ಬೆಂಗಳೂರು, ಜ.13- ಮಟ್ಕಾ ಜೂಜಾಟದಲ್ಲಿ ತೊಡಗಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿ 1.6 ಲಕ್ಷ ರೂ. ಹಣ ವಶಪಡಿಸಿಕೊಂಡಿದ್ದಾರೆ.
ವಿವಿ ಪುರಂ:
ಇಲ್ಲಿನ ಪಾರ್ವತಿ ಪುರಂ ಪ್ರವೇಶ ದ್ವಾರ ರಸ್ತೆಯ ಪುಟ್ಪಾತ್ನಲ್ಲಿ ವ್ಯಕ್ತಿಯೊಬ್ಬ ಸಾರ್ವಜನಿಕರಿಂದ ಹಣವನ್ನು ಪಣವಾಗಿ ಕಟ್ಟಿಸಿಕೊಂಡು ಮಟ್ಕ ಜೂಜಾಟ ಆಡಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಸ್ಥಳಕ್ಕೆ ತೆರಳಿ ಆತನನ್ನು ಬಂಧಿಸಿ 55450 ರೂ. ಹಣ ಹಾಗೂ ಜೂಜಾಟಕ್ಕೆ ಬಳಸಿದ ಇತರ ವಸ್ತುಗಳನ್ನು ವಶಪಡಿಸಿಕೊಂಡಿರುತ್ತಾರೆ. ಆರೋಪಿ ವಿರುದ್ಧ ವಿವಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ತನಿಖೆ ಮುಂದುವರೆದಿದೆ.
ಮಹಾರಾಷ್ಟ್ರದ ನಾಸಿಕ್ ಬಳಿ ಭೀಕರ ಅಪಘಾತ, 10 ಮಂದಿ ಸಾವು
ಡಿಜೆ ಹಳ್ಳಿ:
ಡಿಜೆ ಹಳ್ಳಿಯ ಮಸೀದಿ ಸ್ಟ್ರೀಟ್ ಒಂದನೇ ಕ್ರಾಸ್, ಬಿಎಸ್ಕೆ ರಸ್ತೆಯ ಫುಟ್ಪಾತ್ನಲ್ಲಿ ವ್ಯಕ್ತಿಯೊಬ್ಬ ಸಾರ್ವಜನಿಕರಿಗೆ ಹಣವನ್ನು ಪಣವಾಗಿ ಕಟ್ಟಿಸಿಕೊಂಡು ಮಟ್ಕಾ ಜೂಜಾಟ ಆಡಿಸುತ್ತಿರುವ ಬಗ್ಗೆ ಸಿಸಿಬಿ ಪೊಲೀಸರಿಗೆ ಮಾಹಿತಿ ಲಭಿಸಿದೆ. ತಕ್ಷಣ ಸಿಸಿಬಿ ಅಕಾರಿಗಳ ತಂಡ ದಾಳಿ ಮಾಡಿ ಆತನನ್ನು ಬಂಸಿ 51260 ರೂ. ನಗದು ಹಾಗೂ ಜೂಜಾಟಕ್ಕೆ ಬಳಸಿದ ಇತರೆ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿರುತ್ತಾರೆ.
ಆರೋಪಿ ವಿರುದ್ಧ ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ತನಿಖೆ ಮುಂದುವರೆದಿದೆ. ಈ ಎರಡು ಕಾರ್ಯಾಚರಣೆಯನ್ನು ಕೇಂದ್ರ ಅಪರಾಧ ವಿಭಾಗದ ವಿಶೇಷ ವಿಚಾರಣಾ ದಳದ ಅಧಿಕಾರಿಗಳು ಮತ್ತು ಸಿಬ್ಬಂದಿ ಯಶಸ್ವಿಯಾಗಿ ನಡೆಸಿರುತ್ತಾರೆ.
Matka, Gambling, Two, arrested,