ಜಮ್ಮು,ಜ.2- ಹದಿಮೂರು ವಿದ್ಯಾರ್ಥಿಗಳಿಗೆ ಕೋವಿಡ್-19 ಪಾಸಿಟಿವ್ ಬಂದ ಕಾರಣ ಜಮ್ಮು ಮತ್ತು ಕಾಶ್ಮೀರದ ಶ್ರೀ ಮಾತಾ ವೈಷ್ಣೋದೇವಿ ವಿಶ್ವವಿದ್ಯಾ ನಿಲಯವನ್ನು ಮುಂದಿನ ಆದೇಶದವರೆಗೆ ಬಂದ್ ಮಾಡ ಲಾಗಿದೆ ಎಂದು ರಿಯಾಸಿಯ ಅಧಿಕಾರಿಗಳು ತಿಳಿಸಿದ್ದಾರೆ.
ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ, ಸೋಂಕು ಹರಡದಂತೆ ತಡೆಗಟ್ಟುವ ಸಲು ವಾಗಿ ವಿಶ್ವವಿದ್ಯಾನಿಲಯವನ್ನು ಮುಚ್ಚುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ರಿಯಾಸಿ ಜಿಲ್ಲಾಧಿಕಾರಿ ಚರಣ್‍ದೀಪ್ ಸಿಂಗ್ ನೀಡಿರುವ ಆದೇಶದಿಂದ ತಿಳಿದು ಬಂದಿದೆ.
ಶ್ರೀಮಾತಾ ವೈಷ್ಣೋದೇವಿ ವಿಶ್ವವಿದ್ಯಾನಿಲಯವು ವೈಷ್ಣೋದೇವಿ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳಿಗೆ ಮೂಲ ಶಿಬಿರವಾದ ಕತ್ರಾ ಪಟ್ಟಣದ ಸಮೀಪದ ಕಾಕ್ರಿಯಾಲ್‍ನಲ್ಲಿದೆ.
