ಕಾಂಗ್ರೆಸ್‍ನಿಂದ ಎಂ.ಬಿ.ಪಾಟೀಲ್ ಹೊರಬರಲಿ : ಮಾತೆ ಮಹಾದೇವಿ

Mate-Mahadevi--01
ಬೆಂಗಳೂರು, ಜೂ.13-ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟದಲ್ಲಿ ಭಾಗಿಯಾಗಿರುವುದನ್ನು ಪರಿಗಣಿಸಿ ಎಂ.ಬಿ.ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡದಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್‍ನಿಂದ ಅವರು ಹೊರಬರಲಿ ಎಂದು ಬಸವ ಪೀಠದ ಪೀಠಾಧ್ಯಕ್ಷೆ ಮಾತೆ ಮಹಾದೇವಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಂ.ಬಿ.ಪಾಟೀಲ್ ಅವರು ಜಲಸಂಪನ್ಮೂಲ ಸಚಿವರಾಗಿ ಉತ್ತಮ ಆಡಳಿತ ನಡೆಸಿದ್ದಾರೆ. ಇವರೊಂದಿಗೆ ಸತೀಶ್ ಜಾರಕಿಹೊಳಿ ಅವರು ಸಹ ಉತ್ತಮ ಜನಪ್ರತಿನಿಧಿ ಎನಿಸಿಕೊಂಡಿದ್ದಾರೆ. ಆದರೆ ಮೊದಲ ಹಂತದಲ್ಲಿ ಇವರಿಬ್ಬರಿಗೂ ಸಚಿವ ಸ್ಥಾನ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತ ಪಡಿಸಿದರು.

ಎಮ್.ಬಿ.ಪಾಟೀಲ್ ಅವರು ಪ್ರತ್ಯೇಕಲಿಂಗಾಯತ ಧರ್ಮದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದದ್ದನ್ನು ಪರಿಗಣಿಸಿ ಅವರಿಗೆ ಸಚಿವ ಸ್ಥಾನವನ್ನು ನಿರಾಕರಿಸಲಾಗಿದೆ ಎಂಬ ಅನುಮಾನ ವ್ಯಕ್ತವಾಗಿದೆ ಎಂದು ತಿಳಿಸಿದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ಕೇಂದ್ರಕ್ಕೆ ಶಿಫಾರಸ್ಸು ಮಾಡಿದರು. ಆದರೆ ಕೇಂದ್ರ ಸರ್ಕಾರ ಆ ಶಿಫಾರಸ್ಸನ್ನು ವಾಪಾಸ್ಸು ಕಳುಹಿಸಿದೆ ಎಂದರು. ಇದೆ 17ರಂದು ಮೈಸೂರು ಹೆದ್ದಾರಿಯ ಕುಂಬಳಗೂಡಿನ ಸಮೀಪ ಇರುವ ಬಸವ ಗಂಗೋತ್ರಿಯಲ್ಲಿ 9ನೇಯ ಬಸವ ಉತ್ಸವವನ್ನು ಬೆಳಗ್ಗೆ 10.30ಕ್ಕೆ ಏರ್ಪಡಿಸಲಾಗಿದ್ದು, ಇಲ್ಲಿ 111 ಅಡಿ ಎತ್ತರದ ಬಸವ ಪುತ್ತಳಿಯು ನಿರ್ಮಾಣವಾಗಲಿದೆ. ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಹಾಗೂ ಮಹಾರಾಷ್ಟ್ರ, ತೆಲಂಗಾಣ, ಆಂಧ್ರ, ದೆಹಲಿ ಮುಂತಾದ ಕಡೆಯಿಂದ ಜನರು ಆಗಮಿಸಲಿದ್ದಾರೆ.್ದ

Sri Raghav

Admin