಕೃಷ್ಣ ಹಲವಾರು ವರ್ಷಗಳಿಂದ ಸಂಬಂಧದಲ್ಲಿದ್ದೆವು. ಕೃಷ್ಣ ತನ್ನ ನಂಬಿಕೆಯನ್ನು ದುರುಪಯೋಗಪಡಿಸಿಕೊಂಡು, ಆತನ ಮನೆಯಲ್ಲಿ ಅನೇಕ ಬಾರಿ ದೈಹಿಕವಾಗಿ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಗರ್ಭಿಣಿಯಾದ ವಿಷಯ ತಿಳಿದ ನಂತರ, ಯುವತಿ ತನ್ನ ಹೆತ್ತವರಿಗೆ ತಿಳಿಸಿದ್ದು, ನಂತರ ಅವರು ಕೃಷ್ಣನ ಕುಟುಂಬವನ್ನು ಸಂಪರ್ಕಿಸಿದ್ದಾರೆ. ಆರಂಭದಲ್ಲಿ ಕುಟುಂಬದವರು ಮದುವೆಗೆ ಒಪ್ಪಿಕೊಂಡರೂ, ಕೃಷ್ಣ ಅಂತಿಮವಾಗಿ ನಿರಾಕರಿಸಿದ್ದ.

RELATED ARTICLES

Latest News