ಬೆಂಗಳೂರು,ಫೆ.1- ಸಾಧಿಸಬೇಕೆಂಬ ಛಲವೊಂದಿದ್ದರೆ ಏನು ಬೇಕಾದರೂ ಮಾಡಿ ತೋರಿಸಬಹುದು ಎಂಬುದಕ್ಕೆ ಈ ಗ್ರಾಮವೇ ನಿದರ್ಶನ. ಕೊಡುಗ ಜಿಲ್ಲೆ ಕುಶಾಲನಗರ ತಾಲ್ಲೂಕಿನ ಶಿರಂಗಾಲ ಗ್ರಾಮ ನಿದರ್ಶನವಾಗಿದೆ. ಇಲ್ಲಿನ ಗ್ರಾಮ ದೇವತೆ ಶ್ರೀ ಮಂಟಿಗಮ್ಮ ದೇವಸ್ಥಾನ ಜೀರ್ಣೋದ್ಧಾರಕ್ಕೆ ಸರ್ಕಾರದ ನೆರವು ಇಲ್ಲದೆ ದಾನಿಗಳ ಸಹಕಾರದಲ್ಲಿ ಗ್ರಾಮಸ್ಥರೇ ಸೇರಿಕೊಂಡು ನಿರ್ಮಾಣ ಮಾಡಿ ಅಚ್ಚರಿ ಹುಟ್ಟಿಸಿದ್ದಾರೆ.
ಶ್ರೀ ಮಂಟಿಗಮ್ಮ ದೇವಸ್ಥಾನವು ಕುಶಾಲನಗರದಲ್ಲಿ ಅತ್ಯಂತ ಸುಪ್ರಸಿದ್ದಿ ಪಡೆದಿದೆ. ಇಲ್ಲಿ ಹರಕೆ ಹೊತ್ತು ಬಂದರೆ ಅವರ ಇಷ್ಟಾರ್ಥಗಳನ್ನೆಲ್ಲ ಈಡೇರಿಸುತ್ತದೆ ಎಂಬ ನಂಬಿಕೆ ಭಕ್ತರಲ್ಲಿದೆ. ಹೀಗಾಗಿಯೇ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಹರಕೆ ಹೊತ್ತು ಸಾವಿರಾರು ಜನರು ಆಗಮಿಸುತ್ತಾರೆ.
ದೇವಸ್ಥಾನದ ಜೀರ್ಣೋದ್ಧಾರ ಸುದ್ದಿ ತಿಳಿಯುತ್ತಿದ್ದಂತೆ ಸುತ್ತಮುತ್ತಲಿನ ಗ್ರಾಮಸ್ಥರು ನಿರೀಕ್ಷೆಗೂ ಮೀರಿ ಕಾಣಿಕೆ ನೀಡಿದರು. ಬೆಂಗಳೂರಿನ ಉದ್ಯಮಿಯೊಬ್ಬರು 15 ಲಕ್ಷ ರೂಗಳನ್ನು ಜೀರ್ಣೋದ್ದಾರಕ್ಕೆ ನೀಡಿದ್ದಾರೆ.
ಸಂಚಾರಿ ಪೊಲೀಸರಿಗೆ ಧನ್ಯವಾದ ಸಲ್ಲಿಸಿದ ಶಾಲಾ ಮಕ್ಕಳು
ಮತ್ತೊಬ್ಬರು 10 ಲಕ್ಷ, 8 ಲಕ್ಷ, 5 ಲಕ್ಷ, 3 ಲಕ್ಷ, ಒಂದು ಲಕ್ಷ ಒಟ್ಟು 2.25 ಕೋಟಿ ವೆಚ್ಚದಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಮಾಡಲಾಗಿದೆ. ಎಂಜಿನಿಯವರ್ ಆರ್.ಆರ್.ಕುಮಾರ್ ಅವರು ಕೂಡ ಉಚಿತವಾಗಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಸಹಕಾರ ನೀಡಿದ್ದಾರೆ.
