Saturday, July 27, 2024
Homeರಾಜ್ಯಬೆಂಗಳೂರಲ್ಲಿ ಮಳೆ ಅನಾಹುತಗಳನ್ನು ಸರಿಪಡಿಸಲು ಕ್ರಮ : ಡಿಸಿಎಂ ಡಿಕೆಶಿ

ಬೆಂಗಳೂರಲ್ಲಿ ಮಳೆ ಅನಾಹುತಗಳನ್ನು ಸರಿಪಡಿಸಲು ಕ್ರಮ : ಡಿಸಿಎಂ ಡಿಕೆಶಿ

ಬೆಂಗಳೂರು, ಜೂ.3- ನಗರದಲ್ಲಿ ಮಳೆ ಅನಾಹುತಗಳನ್ನು ಸರಿಪಡಿಸಲು ಕ್ರಮ ಕೈಗೊಳ್ಳುವುದಾಗಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆ ಇನ್ನೂ ಹೆಚ್ಚು ಬರಲಿ ಎಂದು ನಾನು ಪ್ರಾರ್ಥಿಸುತ್ತೇನೆ, ಅದರಿಂದಾಗಿರುವ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಸ್ಥಳಕ್ಕೆ ಭೇಟಿ ನೀಡಿ ಜನರ ಸಮಸ್ಯೆಗೆ ಸ್ಪಂದಿಸುವಂತೆ ಆದೇಶಿಸಲಾಗಿದೆ ಎಂದರು.

ತಾವು ಸ್ವಕ್ಷೇತ್ರ ಕನಕಪುರಕ್ಕೆ ಭೇಟಿ ನೀಡಿ ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಭಾಗವಹಿಸಿ ಮರಳಿ ಬರುತ್ತೇನೆ. ಅನಂತರ ಸಂಜೆ ಅಧಿಕಾರಿಗಳ ಜೊತೆ ಸಭೆ ನಡೆಸಲಾಗುವುದು ಎಂದು ಹೇಳಿದರು.

ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಸುರಿದ ಮಳೆಯಿಂದ ಬಹಳಷ್ಟು ಅನಾಹುತಗಳಾಗಿದ್ದು, ಹಲವೆಡೆ ಮರಗಳು ಬಿದ್ದಿದ್ದು ಸಮಸ್ಯೆಗಳಾಗಿವೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಅವರು, ಮಳೆಬಾಧಿತ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವುದಾಗಿ ಭರವಸೆ ನೀಡಿದರು.

RELATED ARTICLES

Latest News