Sunday, March 9, 2025
Homeರಾಜ್ಯಮಾನ್ಯತೆ ಹೊಂದಿರುವ ಪತ್ರಕರ್ತರಿಗೆ ಮಾಧ್ಯಮ ಸಂಜೀವಿನಿ ಯೋಜನೆ ಘೋಷಣೆ

ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ ಮಾಧ್ಯಮ ಸಂಜೀವಿನಿ ಯೋಜನೆ ಘೋಷಣೆ

Media Sanjeevini scheme announced for accredited journalists

ಬೆಂಗಳೂರು, ಮಾ.7-ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ ಮಾಧ್ಯಮ ಸಂಜೀವಿನಿ ಯೋಜನೆಯನ್ನು ಘೋಷಣೆ ಮಾಡಿದ್ದಾರೆ.

ವಿಧಾನಸೌಧದಲ್ಲಿ 2025-26ನೇ ಸಾಲಿನ ಬಜೆಟ್ ಮಂಡಿಸಿದ ಅವರು, ಮಾಧ್ಯಮ ಮಾನ್ಯತೆ ಹೊಂದಿರುವ ಒಟ್ಟು 2500 ಪತ್ರಕರ್ತರು ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರಿಗೆ 5 ಲಕ್ಷದವರೆಗೆ ನಗದು ರಹಿತ ಚಿಕಿತ್ಸೆಗಾಗಿ ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ ಯೋಜನೆಯನ್ನು ಅನುಷ್ಠಾನ ಮಾಡುವುದಾಗಿ ಪ್ರಕಟಿಸಿದರು.

ಇದೇ ರೀತಿ ಸಂಕಷ್ಟದಲ್ಲಿರುವ ಪತ್ರಕರ್ತರಿಗೆ ನೀಡುತ್ತಿರುವ 12 ಸಾವಿರ ರೂ. ಮಾಶಾಸನವನ್ನು 15 ಸಾವಿರ ರೂ.ಗಳಿಗೆ ಹಾಗೂ ಕುಟುಂಬದ ಮಾಶಾಸನವನ್ನು 6 ಸಾವಿರದಿಂದ 7 ಸಾವಿರ ರೂ.ಗಳಿಗೆ ಹೆಚ್ಚಿಸುವುದಾಗಿ ಪ್ರಕಟಿಸಿದ್ದಾರೆ.

RELATED ARTICLES

Latest News