ದೇವಾಲಯ ಜೀರ್ಣೋದ್ಧಾರ ಕಾರ್ಯ ನೇತೃತ್ವ ವಹಿಸಿದ್ದ ಕೊಡ್ಲಿಪೇಟೆ ಕಿರಿಕೊಡ್ಲಿ ಮಠಾೀಧಿಶರಾದ ಶ್ರೀ ಸದಾಶಿವ ಸ್ವಾಮೀಜಿ ಮಾತನಾಡಿ, ದೇವಾಲಯದ ಹಳೆಯ ಕಟ್ಟಡವನ್ನು ತೆರವುಗೊಳಿಸಿ ಹೊಸದಾಗಿ ನೂರು ಅಡಿ ಉದ್ದ ಹಾಗೂ ಐವತ್ತು ಅಡಿ ಅಗಲ ವಿಸ್ತೀರ್ಣದಲ್ಲಿ ದಾನಿಗಳ ಸಹಕಾರದಿಂದ ನೂತನ ದೇವಾಲಯಕ್ಕೆ 2 ಕೋಟಿ ರೂ.ಗೂ ಹೆಚ್ಚಿನ ವೆಚ್ಚದಲ್ಲಿ ಸುಂದರವಾಗಿ ನಿರ್ಮಾಣ ಮಾಡಲಾಗಿದೆ ಎಂದರು.ದೇವಾಲಯ ಕಾರ್ಯಕ್ಕೆ ಸಹಕರಿಸಿದ ಸರ್ವರಿಗೂ ಅವರು ಧನ್ಯವಾದ ಸಲ್ಲಿಸಿದ್ದಾರೆ.
ಜಿಲ್ಲೆಯಲ್ಲಿ ಪವಿತ್ರ ಧಾರ್ಮಿಕ ಕೇಂದ್ರ ಹಾಗೂ ಪ್ರೇಕ್ಷಣೀಯ ಸ್ಥಳವಾಗಿ ಇದು ರೂಪುಗೊಂಡಿದೆ. ಮೂರು ದಿನಗಳ ಕಾಲ ನಡೆಯುವ ವಿವಿಧ ಧಾರ್ಮಿಕ ಕಾರ್ಯಕ್ರಮದಲ್ಲಿ ಅನ್ನ ದಾಸೋಹ ನಡೆಯಲಿದೆ.ಈ ದೇವಾಲಯಕ್ಕೆ ಭೇಟಿ ನೀಡಿದ ಶಾಸಕ ಅಪ್ಪಚ್ಚುರಂಜನ್, ಜಿಲ್ಲಾಧಿಕಾರಿ ಡಾ.ಸತೀಶ್ ಅವರು ದೇವಾಲಯದ ಅಭಿವೃದ್ಧಿಗೆ ಅಗತ್ಯ ಸಹಕಾರ ನೀಡಿದ್ದಾರೆ ಎಂದು ಹೇಳಿದ್ದಾರೆ.
ಕಳೆದ ಜ.26ರಿಂದ 29ರವರೆಗೆ ಶ್ರೀ ಮಂಟಿಗಮ್ಮ ಜೀರ್ಣೋದ್ದಾರ ಹಾಗೂ ಸ್ಥಿರಬಿಂದು ಪ್ರತಿಷ್ಠಾನ ಮಹೋತ್ಸವ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ನೆರವೇರಿಸಲಾಗಿದೆ.
ಅಂಗನವಾಡಿ ಕಾರ್ಯಕರ್ತೆಯರ ಹೋರಾಟಕ್ಕೆ ಮಣಿದ ಸರ್ಕಾರ
ಜ.26ರಂದು ಶುದ್ದಜಲ ಸಂಗ್ರಹಣ ಪೂಜೆ, 27ರಂದು ಶ್ರೀ ಮಂಟಿಗಮ್ಮ ತಾಯಿ ಪ್ರತಿಷ್ಠಾಪನೆ, 28ರಂದು ದುರ್ಗಮಂಡಲ ಪೂಜೆ, 29ರಂದು ನವರತ್ನ ಖಚಿತ, ಪ್ರಾಯಶ್ಚಿತ ಹೋಮ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನೆರವೇರಿದವು.
ರಾಜ್ಯದ ನಾನಾ ಭಾಗಗಳಿಂದ ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ದೇವಿಯ ಕೃಪೆಗೆ ಪಾತ್ರರಾದರು. ಇದೀಗ ಶಿರಂಗಾಲ ಗ್ರಾಮದ ಮಂಟಿಗಮ್ಮ ದೇವಸ್ಥಾನ ಪ್ರಮುಖ ಧಾರ್ಮಿಕ ಕೇಂದ್ರವಾಗಿದ್ದು, ರಾಜ್ಯದ ನಾನಾ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಅಲ್ಲದೆ ವಿಶೇಷ ದಿನಗಳಲ್ಲಿ ವಿಶೇಷ ಪೂಜೆ ಪುನಸ್ಕಾರಗಳು, ಹೋಮಹವನ ನಡೆಯುತ್ತಿದೆ.