ಮುಂಬೈ, ಮಾ.23- ಪಂಜಾಬ್ ನ್ಯಾಷನಲ್ ಬ್ಯಾಂಕ್ ಸಾಲ ಹಗರಣದಲ್ಲಿ ಪ್ರಮುಖ ಆರೋಪಿಯಾದ ದೇಶ ಭ್ರಷ್ಟ ವಜ್ರೋದ್ಯಮಿ ಮೆಹುಲ್ ಚೋಕ್ಸಿ ಬೆಲ್ಜಿಯಂ ಆಂಟೈರ್ಪ್‌ನಲ್ಲಿ ಪತ್ನಿ ಪ್ರೀತಿ ಚೋಕ್ಸಿಯೊಂದಿಗೆ ವಾಸಿಸುತ್ತಿದ್ದಾರೆ. ಅವರನ್ನು ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಲು ಭಾರತೀಯ ಅಧಿಕಾರಿಗಳು ಬೆಲ್ಟಿಯಂ ಅಧಿಕಾರಿಗಳನ್ನ ಸಂಪರ್ಕಿಸಿದ್ದಾರೆ.
ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ 13,850 ಕೋಟಿ ರೂ. ವಂಚಿಸಿದ ಆರೋಪದ ಮೇಲೆ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ)ಕ್ಕೆ ಪ್ರಮುಖವಾಗಿ ಬೇಕಾಗಿರುವ ಚೋಕ್ಸಿ ಸದ್ಯ ಕೆರಿಬಿಯನ್ ದ್ವೀಪ ರಾಷ್ಟ್ರವಾದ ಆಂಟಿಗುವಾ ಮತ್ತು ಬಾರ್ಬುಡಾದಲ್ಲಿ ವಾಸಿಸುತ್ತಿದ್ದಾರೆ.
ವೈದ್ಯಕೀಯ ಚಿಕಿಯತ್ಸೆಗಾಗಿ ತೆರಳಿದ್ದ ಚೋಕ್ಸಿ ದ್ವೀಪರಾಷ್ಟ್ರದ ಪ್ರಜೆಯಾಗಿ ಉಳಿದಿದ್ದಾರೆ ಎಂದು ಅಲ್ಲಿನ ಸಚಿವ ಇಪಿ ಚೆಟ್ ಗ್ರೀನ್ ಇತ್ತೀಚೆಗೆ ತಿಳಿಸಿದ್ದಾರೆ ಎಂದು ಸುದ್ದಿಷಂಸ್ಥೆಯೊಂದು ವರದಿ ಮಾಡಿದೆ. 65 ವರ್ಷದ ಚೋಕ್ಸಿ 2023ರ ನವೆಂಬರ್ 15ರಿಂದ ಎಫ್ – ರೆಸಿಡೆನ್ಸಿ ಪೌರತ್ವ ಕಾರ್ಡ್ ಪಡೆದು ಬೆಲ್ಲಿಯಂನಲ್ಲಿ ಕಾನೂನುಬದ್ದವಾಗಿ ವಾಸಿಸುತ್ತಿದ್ದಾರೆ.
ಅವರ ಪತ್ನಿ ಬೆಳ್ಳಿಯಂ ನವರೇ ಆದ್ದರಿಂದ ಪೌರತ್ವ ಕಾರ್ಡ್ ಪಡೆಯಲು ಚೋಕ್ಸಿಗೆ ಸಹಕಾರ ನೀಡಿದ್ದಾರೆ. ಈ ನಡುವೆ ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳೋದಕ್ಕೆ ಚೋಕ್ಸಿ ನಕಲಿ ದಾಖಲೆಗಳನ್ನ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
ಸದ್ಯ ಚೋಕ್ಸಿ ಭಾರತದ ಪೌರತ್ವವನ್ನೂ ತ್ಯಜಿಸಿಲ್ಲ. ಒಂದು ವೇಳೆ ತಾತ್ಕಾಲಿಕವಾಗಿ ಪಡೆದಿರುವ ಬೆಲ್ಲಿಯಂ ಪೌರತ್ವವನ್ನು ಶಾಶ್ವತವಾಗಿ ಪರಿವರ್ತಿಸಿದ್ರೆ, ಮುಂದೆ ಆತ ಯುರೋಪಿಯನ್ ರಾಷ್ಟ್ರಗಳಲ್ಲಿ ಸ್ವತಂತ್ರವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಟ್ಟಂತಾಗುತ್ತದೆ. ಬಳಿಕ ಆತನನ್ನು ಕರೆತರಲು ಭಾರತಕ್ಕೆ ಕಷ್ಟವಾಗಬಹುದು ಎನ್ನಲಾಗಿದೆ. ಈ ನಡುವೆ ಚೋಕ್ಸಿ ಕ್ಯಾನ್ಸರ್ ಚಿಕಿತ್ಸೆಗಾಗಿ ಸ್ವಿಟ್ಸರ್ಲೆಂಡ್‌ಗೆ ತೆರಳುವ ಯೋಜನೆಯಲ್ಲಿದ್ದಾರೆ. ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದ ಪ್ರಮುಖ ಆರೋಪಿಯಾದ ಚೋಕ್ಸಿ 2018ರಲ್ಲಿ ಭಾರತದಿಂದ ಫಲಾಯನ ಮಾಡಿದ್ದರು.