ಬೆಂಗಳೂರು,ಫೆ.28-ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ನಾಳೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ನಿಷೇಸಲಾಗಿದೆ.ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರುವುದನ್ನು ಸಂಪೂರ್ಣವಾಗಿ ನಿಷೇಸಲಾಗಿದೆ ಎಂದು ಜಂಟಿ ನಿರ್ದೇಶಕರು (ಪಶುಪಾಲನಾ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
