ಬೆಂಗಳೂರು,ಜ.31- ಪ್ರಸಕ್ತ ಸಾಲಿನ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಪದವಿ ಕೋರ್ಸ್ ಶುಲ್ಕ ಹೆಚ್ಚಳವಾಗಲಿದೆ ಎಂಬ ಗೊಂದಲಗಳಿಗೆ ತೆರೆ ಎಳೆದಿರುವ ಸರ್ಕಾರ ಯಾವುದೇ ಶುಲ್ಕ ಹೆಚ್ಚಳ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ. 5 ತಿಂಗಳ ಮಗುವಿನ ತುರ್ತು ಹೃದಯ ಶಸ್ತ್ರಚಿಕಿತ್ಸೆಗೆ ಸಹಾಯ ಮಾಡಿ ನೀಟ್ ಕೌನ್ಸಲಿಂಗ್ ನಡುವೆಯೇ ವೈದ್ಯಕೀಯ ಪದವಿ ಮತ್ತು ದಂತ ವೈದ್ಯಕೀಯ ಪದವಿ ಕೋರ್ಸ್‍ಗಳ ಶುಲ್ಕ ಹೆಚ್ಚಳ ಮಾಡಿ, ಶುಲ್ಕ ಹೆಚ್ಚಳ ಮಾಡುವಂತೆ ಖಾಸಗಿ ಕಾಲೇಜುಗಳು ಹಾಕಿರುವ ಒತ್ತಡಕ್ಕೆ ಮಣಿದು ಸರ್ಕಾರ ಶುಲ್ಕ ಹೆಚ್ಚಳ ಮಾಡುತ್ತಿದೆ ಎಂಬ ಮಾತು ಕೇಳಿ ಬರುತ್ತಿತ್ತು.
ಈ ಗೊಂದಲದ ನಡುವೆ ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಸಕ್ತ ಸಾಲಿನ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಪ್ರಸಕ್ತ ಸಾಲಿನ ಶುಲ್ಕದ ವಿವರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ರವಾನಿಸಿದೆ. ಜತೆಗೆ ಈ ಶುಲ್ಕದ ವಿವರಗಳನ್ನು ಅಧಿಕೃತ ವೆಬ್‍ನಲ್ಲಿ ಪ್ರಕಟಿಸಲಾಗಿದ್ದು, ಯಾವುದೇ ಶುಲ್ಕ ಹೆಚ್ಚಳಕ್ಕೆ ಅವಕಾಶ ಮಾಡಿಲ್ಲ.
ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಕಟಿಸಿರುವ ಶುಲ್ಕದ ಪ್ರಕಾರ, ಖಾಸಗಿ ಕಾಲೇಜುಗಳಲ್ಲಿ ಲಭ್ಯವಿರುವ ಸರ್ಕಾರಿ ಎಂಬಿಬಿಎಸ್ ಕೋರ್ಸ್‍ಗೆ ವರ್ಷಕ್ಕೆ 1,28, 746 ರೂ. ನಿಗದಿ ಮಾಡಲಾಗಿದೆ. ಸರ್ಕಾರಿ ಮೆಡಿಕಲ್ ಕಾಲೇಜಿನ ಪ್ರವೇಶ ಶುಲ್ಕ 59,800 ರೂ. ನಿಗದಿ ಮಾಡಲಾಗಿದೆ. ಅದೇ ರೀತಿ ದಂತ ವೈದ್ಯಕೀಯ ಸರ್ಕಾರಿ ಕೋಟಾದಡಿ ಖಾಸಗಿ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗೆ ವಾರ್ಷಿಕ 83,356 ರೂ. ನಿಗದಿ ಪಡಿಸಲಾಗಿದೆ.
ಕಳೆದ ವರ್ಷವೇ ಸರ್ಕಾರಿ ಕೋಟಾದ ಸೀಟುಗಳ ಶುಲ್ಕದಲ್ಲಿ ಶೇ.30ರಷ್ಟು ಹೆಚ್ಚಳ ಮಾಡುವಂತೆ ಖಾಸಗಿ ಕಾಲೇಜು ಆಡಳಿತ ಮಂಡಳಿಗಳು ಸರ್ಕಾರವನ್ನು ಒತ್ತಾಯಿಸಿದ್ದವು.ಕೋವಿಡ್ ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ ಹಳೇ ಶುಲ್ಕ ಪದ್ಧತಿಯನ್ನು ಮುಂದುವರೆಸುವ ನಿಟ್ಟಿನಲ್ಲಿ ಖಾಸಗಿ ವೈದ್ಯಕೀಯ ಕಾಲೇಜು ಆಡಳಿತ ಮಂಡಳಿಗಳನ್ನು ಸರ್ಕಾರ ಮನವೊಲಿಸಿತ್ತು.
ಇದರ ಬೆನ್ನಲ್ಲೇ ಯುಜಿ ನೀಟ್ 2021ನೇ ಸಾಲಿನ ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸ್‍ಗಳಿಗೆ ಜ. 29ರಿಂದ ಕೌನ್ಸಲಿಂಗ್ ಪ್ರಾರಂಭಿಸಿದ್ದು, ಫೆ.7ಕ್ಕೆ ಮುಕ್ತಾಯವಾಗಲಿದೆ.
