ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ

Social Share

ಹೊಸದಿಲ್ಲಿ, ಸೆ.1 (ಪಿಟಿಐ)- ಇಲ್ಲಿನ ಸಫ್ದರ್‍ಜಂಗ್ ಆಸ್ಪತ್ರೆಯ ಅಂತಿಮ ವರ್ಷದ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ದೆಹಲಿಯ ನಿವಾಸಿಯಾಗಿರುವ ವಿದ್ಯಾರ್ಥಿನಿ ಸಫ್ದರ್‍ಜಂಗ್ ಆಸ್ಪತ್ರೆಯ ಎಂಬಿಬಿಎಸ್ ಬಾಲಕಿಯರ ಹಾಸ್ಟೆಲ್‍ನಲ್ಲಿದ್ದುಕೊಂಡು ಎಂಬಿಬಿಸ್ ಇಂಟರ್ನ್‍ಶಿಪ್ ಮಾಡುತ್ತಿದ್ದರು. ಇಂದು ಮುಂಜಾನೆ ಆಕೆ ಹಾಸ್ಟೆಲ್‍ನ ಕೊಠಡಿಯಲ್ಲಿ ಸ್ಕಾರ್ಫ್‍ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಉಪ ಆಯುಕ್ತ (ನೈಋತ್ಯ) ಮನೋಜ್ ಸಿ ತಿಳಿಸಿದ್ದಾರೆ.

ಕೋಣೆಗೆ ಒಳಗಿನಿಂದ ಬೀಗ ಹಾಕಲಾಗಿತ್ತು ಮತ್ತು ಅದನ್ನು ಆಕೆಯ ಸ್ನೇಹಿತರು ಬಲವಂತವಾಗಿ ತೆರೆದರು.ವಿದ್ಯಾರ್ಥಿನಿಯನ್ನು ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗಕ್ಕೆ ಕರೆದೊಯ್ದರು, ಅಲ್ಲಿಗೆ ಬರುವಷ್ಟರಲ್ಲಿ ಆಕೆ ಮೃತಪಟ್ಟಿದ್ದಾಳೆ ಎಂದು ಘೋಷಿಸಲಾಯಿತು. ಮೃತರ ಡೈರಿಯಲ್ಲಿ ಕೈಬರಹದ ಸೂಸೈಡ್ ನೋಟ್ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಠಡಿಯೊಳಗೆ ಖಿನ್ನತೆ-ಶಮನಕಾರಿ ಔಷಧದ ಎರಡು ಖಾಲಿ ಪ್ಯಾಕೆಟ್ಗಳು ಪತ್ತೆಯಾಗಿವೆ. ಆಕೆಯ ಸ್ನೇಹಿತರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದ್ದು, ಯಾವುದೇ ಅಕ್ರಮ ನಡೆದಿರುವ ಶಂಕೆ ಇಲ್ಲ ಎಂದು ಅವರು ತಿಳಿಸಿದ್ದಾರೆ.
ಮೃತರ ಕುಟುಂಬಸ್ಥರು ಕೂಡ ಸ್ಥಳಕ್ಕೆ ಆಗಮಿಸಿದ್ದು, ಅವರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗುತ್ತಿದೆ. ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ

Articles You Might Like

Share This Article