ಉತ್ತರಪ್ರದೇಶ,ಸೆ.25- ವಿವಾಹಿತ ಮಹಿಳೆಗೆ ಬಲವಂತವಾಗಿ ಮದ್ಯ ಕುಡಿಸಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಭಾರಮಂತಿ ಜಿಲ್ಲೆಯಲ್ಲಿ ನಡೆದಿದ್ದು, ಪ್ರಕರಣ ಸಂಬಂಧ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಡೊಸರೈ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿವಾಹಿತ ಮಹಿಳೆಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಐವರ ವಿರುದ್ಧ ಪ್ರಕರಣ ದಾಖಲಾಗಿದೆ.
ಗ್ರಾಮದ ವ್ಯಕ್ತಿಯೊಬ್ಬ ಮಹಿಳೆಗೆ ಆಮಿಷವೊಡ್ಡಿ ಆಕೆಯ ಮೊಬೈಲ್ ನಂಬರ್ ಪಡೆದುಕೊಂಡು ಮಾತನಾಡಲು ಆರಂಭಿಸಿದ್ದಾನೆ. ಸೆ.17ರಂದು ಮನೆಗೆ ಬಂದು ನಿನ್ನ ಪತಿ ಕರೆದುಕೊಂಡು ಬರುವಂತೆ ತಿಳಿಸಿದ್ದಾನೆಂದು ಹೇಳಿ ಮಹಿಳೆಯನ್ನು ಊರಿನಿಂದ ಹೊರಗೆ ಕರೆದೊಯ್ದಿದ್ದಾನೆ.
ಬಳಿಕ ತನ್ನ ನಾಲ್ವರು ಸಹಚರರೊಂದಿಗೆ ಸೇರಿ ಬಲವಂತವಾಗಿ ಮದ್ಯ ಕುಡಿಸಿ ಅತ್ಯಾಚಾರವೆಸಗಿದ್ದಾರೆ. ಪ್ರಜ್ಞೆ ತಪ್ಪಿದಾಗ ಅಲ್ಲಿಯೇ ಆಕೆಯನ್ನು ಬಿಟ್ಟು ಪರಾರಿಯಾಗಿದ್ದಾರೆ.
ಮೊದಲು ಗ್ರಾಮಸ್ಥರಿಗೆ ಹೆದರಿದ್ದ ಮಹಿಳೆ ಮೌನವಾಗಿದ್ದರು. ನಂತರ ಪತಿಗೆ ಸಂಪೂರ್ಣ ವಿಷಯ ತಿಳಿಸಿ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ.
ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಪ್ರಕರಣದ ದಾಖಲಿಸಿಕೊಂಡ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿ ಉಳಿದವರಿಗೆ ಶೋಧ ನಡೆಸಿದ್ದಾರೆ.