ನಗಾರಿ ಬಾರಿಸಿ ಮೇಕೆದಾಟು ಪಾದಯಾತ್ರೆಗೆ ಅದ್ದೂರಿ ಚಾಲನೆ

Social Share

ಬೆಂಗಳೂರು, ಜ.9- ಮೇಕೆದಾಟು ಯೋಜನೆಯ ಶೀಘ್ರ ಅನುಷ್ಠಾನಕ್ಕೆ ಒತ್ತಾಯಿಸಿ ಆರಂಭವಾದ ಪಾದಯಾತ್ರೆಗೆ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಗಾರಿ ಬಾರಿಸುವ ಮೂಲಕ ಚಾಲನೆ ನೀಡಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜೊತೆಯಲ್ಲಿದ್ದರು.
ಆದಿಚುಂಚನಗಿರಿ ಕ್ಷೇತ್ರದ ರಾಮನಗರ ಶಾಖಾಮಠದ ಶ್ರೀ ಅನ್ನದಾನೇಶ್ವೆರ ಸ್ವಾಮೀಜಿ, ಕನಕಪುರ ಮರಳಗವಿ ಮಠದ ಶಿವರುದ್ರ ಸ್ವಾಮಜೀ, ದೇಗುಲಮಠದ ಶ್ರೀನಿರ್ವಾಣ ಸ್ವಾಮಿಜಿ, ಹಾರುಬಲೆ ಚರ್ಚ್‍ನ ಪಾದ್ರಿ ಸೇರಿ ಅನೇಕ ಧಾರ್ಮಿಕ ನಾಯಕರ ಸಾನಿಧ್ಯದಲ್ಲಿ ನಗಾರಿ ಬಾರಿಸಿ, ಗಿಡಗಳಿಗೆ ನೀರು ಎರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಸಂಸದ ಡಿ.ಕೆ.ಸುರೇಶ್ ಕಾರ್ಯಕ್ರಮದಲ್ಲಿ ಪ್ರಸ್ತಾವಿಕ ಮಾತುಗಳನ್ನಾಡಿ, 30 ವರ್ಷಗಳಿಂದಲೂ ಮೇಕೆದಾಟು ಯೋಜನೆ ಬೇಡಿಕೆ ಕೇಳಿ ಬಂದಿದೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಯೋಜನೆ ರೂಪರೇಷೆ ರಚನೆಯಾಯಿತು. ಕೇಂದ್ರದಿಂದ ವಾಪಸ್ ಬಂದಿದ್ದ ಯೋಜನೆ ಪ್ರಸ್ತಾವನೆಯನ್ನು ಡಿ.ಕೆ.ಶಿವಕುಮಾರ್ ಸಚಿವರಾಗಿದ್ದಾಗ ಮತ್ತೆ ಕೇಂದ್ರಕ್ಕೆ ಕಳುಹಿಸಿ ಅನುಮತಿ ಪಡೆಯಲಾಯಿತು.
ಯೋಜನೆಯಿಂದ ಹಾನಿಗೊಳಗಾಗುವ ಅರಣ್ಯ ಪ್ರದೇಶಕ್ಕೆ ಪರ್ಯಾಯವಾಗಿ ಮಂಡ್ಯ, ರಾಮನಗರ, ಚಾಮರಾಜನಗರ ಜಿ¯್ಲÉಗಳಲ್ಲಿ 10 ಸಾವಿರ ಎಕರೆಯನ್ನು ಗುರುತಿಸಲಾಗಿದೆ ಎಂದು ಕೇಂದ್ರ ಅರಣ್ಯ ಇಲಾಖೆಗೆ ತಿಳಿಸಲಾಗಿದೆ. ಆದರೂ ಈವರೆಗೂ ಯೋಜನೆ ಆರಂಭವಾಗಿಲ್ಲ. ಯೋಜನೆ ಶುರುವಾಗಬೇಕು ಎಂದು ಆಗ್ರಹಿಸಲು ಸಂಗಮದಿಂದ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದವರೆಗೂ 156 ಕಿಲೋ ಮೀಟರ್ ಪಾದಯಾತ್ರೆ ಆರಂಭವಾಗಿದೆ ಎಂದು ಹೇಳಿದರು.
ಚಿತ್ರರಂಗದ ಉಮಾಶ್ರೀ, ದುನಿಯಾ ವಿಜಯï, ಸಾಧುಕೋಕಿಲ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸಲೀಂ ಅಹಮದ್, ರಾಮಲಿಂಗಾರೆಡ್ಡಿ, ಧೃವನಾರಾಯಣï, ಶಾಸಕರಾದ ಎಂ.ಬಿ.ಪಾಟೀಲï, ಡಾ.ಜಿ.ಪರಮೇಶ್ವರ್, ಆರ್.ವಿ.ದೇಶಪಾಂಡೆ, ಕೆ.ಆರ್.ರಮೇಶ್ ಕುಮಾರ್, ಎಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್, ಅಲ್ಲಂ ವೀರಭದ್ರಪ್ಪ, ಬಿ.ಕೆ.ಹರಿಪ್ರಸಾದ್, ಲಕ್ಷ್ಮಿ ಹೆಬ್ಬಾಳ್ಕರ್, ರೂಪಾ ಶಶಿಧರ್, ಅಕ್ಕೈ ಪದ್ಮಸಾಲಿ, ಯು.ಬಿ.ವೆಂಕಟೇಶ್, ಎಸ್.ರವಿ, ನಾಗೇಂದ್ರ, ಇ.ತುಕಾರಾಂ, ನಾರಾಯಣಸ್ವಾಮಿ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ರಾಜ್ಯಸಭೆ ಸದಸ್ಯರಾದ ಜಿ.ಸಿ.ಚಂದ್ರಶೇಖರ್, ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್, ಪ್ರಮುಖರಾದ ಟಿ.ಬಿ.ಜಯಚಂದ್ರ, ಚಲುವರಾಯಸ್ವಾಮಿ, ಎಚ್.ಸಿ.ಮಹದೇವಪ್ಪ, ಶಿವಶಂಕರರೆಡ್ಡಿ, ಕೆ.ಎಚ್.ಮುನಿಯಪ್ಪ, ಪಿ.ಟಿ.ಪರಮೇಶ್ವರ್ ನಾಯಕ್, ಪಿ.ಜಿ.ಆರ್.ಸಿಂಧ್ಯಾ, ಬಿ.ಎಲ್.ಶಂಕರ್, ಎಚ್.ಎಂ.ರೇವಣ್ಣ, ಮೋಟಮ್ಮ, ಸಚ್ಚಿನ್ ಮಿಗಾ, ಪುಷ್ಪಾ ಅಮರ್‍ನಾಥ್ ಸೇರಿ ಅನೇಕರು ಭಾಗವಹಿಸಿದ್ದರು.

Articles You Might Like

Share This Article