ರಾಜ್ಯದಲ್ಲಿ ಭರ್ಜರಿ ಮತದಾನ, ಸಾಲಲ್ಲಿ ನಿಂತು ಮತದಾನ ಮಾಡಿದ ಸೆಲೆಬ್ರೆಟಿಗಳು

ಬೆಂಗಳೂರು,ಏ.26-ರಾಜ್ಯದ ದಕ್ಷಿಣ ಭಾಗದಲ್ಲಿನ 14 ಲೋಕಸಭಾ ಕ್ಷೇತ್ರಗಳಿಗೆ ಇಂದು ಬೆಳಿಗ್ಗೆಯಿಂದಲೇ ಬಿರುಸಿನ ಮತದಾನ ನಡೆದಿದೆ. ಬಿಸಿಲೇರುವ ಮುನ್ನ ಮತದಾನ ಮಾಡಬೇಕು ಎಂಬ ಇರಾದೆಯಲ್ಲಿ ಬಹಳಷ್ಟು ಮಂದಿ ಬೆಳಿಗ್ಗೆ 6 ಗಂಟೆಯಿಂದಲೇ ಮತಗಟ್ಟೆಯ ಮುಂದೆ ಸಾಲುಗಟ್ಟಿ ನಿಂತಿದ್ದು ಕಂಡುಬಂದಿತು. ಹಾಸನದಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ತಮ್ಮ ಪತ್ನಿ ಚೆನ್ನಮ್ಮ ಅವರೊಂದಿಗೆ ಮತಗಟ್ಟೆಗೆ ಬಂದು ಮತ ಚಲಾಯಿಸುವ ಸಂದರ್ಭದಲ್ಲಿ ಚುನಾವಣಾ ಸಿಬ್ಬಂದಿಗಳು ಅವರಿಗೆ ಸಹಾಯ ಮಾಡಿದರು. ಇದೇ ವೇಳೆ ಜೆಡಿಎಸ್‌ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ, ಮಾಜಿ ಸಚಿವ ಎಚ್‌.ಡಿ.ರೇವಣ್ಣ … Continue reading ರಾಜ್ಯದಲ್ಲಿ ಭರ್ಜರಿ ಮತದಾನ, ಸಾಲಲ್ಲಿ ನಿಂತು ಮತದಾನ ಮಾಡಿದ ಸೆಲೆಬ್ರೆಟಿಗಳು