ಬೆಂಗಳೂರು,ನ.9- ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ರೀತಿಯ ಚಟುವಟಿಕೆ ನಡೆಸಲು ಸರ್ಕಾರದ ಅನುಮತಿ ಕಡ್ಡಾಯ ಎಂಬ ಆದೇಶ ವಿವಾದ ಸೃಷ್ಟಿಸಿರುವ ಬೆನ್ನಲ್ಲೇ, ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2 ಒಳಗಡೆ ಕೆಲ ಮುಸ್ಲಿಮರು ನಮಾಜ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ಲಾಗಿದೆ.
ಮೆಕ್ಕಾಗೆ ತೆರಳುತ್ತಿದ್ದವರನ್ನು ಬೀಳ್ಕೊಡಲೆಂದು ಕೆಲವು ಮುಸ್ಲಿಮರು ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಈ ವೇಳೆ ಸಾರ್ವಜನಿಕ ಸ್ಥಳದಲ್ಲೇ ಏಕಾಏಕಿ ನಮಾಜ್ ಮಾಡಿದ್ದಾರೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಬಗ್ಗೆ ನೆಟ್ಟಿಗರು ಕೂಡ ಕಿಡಿಕಾರಿದ್ದು, ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ. ಸಾರ್ವಜನಿಕರ ಸ್ಥಳದಲ್ಲಿ ಮುಸ್ಲಿಮರು ಸಾಮೂಹಿಕವಾಗಿ ನಮಾಜ್ ಮಾಡಿದರೂ ವಿಮಾನ ನಿಲ್ದಾಣದ ಏರ್ಪೋಟ್ ಸಿಬ್ಬಂದಿ, ಭದ್ರತಾ ಪಡೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಸುಮನೆ ನಿಂತು ನೋಡಿದ್ದನ್ನು ಕಂಡು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡಿದ್ದಾರೆ.
ಈ ವ್ಯಕ್ತಿಗಳು ಹೆಚ್ಚಿನ ಭದ್ರತೆಯ ವಿಮಾನ ನಿಲ್ದಾಣ ವಲಯದಲ್ಲಿ ನಮಾಜ್ ಮಾಡಲು ಪೂರ್ವಾನುಮತಿ ಪಡೆದಿದ್ದಾರೆಯೇ? ಸಂಬಂಧಿತ ಅಧಿಕಾರಿಗಳಿಂದ ಸೂಕ್ತ ಅನುಮತಿ ಪಡೆದ ನಂತರ ಆರ್‌ಎಸ್‌ಎಸ್ ಪಂಥಸಂಚಲನ ನಡೆಸಿದಾಗ ಸರ್ಕಾರ ಏಕೆ ಆಕ್ಷೇಪಿಸುತ್ತದೆ. ಆದರೆ ನಿರ್ಬಂಧಿತ ಸಾರ್ವಜನಿಕ ಪ್ರದೇಶದಲ್ಲಿ ಅಂತಹ ಚಟುವಟಿಕೆಗಳಿಗೆ ಕಣ್ಣು ಮುಚ್ಚುತ್ತದೆ? ಇದು ಅಂತಹ ಸೂಕ್ಷ್ಮ ವಲಯದಲ್ಲಿ ಗಂಭೀರ ಭದ್ರತಾ ಕಾಳಜಿ ಉಂಟು ಮಾಡುವುದಿಲ್ಲವೇ? ಎಂದು ಕೆಲವರು ಪ್ರಶ್ನಿಸಿದ್ದಾರೆ.
ಏರ್ಪೋಟ್ ಒಳ ಭಾಗದಲ್ಲಿ ಪ್ರಯಾಣಿಕರಿಗೆ ಪ್ರಾರ್ಥನಾ ಕೊಠಡಿಯಿದ್ದರೂ ಹೊರಗಡೆ ನಮಾಜ್ ಮಾಡಿದ್ಯಾಕೆ ಎಂದು ನೆಟ್ಟಿಗರು ಪ್ರಶ್ನೆ ಮಾಡುತ್ತಿದ್ದಾರೆ. ಬಿಜೆಪಿ ಆಕ್ರೋಶ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ನಮಾಜ್ ಮಾಡುವುದನ್ನು ರಾಜ್ಯ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದೆ. ಹೆಚ್ಚಿನ ಭದ್ರತಾ ವಲಯದಲ್ಲಿ ಅಂತಹ ಕೃತ್ಯಕ್ಕೆ ಹೇಗೆ ಅವಕಾಶ ನೀಡಲಾಗಿದೆ ಎಂದು ಪ್ರಶ್ನಿಸಿದೆ.
ಪಕ್ಷದ ವಕ್ತಾರ ವಿಜಯ್ ಪ್ರಸಾದ್, ಅನುಮತಿ ಕೊಟ್ಟವರು ಯಾರು ಎಂಬುದರ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಐಟಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಂದ ಸ್ಪಷ್ಟೀಕರಣ ಕೋರಿದ್ದಾರೆ.
ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ಈ ಘಟನೆ ನಡೆದಿದೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್‌್ಸನಲ್ಲಿ ಪೋಸ್ಟ್ ಮಾಡಿರುವ ವಿಜಯ್ ಪ್ರಸಾದ್,ಈ ವ್ಯಕ್ತಿಗಳು ಹೆಚ್ಚಿನ ಭದ್ರತಾ ವಿಮಾನ ನಿಲ್ದಾಣ ವಲಯದಲ್ಲಿ ನಮಾಜ್ ಮಾಡಲು ಪೂರ್ವಾನುಮತಿ ಪಡೆದಿದ್ದಾರೆಯೇ? ಸಂಬಂಧಪಟ್ಟ ಅಧಿಕಾರಿಗಳಿಂದ ಸೂಕ್ತ ಅನುಮತಿ ಪಡೆದ ನಂತರ ಆರೆಸ್‌ಎಸ್ ಪಥ ಸಂಚಲನ ನಡೆಸಲು ಸರ್ಕಾರ ಏಕೆ ಆಕ್ಷೇಪಿಸುತ್ತದೆ, ಆದರೆ ನಿರ್ಬಂಧಿತ ಸಾರ್ವಜನಿಕ ಪ್ರದೇಶದಲ್ಲಿ ನಮಾಜ್ ನಂತಹ ಚಟುವಟಿಕೆಗಳಿಗೆ ಕಣ್ಣು ಮುಚ್ಚಿ ಕುಳಿತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
