Saturday, October 5, 2024
Homeರಾಷ್ಟ್ರೀಯ | Nationalರಿಯಾಸಿ ಉಗ್ರರ ದಾಳಿ ಪ್ರಕರಣ ಎನ್‌ಐಎಗೆ ಹಸ್ತಾಂತರ

ರಿಯಾಸಿ ಉಗ್ರರ ದಾಳಿ ಪ್ರಕರಣ ಎನ್‌ಐಎಗೆ ಹಸ್ತಾಂತರ

ಶ್ರೀನಗರ,ಜೂ.17- ಜಮ್ಮು ಕಶ್ಮೀರದ ರಿಯಾಸಿಯಲ್ಲಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್‌‍ನ ಮೇಲೆ ಜೂ.9ರಂದು ನಡೆದ ದಾಳಿಯ ತನಿಖೆಯನ್ನು ಕೇಂದ್ರ ಸರ್ಕಾರವು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ)ಗೆ ಹಸ್ತಾಂತರಿಸಿದೆ.

ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿದ್ದು, 42 ಮಂದಿ ಗಾಯಗೊಂಡಿದ್ದರು. ನಿನ್ನೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ನೇತೃತ್ವದಲ್ಲಿ ನಡೆದ ಉನ್ನತಮಟ್ಟದ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದರಲ್ಲಿ ಅವರು ಭಯೋತ್ಪಾದನೆ ವಿರುದ್ಧ ಕಾಶೀರ ಕಣಿವೆಯಲ್ಲಿ ಸಾಧಿಸಿದ ಯಶಸ್ಸನ್ನು ಪುನರಾವರ್ತಿಸಲು ಸೇನೆ, ಅರೆಸೇನಾ ಪಡೆಗಳು ಮತ್ತು ಗುಪ್ತಚರ ಸಂಸ್ಥೆಗಳಿಗೆ ನಿರ್ದೇಶನ ನೀಡಿದರು. ಜಮು ಮತ್ತು ಕಾಶೀರ ಪೊಲೀಸರಿಂದ ತನಿಖೆ ವಹಿಸಿಕೊಂಡ ನಂತರ ಫೆಡರಲ್‌ ಏಜೆನ್ಸಿ ತನ್ನದೇ ಆದ ಪ್ರಥಮ ಮಾಹಿತಿ ವರದಿಯನ್ನು (ಎಫ್‌ಐಆರ್) ದಾಖಲಿಸಿದೆ ಎಂದು ತಿಳಿದುಬಂದಿದೆ.

ಶಿವ ಖೋರಿ ದೇವಸ್ಥಾನದಿಂದ ಕತ್ರದ ಮಾತಾ ವೈಷ್ಣೋ ದೇವಿ ದೇಗುಲಕ್ಕೆ ತೆರಳುತ್ತಿದ್ದ 53 ಆಸನಗಳ ಬಸ್‌‍ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಜೂನ್‌ನಲ್ಲಿ ಪೋನಿ ಪ್ರದೇಶದ ತೇರ್ಯತ್‌ ಗ್ರಾಮದ ಬಳಿ ರಸ್ತೆಯಿಂದ ಆಚೆಬಿದ್ದು ಆಳವಾದ ಕಂದರಕ್ಕೆ ಬಿದ್ದಿತ್ತು.

ಬಸ್‌‍ ಉತ್ತರ ಪ್ರದೇಶ, ರಾಜಸ್ಥಾನ ಮತ್ತು ದೆಹಲಿಯಿಂದ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿತ್ತು. ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿದ್ದು, 42 ಮಂದಿ ಗಾಯಗೊಂಡಿದ್ದಾರೆ.ಕಥುವಾ ಮತ್ತು ದೋಡಾದಲ್ಲಿ ಕಳೆದ ವಾರ ಭಯೋತ್ಪಾದಕರು ಸತತವಾಗಿ ಮೂರು ದಾಳಿ ನಡೆದಿರುವುದು ಆತಂಕಕ್ಕೀಡು ಮಾಡಿದೆ.

ಪೊಲೀಸರು ಕಳೆದ ಒಂದು ವಾರದಲ್ಲಿ ಭಯೋತ್ಪಾದಕರನ್ನು ಬೆಂಬಲಿಸಿದವರು ಸೇರಿದಂತೆ ಹಲವರನ್ನು ವಿಚಾರಣೆ ನಡೆಸಿದ್ದಾರೆ. ಸ್ಥಳೀಯ ಗುಪ್ತಚರ ಜಾಲಗಳನ್ನು ಬಲಪಡಿಸಲು, ಭಯೋತ್ಪಾದಕರು ಬಳಸುವ ಸುರಂಗಗಳನ್ನು ಪತ್ತೆಹಚ್ಚಲು ಮತ್ತು ಡ್ರೋನ್‌ ಒಳನುಸುಳುವಿಕೆಯನ್ನು ಎದುರಿಸಲು ಆಧುನಿಕ ತಂತ್ರಜ್ಞಾನವನ್ನು ಬಳಸುವ ಪ್ರಾಮುಖ್ಯತೆಯನ್ನು ಗೃಹ ಸಚಿವರು ಒತ್ತಿ ಹೇಳಿದರು.

ಭದ್ರತಾ ಪಡೆಗಳು ಮತ್ತು ಗುಪ್ತಚರ ಸಂಸ್ಥೆಗಳು ಮಿಷನ್‌ ಮೋಡ್‌ ಮತ್ತು ಸುವ್ಯವಸ್ಥಿತ ಸಮನ್ವಯದಲ್ಲಿ ಕೆಲಸ ಮಾಡಬೇಕಾಗಿದೆ ಎಂದು ಒತ್ತಿ ಹೇಳಿದರು.

RELATED ARTICLES

Latest News