ಕಾಂಗ್ರೆಸ್ ನಾಯಕರಿಗೆ ನಾಯಕರಿಗೆ ಸಿಎಂ ಮನವಿ ಪತ್ರ

Social Share

ಬೆಂಗಳೂರು, ಜ.7- ಮೇಕೆದಾಟು ಯೋಜನೆ ಅನುಷ್ಠಾನಗೊಳಿಸಲು ಸರ್ಕಾರ ಬದ್ಧವಾಗಿದ್ದು, ತಕ್ಷಣವೇ ಪಾದಯಾತ್ರೆ ಕೈಬಿಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರತಿಪಕ್ಷ ಕಾಂಗ್ರೆಸ್ ನಾಯಕರಿಗೆ ಮನವಿ ಮಾಡಿದ್ದಾರೆ. ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಪ್ರತ್ಯೇಕ ಪತ್ರ ಬರೆದಿರುವ ಬೊಮ್ಮಾಯಿ ಅವರು ಮೇಕೆದಾಟು ಯೋಜನೆಯನ್ನು ನಿಮ್ಮೆಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅನುಷ್ಠಾನ ಮಾಡಲು ಸಿದ್ಧನಿದ್ದೇನೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಕೋವಿಡ್ ಮೂರನೆ ಅಲೆ ತೀವ್ರವಾಗಿ ಅಪ್ಪಳಿಸುತ್ತಿದ್ದು, ವಿಶೇಷವಾಗಿ ಮಕ್ಕಳ ಮೇಲೆ ದುಷ್ಪರಿಣಾಮ ಬೀರಿದೆ. ಈ ಸಂದರ್ಭದಲ್ಲಿ ಹೆಚ್ಚು ಜನರನ್ನು ಸೇರಿಸಿ ಪಾದಯಾತ್ರೆ ಮಾಡುವುದು ಸರಿಯಲ್ಲ ಎಂದು ಕಿವಿಮಾತು ಹೇಳಿದ್ದಾರೆ.
ಸಾರ್ವಜನಿಕರ ಹಿತದೃಷ್ಟಿ ಮತ್ತು ನ್ಯಾಯಾಲಯ ಕೂಡ ಈ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಕೂಡಲೇ ನೀವೆಲ್ಲರೂ ಪಾದಯಾತ್ರೆ ಕೈಬಿಡಬೇಕು ಎಂದು ಮನವಿ ಮಾಡಿದ್ದಾರೆ. ನಾವೆಲ್ಲರೂ ಈಗ ಕೊರೊನಾ ಎದುರಿಸಿ ಮುಂಬರುವ ದಿನಗಳಲ್ಲಿ ಮೇಕೆದಾಟು ಯೋಜನೆ ಅನುಷ್ಠಾನ ಕುರಿತು ಒಟ್ಟಾಗಿ ಚರ್ಚಿಸಿ ತೀರ್ಮಾನಿಸೋಣ ಎಂದು ಹೇಳಿದ್ದಾರೆ.
ಸ್ಪಂದಿಸಿದ ವಿಪಕ್ಷ: ಸಿಎಂ ಪತ್ರ ಬರೆಯುತ್ತಿದ್ದಂತೆಯೇ ಕಾಂಗ್ರೆಸ್ ನಾಯಕರು ಪಾದಯಾತ್ರೆಯನ್ನು ನಿಲ್ಲಿಸಿದ್ದಾರೆ. ಜನರ ಆರೋಗ್ಯದ ಬಗ್ಗೆ ಸಿಎಂ ಕಾಳಜಿ ತೊರಬೇಕೆಂದು ಮನವಿ ಮೇರೆಗೆ ಒಟ್ಟಾಗಿ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

Articles You Might Like

Share This Article