Sunday, September 15, 2024
Homeಕ್ರೀಡಾ ಸುದ್ದಿ | Sportsಒಲಿಂಪಿಕ್ಸ್ ಸ್ಟಾರ್ ಮನು ಭಾಕರ್ ಜಾಹೀರಾತು ಸಂಭಾವನೆಯಲ್ಲಿ ಭಾರೀ ಏರಿಕೆ

ಒಲಿಂಪಿಕ್ಸ್ ಸ್ಟಾರ್ ಮನು ಭಾಕರ್ ಜಾಹೀರಾತು ಸಂಭಾವನೆಯಲ್ಲಿ ಭಾರೀ ಏರಿಕೆ

ನವದೆಹಲಿ,ಆ.14– ಪ್ಯಾರಿಸ್ ಒಲಿಂಪಿಕ್ಸ್ ನ ಶೂಟಿಂಗ್ ವಿಭಾಗದಲ್ಲಿ ಅವಳಿ ಕಂಚಿನ ಪದಕ ಗೆದ್ದ ಮನು ಭಾಕರ್ ಅವರ ಜಾಹೀರಾತು ಮೌಲ್ಯದಲ್ಲಿ ಇದೀಗ ಭಾರೀ ಏರಿಕೆ ಕಂಡಿದೆ. ಮನು ಅವರ ಬ್ರ್ಯಾಂಡ್ ಮೌಲ್ಯ ಈಗ 1.5 ಕೋಟಿ ರೂ. ಆಗಿದೆ. ಅವರು ಪ್ರತಿ ಡಿಜಿಟಲ್ ಜಾಹೀರಾತಿಗೂ 30 ಲಕ್ಷ ರೂ. ಸಂಭಾವನೆ ಪಡೆಯಲಿದ್ದಾರೆ ಎನ್ನಲಾಗಿದೆ.

ಪ್ರಮುಖವಾಗಿ ತಂಪು ಪಾನೀಯ, ಸ್ಕಿನ್ ಕೇರ್, ನ್ಯೂಟ್ರೀಷಿಯನ್ ಕಂಪನಿಗಳು ಮನು ಅವರನ್ನು ಸಂಪರ್ಕಿಸಿವೆ ಎಂದು ತಿಳಿದುಬಂದಿದೆ. ಕೆಲ ದಿನಗಳ ಹಿಂದೆ 40 ಕಂಪನಿಗಳು ಮನು ಅವರನ್ನು ಸಂಪರ್ಕಿಸಿದ್ದವು ಎಂದು ವರದಿಯಾಗಿತ್ತು. ಭಾರತ ತಂಡದ ಸ್ಟಾರ್ ಕ್ರಿಕೆಟಿಗರು ಜಾಹೀರಾತು ಒಪ್ಪಂದಗಳಿಗೆ ವಾರ್ಷಿಕ 3 ರಿಂದ 6 ಕೋಟಿ ರೂ. ಪಡೆಯುತ್ತಾರೆ.

ಬ್ಯಾಡಿಂಟನ್ ಆಟಗಾರ್ತಿ ಪಿ.ವಿ.ಸಿಂಧು 2022ರಲ್ಲಿ 2.21 ಕೋಟಿ ರೂ. ಮೊತ್ತದ ಒಪ್ಪಂದ ಪಡೆದಿದ್ದೇ ಭಾರತದಲ್ಲಿ ಕ್ರಿಕೆಟಿಗರ ಹೊರತಾಗಿ ಇತರ ಕ್ರೀಡಾಪಟುಗಳು ಪಡೆದ ಇದುವರೆಗಿನ ಗರಿಷ್ಠ ಮೊತ್ತವಾಗಿದೆ. ಒಲಿಂಪಿಕ್ಸ್ ಪದಕ ಗೆಲ್ಲುವ ಮೊದಲು ಮನು ಪ್ರತಿ ಒಪ್ಪಂದವನ್ನು 20-25 ಲಕ್ಷ ರೂ.ಗೆ ಮಾಡಿಕೊಳ್ಳುತ್ತಿದ್ದರು. ಸದ್ಯ ಮನು ಪಾಮ್ಯಾಕ್‌್ಸ ಆಕ್ಟಿವ್ವೇರ್ಗೆ ಮಾತ್ರ ಪ್ರಚಾರ ರಾಯಭಾರಿಯಾಗಿದ್ದಾರೆ.

