ನವದೆಹಲಿ,ಜು.26- ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಮೇಕೆದಾಟು ಯೋಜನೆ ಸಂಬಂಧ ಸುಪ್ರೀಂಕೋರ್ಟ್ ಅರ್ಜಿ ವಿಚಾರಣೆಯನ್ನು ಆಗಸ್ಟ್ 10ಕ್ಕೆ ಮುಂದೂಡಿದೆ.ವಿಸ್ತೃತ ಯೋಜನಾ ವರದಿ(ಡಿಪಿಆರ್) ಕುರಿತಾಗಿ ಕಾವೇರಿ ಜಲ ನಿರ್ವಹಣಾ ಪ್ರಾಕಾರದಲ್ಲಿ ಯಾವುದೇ ರೀತಿಯ ಚರ್ಚೆ ನಡೆಸಬಾರದು ಎಂದು ಸುಪ್ರೀಂಕೋರ್ಟ್ ಸೂಚನೆ ನೀಡಿತು.
ಮೇಕೆದಾಟು ಸಮತೋಲನ ಜಲಾಶಯ ನಿರ್ಮಾಣಕ್ಕೆ ಸಂಬಂಸಿದಂತೆ ಕರ್ನಾಟಕ ಸರ್ಕಾರದ ಡಿಪಿಆರ್ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸದಂತೆ ನಿರ್ದೇಶನ ನೀಡಬೇಕೆಂಬ ತಮಿಳುನಾಡು ಸರ್ಕಾರದ ಅರ್ಜಿಯನ್ನು ಸುಪ್ರೀಂಕೋರ್ಟ್ ಮನ್ನಿಸಿ ಮುಂದಿನ ಅರ್ಜಿ ವಿಚಾರಣೆಯನ್ನು ಆ.10ಕ್ಕೆ ಮುಂದೂಡಿತು.
ಇಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎ.ಎಂ.ಖನ್ವಿಲ್ಕರ್ , ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ವೋಕಾ, ಹಾಗೂ ನ್ಯಾಯಮೂರ್ತಿ ಜೆ.ಬಿ.ಪರ್ದಿವಾಲಾ ಅವರಿದ್ದ ತ್ರಿಸದಸ್ಯ ಪೀಠ ವಿಚಾರಣೆಯನ್ನು ಮುಂದೂಡಲು ಸೂಚಿಸಿದೆ.ಸುಪ್ರೀಂಕೋರ್ಟ್ಗೆ ತಮಿಳುನಾಡು ಸರ್ಕಾರದ ತಕರಾರಿಗೆ ಉತ್ತರ ನೀಡಲು ಸಮಯ ಅವಕಾಶ ನೀಡಬೇಕೆಂದು ಪ್ರಾಕಾರದ ಪರ ವಕೀಲರು ನ್ಯಾಯಾೀಶರಿಗೆ ಮನವಿ ಮಾಡಿಕೊಂಡರು.
ಇದಕ್ಕೆ ಸಮ್ಮತಿಸಿದ ಪೀಠ ಎರಡು ವಾರಗಳ ಕಾಲ ಅರ್ಜಿಯನ್ನು ಮುಂದೂಡಿದೆ.ಕಾವೇರಿ ಜಲ ನಿರ್ವಹಣಾ ಪ್ರಾಕಾರವು ಡಿಪಿಆರ್ ಬಗ್ಗೆ ಅಭಿಪ್ರಾಯ ನೀಡಬಾರದೆಂದು ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.ಕಳೆದ ವಾರ ವಿಚಾರಣೆ ನಡೆಸಿದ್ದ ನ್ಯಾಯಾಲಯಕ್ಕೆ ಪ್ರಾಕಾರಕ್ಕೆ ನೋಟಿಸ್ ಜಾರಿ ಮಾಡಿ ಅಭಿಪ್ರಾಯವನ್ನು ಕೋರಿತ್ತು.
ತಮಿಳುನಾಡಿನ ಪರವಾಗಿ ವಾದ ಮಾಡಿದ್ದ ಹಿರಿಯ ವಕೀಲ ಮುಕುಲ್ ರೋಹಟಗಿ ಅವರು ಕರ್ನಾಟಕದ ಈ ಯೋಜನೆಯಿಂದ ತಮಿಳುನಾಡು ರೈತರ ಹಿತಕ್ಕೆ ಹಾನಿಯಾಗಲಿದೆ ಎಂದು ವಾದಿಸಿದ್ದರು. ಆದರೆ ಈ ವಾದವನ್ನು ಕರ್ನಾಟಕ ಪರ ಹಿರಿಯ ವಕೀಲ ಶ್ಯಾಂ ದಿವಾನ್ ವಿರೋಸಿದ್ದರು.
ಮೇಕೆದಾಟು ಯೋಜನೆಗೆ ಸಂಬಂಸಿದಂತೆ ಕೇಂದ್ರೀಯ ಜಲ ಮಂಡಳಿಯು ಕರ್ನಾಟಕದ ಈ ಯೋಜನೆಯನ್ನು ತಿರಸ್ಕರಿಸಬೇಕು ಎಂಬುದು ಸೇರಿದಂತೆ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್ಗೆ ಹಲವು ಅರ್ಜಿಗಳನ್ನು ಸಲ್ಲಿಸಿದೆ. ಈ ಅರ್ಜಿಯ ಸಂಬಂಧ ಕರ್ನಾಟಕ ಸರ್ಕಾರ ಕಳೆದ ಬುಧವಾರ ತನ್ನ ಅಭಿಪ್ರಾಯವನ್ನು ದಾಖಲಿಸಿತ್ತು. ಇದೇ ವೇಳೆ ಹೆಚ್ಚಿನ ಮಾಹಿತಿ ಸಲ್ಲಿಸಲು ತಮಿಳುನಾಡು ಸಮಯ ಕೇಳಿತ್ತು.