ರ‍್ಯಾಗಿಂಗ್ ಪಿಡುಗಿಗೆ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿನಿ ಬಲಿ

Social Share

ಹೈದರಾಬಾದ್,ಫೆ.27- ರ‍್ಯಾಗಿಂಗ್ ನಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಕಾಕತೀಯ ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ಸ್ನಾತಕೋತ್ತರ ವೈದ್ಯಕೀಯ ಅಭ್ಯಾಸ ಮಾಡುತ್ತಿದ್ದ 26 ವರ್ಷದ ಡಿ. ಪ್ರೀತಿ ಸಾವಿಗೀಡಾಗಿರುವ ನತದೃಷ್ಟೆ.

ಕಾಲೇಜಿನ ಸಿನಿಯರ್ಸ್ ಸ್ಟೂಡೆಂಟ್ಸ್‍ನಿಂದ ರ‍್ಯಾಗಿಂಗ್‍ಗೆ ಒಳಗಾಗಿದ್ದ ಪ್ರೀತಿ ಎಂಜಿಎಂ ಆಸ್ಪತ್ರೆಯಲ್ಲಿ ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಪ್ರೀತಿ ಕೆಲ ಸಮಯದ ನಂತರ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.
ತಕ್ಷಣ ಅವರನ್ನು ಹೈದ್ರಾಬಾದ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಆಕೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ತಡರಾತ್ರಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಸ್ರೇಲ್‍ನಲ್ಲಿ ನಾಪತ್ತೆಯಾಗಿದ್ದ ಕೇರಳದ ರೈತ ಭಾರತಕ್ಕೆ ವಾಪಸ್

ಆಕೆಯ ತಂದೆ ನೀಡಿದ ದೂರಿನ ಮೇರೆಗೆ, ಎರಡನೇ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿನಿ ಮೊಹಮ್ಮದ್ ಅಲಿ ಸೈಫ್ ಅವರನ್ನು ಪೊಲೀಸರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ, ರ‍್ಯಾಗಿಂಗ್, ಆತ್ಮಹತ್ಯೆಗೆ ಪ್ರಚೋದನೆ ಮತ್ತು ಕಿರುಕುಳದ ಆರೋಪದ ಮೇಲೆ ಬಂಧಿಸಿ ಮುಂದಿನ ಕ್ರಮ ಜರುಗಿಸಿದ್ದಾರೆ.

ಮೃತ ಪ್ರೀತಿ ಅವರಿಗೆ ಆರೋಪಿ ಸೈಫ್ ರ‍್ಯಾಗಿಂಗ್ ಮಾಡಿರುವುದು ವಾಟ್ಸಾಫ್ ಚಾಟ್‍ನಲ್ಲಿ ಬಹಿರಂಗಗೊಂಡಿದೆ ಎಂದು ವಾರಂಗಲ್ ಪೊಲೀಸ್ ಆಯುಕ್ತ ರಂಗನಾಥ್ ತಿಳಿಸಿದ್ದಾರೆ.

ಪಾಲಾರ್ ನಲ್ಲಿ ಎಲ್ಲೆಮೀರಿದ ಶೋಷಣೆ

ಹಿರಿಯ ವಿದ್ಯಾರ್ಥಿಯ ವಿರುದ್ಧ ಕಾಲೇಜು ಮತ್ತು ಆಸ್ಪತ್ರೆ ಅಧಿಕಾರಿಗಳಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ವಿದ್ಯಾರ್ಥಿಯ ತಂದೆ ನರೇಂದ್ರ ಆರೋಪಿಸಿದ್ದಾರೆ.

Medicalstudent, #Preethi, #attempted, #suicide, #harassment,

Articles You Might Like

Share This Article