ನವದೆಹಲಿ,ಮಾ.11-ಸರ್ ನನ್ನನ್ನು ಜೈಲಿಗೆ ಹಾಕುವ ಮೂಲಕ ನೀವು ನನಗೆ ತೊಂದರೆ ನೀಡಬಹುದು ಆದರೆ, ನನ್ನ ಉತ್ಸಾಹವನ್ನು ನಿಮ್ಮಿಂದ ಮುರಿಯಲು ಸಾಧ್ಯವಿಲ್ಲ ಎಂದು ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಬಂಧಿತರಾಗಿರುವ ಆಮ್ ಆದ್ಮಿ ಪಕ್ಷದ ಮುಖಂಡ ಮನೀಶ್ ಸಿಸೋಡಿಯಾ ಟ್ವಿಟ್ ಮಾಡಿದ್ದಾರೆ.
ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಫೆಬ್ರವರಿ 26 ರಂದು ಬಂಧಿತರಾಗಿರುವ ಆಮ್ ಆದ್ಮಿ ಪಕ್ಷದ ನಾಯಕ ಮನೀಶ್ ಸಿಸೋಡಿಯಾ ಅವರು ಇಂದು ಟ್ವೀಟ್ ಮಾಡಿ, ತನಿಖಾ ಸಂಸ್ಥೆಯು ತನ್ನನ್ನು ತಮ್ಮ ಕಸ್ಟಡಿಯಲ್ಲಿಟ್ಟುಕೊಂಡಿದೆ ಆದರೆ ಅವರು ನನ್ನ ಆತ್ಮವನ್ನು ಮುರಿಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಕೆಪಿಸಿಸಿ ಕಾರ್ಯಧ್ಯಕ್ಷ ಆರ್. ಧೃವ ನಾರಾಯಣ್ ನಿಧನ
ಸರ್, ನನ್ನನ್ನು ಜೈಲಿಗೆ ಹಾಕುವ ಮೂಲಕ ನೀವು ನನ್ನನ್ನು ತೊಂದರೆಗೊಳಿಸಬಹುದು. ಆದರೆ ನನ್ನ ಉತ್ಸಾಹವನ್ನು ಮುರಿಯಲು ಸಾಧ್ಯವಿಲ್ಲ. ಬ್ರಿಟಿಷರು ಸಹ ಸ್ವಾತಂತ್ರ್ಯ ಹೋರಾಟಗಾರರಿಗೆ ತೊಂದರೆ ನೀಡಿದರು, ಆದರೆ ಅವರ ಉತ್ಸಾಹ ಕುಂದಿಸಲು ಸಾಧ್ಯವಾಗಲಿಲ್ಲ ಎಂದು ಅವರು ಹಿಂದಿಯಲ್ಲಿ ಟ್ವಿಟ್ ಮಾಡಿದ್ದಾರೆ.
ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಏಳು ದಿನಗಳ ಕಾಲ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ಕಳುಹಿಸಿದ ಒಂದು ದಿನದ ನಂತರ ಅವರ ಟ್ವೀಟ್ ಬಂದಿದೆ.
Manish Sisodia, swipe, BJP, tweet, jail,