Sunday, July 21, 2024
Homeರಾಷ್ಟ್ರೀಯದೇಶದ 2ನೇ ಅತಿದೊಡ್ಡ ಕ್ರಿಕೆಟ್‌ ಸ್ಟೇಡಿಯಂ ನಿರ್ಮಾಣಕ್ಕೆ ಮುಂದಾದ ಮುಂಬೈ ಕ್ರಿಕೆಟ್‌ ಅಸೋಸಿಯೇಷನ್‌

ದೇಶದ 2ನೇ ಅತಿದೊಡ್ಡ ಕ್ರಿಕೆಟ್‌ ಸ್ಟೇಡಿಯಂ ನಿರ್ಮಾಣಕ್ಕೆ ಮುಂದಾದ ಮುಂಬೈ ಕ್ರಿಕೆಟ್‌ ಅಸೋಸಿಯೇಷನ್‌

ಮುಂಬೈ,ಜು.8- ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಅಮಾನೆ ಗ್ರಾಮದಲ್ಲಿ ದೇಶದಲ್ಲೇ 2ನೇ ಅತಿದೊಡ್ಡ ಕ್ರಿಕೆಟ್‌ ಸ್ಟೇಡಿಯಂ ನಿರ್ಮಿಸಲು ಮುಂಬೈ ಕ್ರಿಕೆಟ್‌ ಅಸೋಸಿಯೇಷನ್‌ ಮುಂದಾಗಿದೆ.

ಮುಂಬೈ ಕ್ರಿಕೆಟ್‌ ಅಸೋಸಿಯೇಷನ್‌ 1 ಲಕ್ಷ ಆಸನಗಳ ಸಾಮರ್ಥ್ಯದ ಕ್ರಿಕೆಟ್‌ ಸ್ಟೇಡಿಯಂ ನಿರ್ಮಿಸಲು ಎದುರು ನೋಡುತ್ತಿದೆ. ಥಾಣೆ ಜಿಲ್ಲೆಯಿಂದ ಸುಮಾರು 26 ಕಿ.ಮೀ. ಹಾಗೂ ವಾಂಖೆಡೆ ಕ್ರೀಡಾಂಗಣದಿಂದ 68 ಕಿ.ಮೀ. ದೂರದಲ್ಲಿರುವ ಅಮಾನೆ ಗ್ರಾಮದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಸಿದ್ಧತೆ ನಡೆದಿದೆ. ಈಗಾಗಲೇ ಸ್ಟೇಡಿಯಂ ನಿರ್ಮಾಣಕ್ಕೆ ಅಗತ್ಯವಿರುವ 50 ಎಕೆರೆ ಭೂಪ್ರದೇಶ ಸ್ವಾಧೀನಕ್ಕೆ ಮಹಾರಾಷ್ಟ್ರ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದಿಂದ ಟೆಂಡರ್‌ಭರ್ತಿಯಾಗಿದ್ದು, ಸರ್ಕಾರದ ಅನುಮೋದನೆಗಾಗಿ ಕಾಯುತ್ತಿದೆ ಎಂದು ತಿಳಿದುಬಂದಿದೆ.

ಟಿ-20 ವಿಶ್ವಕಪ್‌ ವಿಜೇತ ತಂಡದ ಭಾಗವಾಗಿರುವ ನಾಲ್ವರು ಆಟಗಾರರ ಅಭಿನಂದನಾ ಸಮಾರಂಭದಲ್ಲಿ ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಡ್ನವೀಸ್‌‍ ಈ ಬಗ್ಗೆ ಮಾತನಾಡಿದ್ದರು. ಅತ್ಯಾಧುನಿಕ ಹಾಗೂ ಬೃಹತ್‌ ಕ್ರಿಕೆಟ್‌ ಸ್ಟೇಡಿಯಂ ನಿರ್ಮಿಸಲು ಪರಿಗಣಿಸುವಂತೆ ಸಿಎಂ ಏಕನಾಥ್‌ ಶಿಂಧೆ ಅವರಿಗೆ ಮನವಿ ಮಾಡಿದ್ದೇವೆ. ಮುಂಬೈನಲ್ಲಿ 1 ಆಸನಗಳ ಸಾಮರ್ಥ್ಯದ ಕ್ರೀಡಾಂಗಣದ ಅವಶ್ಯಕತೆಯಿದೆ ಎಂದು ಹೇಳಿರುವುದಾಗಿ ತಿಳಿಸಿದ್ದಾರೆ.

ಮುಂಬೈನಲ್ಲಿ ಬೃಹತ್‌ ಕ್ರೀಡಾಂಗಣ ನಿರ್ಮಿಸಬೇಕು ಎಂಬುದು ಎಂಸಿಎ ಮಾಜಿ ಅಧ್ಯಕ್ಷ ಅಮೋಲ್‌ ಕಾಳೆ ಅವರ ಕನಸಿನ ಯೋಜನೆಯಾಗಿತ್ತು. ಅವರ ನೆನಪಿನಾರ್ಥವಾಗಿ ಕ್ರೀಡಾಂಗಣ ನಿರ್ಮಾಣವಾಗಬೇಕು ಎಂದು ಹೇಳಿದ್ದರು.

ಸದ್ಯ ಅಹಮದಾಬಾದ್‌ನ ಮೊಟೇರಾದಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣ 1.32 ಲಕ್ಷ ಆಸನಗಳ ಸಾಮರ್ಥ್ಯ ಹೊಂದಿದ್ದು, ದೇಶದ ಅತಿದೊಡ್ಡ ಕ್ರೀಡಾಂಗಣ ಎನಿಸಿಕೊಂಡಿದೆ.

RELATED ARTICLES

Latest News