Thursday, July 24, 2025
Homeರಾಜ್ಯಬೆಂಬಲ ಬೆಲೆಯೊಂದಿಗೆ ಮಾವು ಖರೀದಿ ಮಿತಿ 200 ಕ್ವಿಂಟಾಲ್‌ಗೆ ವಿಸ್ತರಣೆ

ಬೆಂಬಲ ಬೆಲೆಯೊಂದಿಗೆ ಮಾವು ಖರೀದಿ ಮಿತಿ 200 ಕ್ವಿಂಟಾಲ್‌ಗೆ ವಿಸ್ತರಣೆ

Mango purchase limit extended to 200 quintals with support price

ಬೆಂಗಳೂರು ಜು 23: ಬೆಲೆ ಕುಸಿತದಿಂದ ಕಂಗೆಟ್ಟಿರುವ ರಾಜ್ಯದ ಮಾವು ಬೆಳೆಗಾರರ ನೆರವಿಗೆ ದಾವಿಸಿರುವ ಸರ್ಕಾರ ಈ ಹಿಂದಿನ ಆದೇಶವನ್ನು ಮಾರ್ಪಾಡು ಮಾಡಿ ಬೆಂಬಲ ಬೆಲೆಯೊಂದಿಗೆ ಪ್ರತಿ ಎಕರೆಗೆ 40 ಕ್ವಿಂಟಾಲ್‌ನಂತೆ ಗರಿಷ್ಠ 5 ಎಕರೆಗೆ 200 ಕ್ವಿಂಟಾಲ್‌ವರೆಗೆ ಮಿತಿಗೊಳಿಸಿ ಖರೀದಿಸಲು ಆದೇಶ ಹೊರಡಿಸಿದೆ.

ಈ ಆದೇಶವು ಸದರಿ ಯೋಜನೆಯಡಿ ಈಗಾಗಲೇ ನೋಂದಾಯಿಸಿರುವ ರೈತರಿಗೂ ಸಹ ಅನ್ವಯವಾಗಲಿದೆ. ಪ್ರತಿ ಕೆ.ಜಿ.ಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ತಲಾ 2 ರೂಪಾಯಿಗಳಂತೆ ಒಟ್ಟು 4 ರೂಪಾಯಿ ಬೆಂಬಲ ಬೆಲೆಯೊಂದಿಗೆ ಮಾವು ಖರೀದಿಗೆ ದಿ:25-06-2025ರಂದು ಆದೇಶ ಹೊರಡಿಸಲಾಗಿತ್ತು.

ಈ ಆದೇಶದನ್ವಯ ಪ್ರತಿ ಎಕರೆಗೆ 20 ಕ್ವಿಂಟಾಲ್‌ನAತೆ ಗರಿಷ್ಟ 5 ಎಕರೆಗೆ 100 ಕ್ವಿಂಟಾಲ್‌ವರೆಗೆ ಮಿತಿಗೊಳಿಸಲಾಗಿತ್ತು ಇದೀಗ ಮಾರ್ಪಾಡು ಆದೇಶದಲ್ಲಿ ಈ ಮಿತಿಯನ್ನು 200 ಕ್ವಿಂಟಾಲ್‌ಗೆ ವಿಸ್ತರಿಸಲಾಗಿದೆ.

ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿರವರು ಖರೀದಿ ಮಿತಿ ವಿಸ್ತರಣೆ ಕುರಿತಂತೆ ಪತ್ರ ಬರೆದು ಕೇಂದ್ರಕ್ಕೂ ಮನವಿ ಮಾಡಿದ್ದು, ಖರೀದಿ ಕೇಂದ್ರಗಳಲ್ಲಿ ಅಗತ್ಯ ಕ್ರಮಕ್ಕೆ ನಿರ್ದೇಶನ ಹೊರಡಿಸಿದ್ದಾರೆ.

RELATED ARTICLES

Latest News