ಕೆಲವು ದಿನಗಳ ಹಿಂದಷ್ಟೇ ಮನು ಭಾಕರ್ ಅವರು 12 ಕಂಪನಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ಮುಂದಾಗಿದ್ದರು. ಪದಕ ಸಾಧನೆಯ ಬಳಿಕ ತನ್ನ ಚಿತ್ರಗಳನ್ನು ಬಳಸಿ, ತನಗೆ ಅಭಿನಂದನೆ ಸಲ್ಲಿಸುವ ಜಾಹೀರಾತುಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅನಧಿಕೃತವಾಗಿ ಪ್ರಕಟಿಸಿದ್ದು ಇದಕ್ಕೆ ಕಾರಣ.

ಬ್ರ್ಯಾಂಡ್ಗಳು ತನಗೆ ಪ್ರಾಯೋಜಕತ್ವ ನೀಡಿರದಿದ್ದರೂ ಮತ್ತು ತನ್ನನ್ನು ಪ್ರಚಾರ ರಾಯಭಾರಿಯಾಗಿ ನೇಮಿಸಿಕೊಳ್ಳದಿದ್ದರೂ, ಇದೀಗ ತನ್ನ ಯಶಸ್ಸಿನಲ್ಲಿ ಪಾಲು ಪಡೆಯಲು ಮುಂದಾಗುವ ಮೂಲಕ ಉಚಿತ ಮಾರ್ಕೆಟಿಂಗ್ ಮಾಡಿವೆ ಎಂದು ಮನು ಅವರ ವ್ಯವಹಾರಗಳನ್ನು ನೋಡಿಕೊಳ್ಳುವ ತಂಡ ಆರೋಪಿಸಿ ಕಾನೂನು ನೋಟಿಸ್ ಕಳುಹಿಸಲು ಸಿದ್ಧತೆ ನಡೆಸಿದೆ ಎನ್ನಲಾಗಿದೆ.

ವ್ಯಕ್ತಿಯೊಬ್ಬರಿಗೆ ಪ್ರಾಯೋಜಕತ್ವ ಒಪ್ಪಂದ ನೀಡದೆ ಅವರ ಚಿತ್ರಗಳ ಹಕ್ಕು ಪಡೆದುಕೊಳ್ಳುವಂತಿಲ್ಲ. ಇದು ಭಾರತದಲ್ಲಿ ಕಾನೂನುಬಾಹಿರ ಎನಿಸಿದೆ. ಭಾಕರ್ ಮೂರು ತಿಂಗಳ ವಿರಾಮ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ. ಹೀಗಾಗಿ ಅಕ್ಟೋಬರ್ನಲ್ಲಿ ನಡೆಯಲಿರುವ ಶೂಟಿಂಗ್ ವಿಶ್ವಕಪ್ನಿಂದ ಹೊರಕ್ಕೆ ಉಳಿಯಲಿದ್ದಾರೆ ಎಂದು ಅವರ ಕೋಚ್ ಜಸ್ಪಾಲ್ ರಾಣಾ ಮಾಹಿತಿ ನೀಡಿದ್ದಾರೆ.

ಪ್ಯಾರಿಸ್ ಒಲಿಂಪಿಕ್‌್ಸನಲ್ಲಿ ಮಹಿಳೆಯರ 10 ಮೀಟರ್ ರ್ ಪಿಸ್ತೂಲ್ ಮತ್ತು 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಸ್ಪರ್ಧೆಯಲ್ಲಿ 22 ವರ್ಷದ ಭಾಕರ್ ಅವರು ಎರಡು ಪದಕ ಗೆದ್ದು ಇತಿಹಾಸ ಬರೆದಿದ್ದರು.

RELATED ARTICLES

Latest News