ತ್ರಿಪುರಾದ ನೂತನ ಸಿಎಂ ಆಗಿ ಮಾಣಿಕ್ ಷಾ ಪ್ರಮಾಣವಚನ ಸ್ವೀಕಾರ

Spread the love

ನವದೆಹಲಿ, ಮೇ15- ತ್ರಿಪುರದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಮಾಣಿಕ್ ಷಾ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ.
ಮುಂದಿನ ವರ್ಷ ವಿಧಾನಸಭೆ ಚುನಾವಣೆ ಎದುರಿಸುತ್ತಿರುವ ದಿಢೀರ್ ನಾಯಕತ್ವ ಬದಲಾವಣೆ ಭಾರೀ ಚರ್ಚೆಗೆ ಗ್ರಾಸವಾಗಿದೆ. ನಿರ್ಗಮಿತ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್‍ದೇಬ್ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಮೂಲಗಳ ಪ್ರಕಾರ ಮುಂದಿನ ಚುನಾವಣೆಯಲ್ಲೂ ಬಿಜೆಪಿ ಗೆಲ್ಲಬೇಕು. ತ್ರಿಪುರದಲ್ಲಿ ಸರ್ಕಾರ ರಚಿಸಬೇಕು ಎಂಬ ಇರಾದೆಯನ್ನು ಹೈಕಮಾಂಡ್ ಹೊಂದಿದೆ. ಈ ಹಿನ್ನೆಲೆಯಲ್ಲಿ ನಾಯಕತ್ವ ಬದಲಾವಣೆಗೆ ಸೂಚನೆ ನೀಡಿರುವುದಾಗಿ ಮೂಲಗಳು ತಿಳಿಸಿವೆ. ರಾಜೀನಾಮೆ ನೀಡಿದ ಬಿಪ್ಲಬ್, ಪಕ್ಷ ಎಲ್ಲರಿಗಿಂತಲೂ ದೊಡ್ಡದು. ನಾನು ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ಕೆಲಸ ಮಾಡುತ್ತೇನೆ.

ಅಧಿಕಾರ ಇರುವವರೆಗೂ ತ್ರಿಪುರದ ಜನರಿಗಾಗಿ ಗರಿಷ್ಠ ಪ್ರಮಾಣದ ಸೇವೆ ಸಲ್ಲಿಸಿದ್ದೇನೆ. ಕೋವಿಡ್ ಸಂಕಷ್ಟದಲ್ಲೂ ಜನರ ನೆರವಿಗೆ ಸರ್ಕಾರ ನಿಂತಿದ್ದು ನಮಗೆ ಸಮಾಧಾನ ನೀಡಿದೆ ಎಂದಿದ್ದಾರೆ. ಹೊಸ ಮುಖ್ಯಮಂತ್ರಿ ಹೆಸರನ್ನು ಕೂಡ ದೇಬ್ ಅವರು ಶಾಸಕಾಂಗ ಸಭೆಯಲ್ಲಿ ಘೋಷಿಸಿದ್ದಾರೆ. ಅದಕ್ಕೆ ಇತರ ಶಾಸಕರು ಅನುಮೋದನೆ ನೀಡಿದ್ದಾರೆ. ಶಾಸಕಾಂಗ ಪಕ್ಷದ ಸಭೆಯ ಬಳಿಕ ಶಾಸಕರ ಬೆಂಬಲದ ಪತ್ರದೊಂದಿಗೆ ರಾಜ್ಯಪಾಲರನ್ನು ಭೇಟಿ ಮಾಡಿರುವ ಮಾಣಿಕ್ ಷಾ ಸರ್ಕಾರ ರಚನೆಗೆ ಹಕ್ಕು ಪ್ರತಿಪಾದಿಸಿದ್ದಾರೆ.

ಲಖ್ನೋದ ಕಿಂಗ್ ಜಾರ್ಜ್ ಮೆಡಿಕಲ್ ಕಾಲೇಜಿನ ಪದವೀಧರ ಮಾಣಿಕ್ ಷಾ ಈ ಮೊದಲು ಕಾಂಗ್ರೆಸ್‍ನಲ್ಲಿ ಕೆಲಸ ಮಾಡುತ್ತಿದ್ದರು. 2016ರಲ್ಲಿ ಬಿಜೆಪಿ ಸೇರಿದ ಅವರನ್ನು , 2020ರಲ್ಲಿ ತ್ರಿಪುರ ಬಿಜೆಪಿ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು.

ಬ್ಯಾಡ್ಮಿಂಟನ್ ಆಟಗಾರರು ಆಗಿರುವ ಮಾಣಿಕ್ ಷಾ ಪ್ರಸ್ತುತ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಾಗಿದ್ದಾರೆ. ರಾಜ್ಯಪಾಲರ ಅನುಮತಿ ಮೇರೆಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

Facebook Comments