ಕುಕ್ಕರ್ ಕಿರಾತಕ ಶಾರಿಕ್ ಎನ್‍ಐಎ ವಶಕ್ಕೆ!

Social Share

ಬೆಂಗಳೂರು,ಜ.28- ಕಳೆದ ನವೆಂಬರ್ ತಿಂಗಳಿನಲ್ಲಿ ಮಂಗಳೂರಿನ ಕಂಕನಾಡಿ ಬಳಿ ಕುಕ್ಕರ್ ಬಾಂಬ್ ಸ್ಪೋಟಗೊಂದು ಗಂಭೀರವಾಗಿ ಗಾಯಗೊಂಡಿದ್ದ ಶಂಕಿತ ಉಗ್ರ ಶಾರೀಕ್ ಆರೋಗ್ಯ ಸ್ಥಿತಿ ಸುಧಾರಿಸಿದ್ದು, ರಾಷ್ಟ್ರೀಯ ತನಿಖಾ ದಳ ವಶಕ್ಕೆ ಪಡೆಯಲು ಮುಂದಾಗಿದೆ.

ಕುಕ್ಕರ್ ಸ್ಪೋಟಗೊಂಡ ವೇಳೆ ತೀವ್ರವಾಗಿ ಗಾಯಗೊಂಡಿದ್ದ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಶಂಕಿತ ಉಗ್ರ ಶಾರೀಕ್‍ಗೆ ಪ್ರಸ್ತುತ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶೇ.25ರಷ್ಟು ಈತನ ದೇಹದ ಅಂಗಾಂಗಗಳು ಸುಟ್ಟು ಹೋಗಿದ್ದವು. ಇದೀಗ ದಿನ ಕಳೆದಂತೆ ಆತನ ಆರೋಗ್ಯ ಸ್ಥಿತಿ ಸುಧಾರಣೆ ಕಂಡಿದ್ದು, ಸದ್ಯದಲ್ಲೇ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದು, ಎನ್‍ಐಎ ವಶಕ್ಕೆ ಪಡೆಯಲು ಸಜ್ಜಾಗಿದೆ.

ಕಳೆದ ಒಂದು ತಿಂಗಳಿನಿಂದ ವಿಕ್ಟೋರಿಯಾ ಆಸ್ಪತ್ರೆಯ ವಿಶೇಷ ವಾರ್ಡ್‍ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾರೀಕ್ ಆರೋಗ್ಯ ಸ್ಥಿತಿ ಸುಧಾರಣೆ ಕಂಡಿರುವುದರಿಂದ ಯಾವುದೇ ಸಂದರ್ಭದಲ್ಲಿ ವೈದ್ಯರು ಆಸ್ಪತ್ರೆಯಿಂದ ಬಿಡುಗಡೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ಭಾರತ್ ಜೋಡೋ ಯಾತ್ರೆಗೆ ಸೂಕ್ತ ಭದ್ರತೆ ಒದಗಿಸಲು ಖರ್ಗೆ ಆಗ್ರಹ

24 ವರ್ಷದ ಈತ ಈಗಾಗಲೇ ಮೂರು ಪ್ರಕರಣಗಳಲ್ಲಿ ಪ್ರಮುಖ ಆರೋಪಿಯಾಗಿದ್ದು, ಈಗ ಮಂಗಳೂರು ಸ್ಪೋಟ ಪ್ರಕರಣದಲ್ಲೂ ಎ1 ಆರೋಪಿಯಾಗಿದ್ದಾನೆ. ಈತ ಐಸಿಸ್ ಸೇರುವ ಉದ್ದೇಶ ಹೊಂದಿದ್ದ. ಇದರ ಭಾಗವಾಗಿ ಆತ ಇಂತಹ ದುಷ್ಕೃತ್ಯಕ್ಕೆ ಮುಂದಾಗಿದ್ದ. ಕರ್ನಾಟಕ ಮಾತ್ರವಲ್ಲದೆ, ನೆರೆಯ ಕೇರಳ ಮತ್ತು ತಮಿಳುನಾಡಿನಲ್ಲೂ ಈತ ಸಂಚರಿಸಿದ್ದ ಮಾಹಿತಿಯನ್ನು ಈಗಾಗಲೇ ಎನ್‍ಐಎ ತನಿಖಾ ತಂಡ ಕಲೆ ಹಾಕಿದೆ.

