ಇಂಫಾಲ,ಸೆ.26- ಮಣಿಪುರದಲ್ಲಿ ಕಳೆದ ಜುಲೈನಿಂದ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಹತ್ಯೆ ಮಾಡಲಾಗಿದೆ. ಮೃತರನ್ನು ಮೈಟಿ ಸಮುದಾಯದ ಫಿಜಾಮ್ ಹೆಮ್ಜಿತ್ (20), ಹಿಜಾಮ್ ಲಿಂಥೋಯಿಂಗಂಬಿ (17) ಎಂದು ಗುರುತಿಸಲಾಗಿದೆ. ವಿದ್ಯಾರ್ಥಿಗಳಿಬ್ಬರ ಮೃತದೇಹದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಿಬಿಐ ವಿದ್ಯಾರ್ಥಿಗಳು ಕಾಣೆಯಾಗಿರುವ ಪ್ರಕರಣದ ತನಿಖೆ ನಡೆಸುತ್ತಿದ್ದು, ಈವರೆಗೂ ಮೃತ ದೇಹಗಳು ಪತ್ತೆಯಾಗದಿರುವುದಕ್ಕೆ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಅವರು ಸಶಸ್ತ್ರ ಗುಂಪಿನೊಂದಿಗೆ ಅರಣ್ಯ ಶಿಬಿರದಲ್ಲಿ ಹುಲ್ಲಿನ ಕಾಂಪೌಂಡ್‍ನಲ್ಲಿ ಕುಳಿತಿರುವುದು ಚಿತ್ರದಲ್ಲಿ ಕಾಣಬಹುದಾಗಿದೆ. ಆದರೆ ಇಬ್ಬರು ವಿದ್ಯಾರ್ಥಿಗಳ ಮೃತದೇಹಗಳು ಇನ್ನೂ ಕೂಡ ಪತ್ತೆಯಾಗಿಲ್ಲ. ಇಬ್ಬರು ವಿದ್ಯಾರ್ಥಿಗಳ ಮೃತ ದೇಹಗಳನ್ನು ತೋರಿಸುವ ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ, ಮಣಿಪುರ ಸರ್ಕಾರವು ಈ ವಿಷಯದಲ್ಲಿ ಕ್ರಮ ತೆಗೆದುಕೊಳ್ಳುತ್ತಿದೆ ಎಂದು ಹೇಳಿದೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಮಣಿಪುರ ಸರ್ಕಾರ, ಕೊಲೆಗಾರರು ಯಾರೇ ಆಗಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸಿಬಿಐ ಹಾಗೂ ರಾಜ್ಯ ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದು, ಶೀಘ್ರದಲ್ಲೇ ತ್ವರಿತ ಕ್ರಮ ಕೈಗೊಳ್ಳಲಾಗುವುದು ಎಂದು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಮಾಜಿ ಸಿಎಂ ವೀರೇಂದ್ರ ಪಾಟೀಲರ ಪತ್ನಿ ಶಾರದಾ ಪಾಟೀಲ ನಿಧನ
ವಿದ್ಯಾರ್ಥಿಗಳ ಹತ್ಯೆಗೆ ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದ್ದು, ಕಾಣೆಯಾದವರನ್ನು ಪತ್ತೆ ಹಚ್ಚಲು ಇಷ್ಟು ದಿನ ಬೇಕಾಯಿತಾ ಎಂದು ಹಲವರು ಪ್ರಶ್ನಿಸಿದ್ದಾರೆ. ಜುಲೈ ತಿಂಗಳಿನಲ್ಲಿ ಅಂಗಡಿಗಳಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ವಿದ್ಯಾರ್ಥಿಗಳಿಬ್ಬರೂ ಪತ್ತೆಯಾಗಿದ್ದರೂ ಅವರನ್ನು ಪೊಲೀಸರು ಪತ್ತೆ ಮಾಡಿಲ್ಲ. ಈ ಪೊಲೀಸರು ಮತ್ತು ಸರ್ಕಾರ ಹೇಗೆ ಕೆಲಸ ಮಾಡುತ್ತಿವೆ? ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜುಲೈ ತಿಂಗಳಿನಲ್ಲಿ ಅಂಗಡಿಯೊಂದರಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಹಿಜಾಮ್ ಲಿಂಥೋಯಿಂಗಂಬಿ ಮತ್ತು ಫಿಜಾಮ್ ಹೇಮ್ಜಿತ್ ಎಂಬ ಇಬ್ಬರು ವಿದ್ಯಾರ್ಥಿಗಳು ಕಾಣಿಸಿಕೊಂಡಿದ್ದರು. ಅಂದಿನಿಂದ ಆತನ ಯಾವುದೇ ಕುರುಹು ಪತ್ತೆಯಾಗಿಲ್ಲ. ಇದೀಗ ಇದ್ದಕ್ಕಿದ್ದಂತೆ ಅವರ ಮೃತದೇಹದ ಫೋಟೋ ಹೊರಬಿದ್ದಿದೆ.
ಮೊದಲ ಫೋಟೋದಲ್ಲಿ, ಹಿಜಾಮ್ ಲಿಂಥೋಯಿಂಗಂಬಿ ಮತ್ತು ಫಿಜಾಮ್ ಹೆಮ್ಜಿತ್ ಕುಳಿತಿರುವುದನ್ನು ಕಾಣಬಹುದು. ಈ ಫೋಟೋದಲ್ಲಿ ಹಿಜಾಮ್ ಬಿಳಿ ಟಿ ಶರ್ಟ್ ಮತ್ತು ಫಿಜಾಮ್ ಹೇಮ್ಜಿತ್ ಚೆಕ್ ಶರ್ಟ್ ಧರಿಸಿದ್ದಾರೆ. ಅವರ ಹಿಂದೆ ಬಂದೂಕು ಹಿಡಿದ ಇಬ್ಬರು ವ್ಯಕ್ತಿಗಳು ನಿಂತಿದ್ದಾರೆ.
ಬಾಲಕಿ ಅಪಹರಿಸಿ ಚಲಿಸುವ ವಾಹನದಲ್ಲಿ ಗ್ಯಾಂಗ್ ರೇಪ್ ಮಾಡಿದ್ದ ಅತ್ಯಾಚಾರಿಗಳು ಅರೆಸ್ಟ್
ಎರಡನೇ ಫೋಟೋದಲ್ಲಿ, ಇಬ್ಬರು ವಿದ್ಯಾರ್ಥಿಗಳಾದ ಹಿಜಾಮ್ ಲಿಂಥೋಯಿಂಗಂಬಿ ಮತ್ತು ಫಿಜಾಮ್ ಹೆಮ್ಜಿತ್ ಅವರ ದೇಹಗಳು ಪೊದೆಗಳ ನಡುವೆ ಬಿದ್ದಿರುವುದು ಕಂಡುಬರುತ್ತದೆ.