ಚಂಡೀಘಡ ,ಸೆ.18- ಆಕ್ಷೇಪಾರ್ಹ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೆಯಾಗಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪಂಜಾಬ್‍ನ ಖಾಸಗಿ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿಯರು ರಾತ್ರೋರಾತ್ರಿ ಭಾರೀ ಪ್ರತಿಭಟನೆ ನಡೆಸಿದ್ದು, ವಿಷಮ ಪರಿಸ್ಥಿತಿ ನಿರ್ಮಾಣವಾಗಿದೆ.
ಚಂಡೀಘಡ ವಿಶ್ವವಿದ್ಯಾಲಯದಲ್ಲಿ ರಾತ್ರಿ ಈ ಘಟನೆ ವರದಿಯಾಗಿದೆ. ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್‍ನಲ್ಲಿ ಇತರೆ ವಿದ್ಯಾರ್ಥಿನಿಯರು ಸ್ನಾನ ಮಾಡುವಾಗ ವಿಡಿಯೋ ಚಿತ್ರೀಕರಣ ಮಾಡಿದ್ದು, ಅದನ್ನು ಹಿಮಾಚಲ ಪ್ರದೇಶದ ಶಿಮ್ಲಾದ ವ್ಯಕ್ತಿಯೊಬ್ಬರಿಗೆ ರವಾನೆ ಮಾಡಿದ್ದರು. ಆತ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಎನ್ನಲಾಗಿದೆ.
ಹಾಸ್ಟೆಲ್‍ನ ವಿದ್ಯಾರ್ಥಿನಿಯರು ಇಂಟರ್‍ನೆಟ್ ಬಳಕೆ ಮಾಡುವಾಗ ಆಕ್ಷೇಪಾರ್ಹ ವಿಡಿಯೋ ಕಣ್ಣಿಗೆ ಬಿದ್ದಿದೆ. ಇದರಿಂದ ಆತಂಕಕ್ಕೊಳಗಾದ ಕೆಲವು ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ವದಂತಿಗಳು ಹರಡಿದ್ದವು.
ರಾತ್ರೋರಾತ್ರಿ ವಿದ್ಯಾರ್ಥಿನಿಯರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ವಿಡಿಯೋವನ್ನು ಮೊದಲ ಹಂಚಿಕೊಂಡ ಮಹಿಳಾ ವಿದ್ಯಾರ್ಥಿಯನ್ನು ಬಂಸಿದ್ದಾರೆ. ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮೊಹಾಲಿಯ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ವಿವೇಕ್ ಸೋನಿ, ವಿಡಿಯೋ ಚಿತ್ರೀಕರಣ ಮಾಡಿದ ವಿದ್ಯಾರ್ಥಿನಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಆಕೆಯನ್ನು ಬಂಧಿಸಲಾಗಿದೆ.
ಇದನ್ನೂ ಓದಿ : ರಾಹುಲ್ ಗಾಂಧಿಗೆ ಎಐಸಿಸಿ ಪಟ್ಟ ಕಟ್ಟಲುರಾಜಸ್ಥಾನ ಕಾಂಗ್ರೆಸ್ ನಿರ್ಣಯ
ಈ ಘಟನೆಯಲ್ಲಿ ಯಾರೂ ಆತ್ಮಹತ್ಯೆ ಮಾಡಿಕೊಂಡಿಲ್ಲ. ಯಾವುದೇ ಸಾವು ವರದಿಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಫೋರೆನ್ಸಿಕ್‍ಸಾಕ್ಷಿಗಳನ್ನು ಕಲೆ ಹಾಕಲಾಗುತ್ತಿದೆ. ಯಾರೂ ವದಂತಿಗಳಿಗೆ ಕಿವಿಕೊಡಬಾರದು ಎಂದು ಮನವಿ ಮಾಡಿದ್ದಾರೆ.
ಪಂಜಾಬ್‍ನ ಶಾಲಾ ಶಿಕ್ಷಣ ಸಚಿವ ಹರ್‍ಜೋತ್ ಸಿಂಗ್ ಬೈಲ್ಸ್, ವಿದ್ಯಾರ್ಥಿನಿಯರು ಶಾಂತಿ ಪಾಲನೆ ಮಾಡಬೇಕು. ತಪ್ಪಿತಸ್ಥರನ್ನು ಸಹಿಸುವ ಪ್ರಶ್ನೆಯಿಲ್ಲ. ಆತುರಪಡದೆ ತಾಳ್ಮೆಯಿಂದ ವರ್ತಿಸುವಂತೆ ಮನವಿ ಮಾಡಿದ್ದಾರೆ. ಇದು ಅತ್ಯಂತ ಸೂಕ್ಷ್ಮ ವಿಚಾರ. ನಮ್ಮ ಸಹೋದರಿಯರ ಮತ್ತು ಮಕ್ಕಳ ಘನತೆಯ ವಿಚಾರ. ಮಾಧ್ಯಮಗಳು ಕೂಡ ಸಹಕಾರ ನೀಡಬೇಕೆಂದು ಮನವಿ ಮಾಡಿದ್ದಾರೆ.
ಘಟನೆ ಬೆಳಕಿಗೆ ಬರುತ್ತಿದ್ದಂತೆ ಒಬ್ಬ ವಿದ್ಯಾರ್ಥಿನಿ ಕುಸಿದು ಬಿದ್ದಿದ್ದಾಳೆ. ಆಕೆಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಅದರ ಹೊರತಾಗಿ ಬೇರೆ ಯಾವುದೇ ಆತ್ಮಹತ್ಯೆ ಯತ್ನಗಳು ನಡೆದಿಲ್ಲ ಎಂದು ವಿದ್ಯಾರ್ಥಿ ಕಲ್ಯಾಣ ಸಮಿತಿಯ ನಿರ್ದೇಶಕ ಡಾ.ಅರವಿಂದ್ ಸಿಂಗ್ ಕಂಗ್ ತಿಳಿಸಿದ್ದಾರೆ.
ವಾಸ್ತವವಾಗಿ ಈ ರೀತಿಯ ಯಾವುದೇ ವಿಡಿಯೋಗಳು ಸೋರಿಕೆಯಾಗಿಲ್ಲ. ಆದರೂ ವಿದ್ಯಾರ್ಥಿನಿಯರು ಸಮಾಧಾನಗೊಳ್ಳದ ಹಿನ್ನಲೆಯಲ್ಲಿ ಪೆÇಲೀಸರನ್ನು ಕರೆಸಲಾಗಿದೆ. ಸೈಬರ್ ಕ್ರೈಂ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.