ಸದ್ಯ ಈತ ಗುಣಮುಖ ಆಸ್ಪತ್ರೆಯಿಂದ ಬಿಡುಗಡೆಯಾಗುತ್ತಿದ್ದಂತೆ ಎನ್‍ಐಎ ಅಕಾರಿಗಳ ತಂಡ ಆತನನ್ನು ವಶಕ್ಕೆ ಪಡೆಯಲಿದ್ದು, ಪ್ರಕರಣ ಸಂಬಂಧ ಆತನನ್ನು ತೀವ್ರ ತನಿಖೆಗೆ ಒಳಪಡಿಸಲಿದೆ. ಈಗಾಗಲೇ ಚಿಕಿತ್ಸೆಯ ಜೊತೆ ಜೊತೆಗೆ ಬಹುತೇಕ ವಿಚಾರಣೆ ನಡೆಸಿರುವ ಎನ್‍ಐಎ ಅಧಿಕಾರಿಗಳ ತಂಡ ಮುಂದಿನ ವಾರವೇ ಶಾರೀಕ್‍ನನ್ನು ವಿಕ್ಟೋರಿಯಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿಸಿ ವಶಕ್ಕೆ ಪಡೆಯಲಿದೆ ಎಂದು ಎನ್‍ಐಎ ಮೂಲಗಳು ತಿಳಿಸಿವೆ.

ನವೆಂಬರ್ 19ರಂದು ಮಂಗಳೂರಿನ ಕಂಕನಾಡಿಯಲ್ಲಿ ನಡೆದಿದ್ದ ಸೋಟದಲ್ಲಿ ಆರೋಪಿ ಶಾರೀಕ್ ಸಹ ಗಾಯಗೊಂಡಿದ್ದ. ಘಟನಾ ಸ್ಥಳದಲ್ಲಿ 5 ಲೀಟರ್ ಕುಕ್ಕರ್, 9 ವೋಲ್ಟ್‍ನ 3 ಬ್ಯಾಟರಿಗಳು, ಡ್ಯಾಮೇಜ್ಡ್ ಸರ್ಕಿಟ್ ಸೇರಿದಂತೆ ಎಲೆಕ್ಟ್ರಿಕ್ ಉಪಕರಣಗಳನ್ನು ವಶಪಡಿಸಿಕೊಳ್ಳಲಾಗಿತ್ತು.

ಬಿಹಾರದಲ್ಲಿ ಸರಸ್ವತಿ ಮೆರವಣಿಗೆಯಲ್ಲಿ ಗುಂಡಿನ ದಾಳಿ, ಒಬ್ಬ ಸಾವು

ಪ್ರಾಥಮಿಕ ವಿಚಾರಣೆಯಲ್ಲಿ ಆರೋಪಿ ದೊಡ್ಡ ಪ್ರಮಾಣದ ಸಂಚು ರೂಪಿಸಿರುವುದು ಬಯಲಾಗಿತ್ತು. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರೋಪಿ ಶಾರೀಕ್‍ನನ್ನು ಡಿಸೆಂಬರ್ 16ರಂದು ರಾತ್ರಿ ಬಿಗಿ ಪೊಲೀಸ್ ಭದ್ರತೆಯೊಂದಿಗೆ ಕರೆತಂದು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ನವೆಂಬರ್ 19ರಂದು ಮಂಗಳೂರಿನ ಗರೋಡಿಯಲ್ಲಿ ಶಂಕಿತ ಉಗ್ರ ಶಾರೀಕ್ ರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಕೊಂಡೊಯ್ಯುತ್ತಿದ್ದಾಗ ಸ್ಪೋಟಗೊಂಡಿತ್ತು. ಈ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ಹಸ್ತಾಂತರ ಮಾಡಲಾಗಿತ್ತು.

Mangaluru, cooker, bomb blast, Shariq, nia, custody,

Articles You Might Like

Share This Article