Saturday, September 21, 2024
Homeಬೆಂಗಳೂರುಬೆಂಗಳೂರಿನ ಬೀದಿ ನಾಯಿಗಳಿಗೆ ಮೈಕ್ರೋಚಿಪ್‌ ಅಳವಡಿಕೆ ಪ್ರಯೋಗ

ಬೆಂಗಳೂರಿನ ಬೀದಿ ನಾಯಿಗಳಿಗೆ ಮೈಕ್ರೋಚಿಪ್‌ ಅಳವಡಿಕೆ ಪ್ರಯೋಗ

Mico chip implantation trial for stray dogs in Bangalore

ಬೆಂಗಳೂರು,ಸೆ.21– ಪಶ್ಚಿಮ ವಲಯದ ಮತ್ತಿಕೆರೆ ಮತ್ತು ಮಲ್ಲೇಶ್ವರಂ ಬಿಬಿಎಂಪಿ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಪ್ರಾಯೋಗಿಕವಾಗಿ ಮೈಕೋ ಚಿಪ್‌ ಅಳವಡಿಕೆ ಮಾಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದು ಬಿಬಿಎಂಪಿ ಆರೋಗ್ಯ ಹಾಗೂ ಪಶುಪಾಲನಾ ವಿಭಾಗದ ವಿಶೇಷ ಆಯುಕ್ತ ಸುರಳ್ಕರ್‌ ವಿಕಾಸ್‌‍ ಕಿಶೋರ್‌ ತಿಳಿಸಿದರು.

ನಗರದ ಪಶ್ಚಿಮ ವಲಯದ ಮತ್ತಿಕೆರೆ ಹಾಗೂ ಮಲ್ಲೇಶ್ವರಂ ವ್ಯಾಪ್ತಿಯಲ್ಲಿನ ಬೀದಿ ನಾಯಿಗಳಿಗೆ ಮೈಕೋ ಚಿಪ್‌ ಅನ್ನು ಪ್ರಾಯೋಗಿಕವಾಗಿ ಅಳವಡಿಸಲಾಗುತ್ತಿದ್ದು, ಮೈಕೋ ಚಿಪ್‌ ತಂತ್ರಜ್ಞಾನದಿಂದ ನಾಯಿಯ ವಾಸಸ್ಥಳ, ಲಸಿಕೆ ನೀಡಿದ ದಿನಾಂಕ, ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿದ ದಿನಾಂಕ ಹಾಗೂ ಇನ್ನಿತರ ಅಂಶಗಳನ್ನು ಶಾಶ್ವತವಾಗಿ ಅದರಲ್ಲಿ ಶೇಖರೀಡಿಸಬಹುದಾಗಿರುತ್ತದೆ.

ಮೈಕೋ ಚಿಪ್ ತಂತ್ರಜ್ಞಾನವನ್ನು ಈಗಾಗಲೇ ಹಲವಾರು ಸ್ಥಳೀಯ ಸಂಸ್ಥೆಗಳು ಬೀದಿ ನಾಯಿಗಳಿಗೆ ಅಳವಡಿಸಿಕೊಂಡಿದ್ದು, ಪಾಲಿಕೆ ವ್ಯಾಪ್ತಿಯಲ್ಲಿ BIZ ORBIT ಎಂಬ ಸಂಸ್ಥೆಯ ಸಹಯೋಗದೊಂದಿಗೆ ಪ್ರಾಯೋಗಿಕವಾಗಿ ಬೀದಿ ನಾಯಿಗಳಿಗೆ ಅಳವಡಿಕೆ ಮಾಡಲಾಗುತ್ತಿದೆ.

ಅಕ್ಕಿಕಾಳು ಗಾತ್ರದ ಮೈಕೋ ಚಿಪ್‌ ಅಳವಡಿಕೆ :
ಮೈಕೋಚಿಪ್‌ ಒಂದು ಅಕ್ಕಿಕಾಳು ಗಾತ್ರದ ಸಾಧನವಾಗಿದ್ದು, ಪ್ರಾಣಿಗಳಲ್ಲಿ ಶಾಶ್ವತ ಗುರುತಿನ ವಿಧಾನವಾಗಿರುತ್ತದೆ. ಇದನ್ನು ಪ್ರಾಣಿಗಳ ಚರ್ಮದ ಕೆಳಗೆ ಇಂಜೆಕ್ಷನ್‌ ಮೂಲಕ ಇರಿಸಲಾಗುವುದು. ಇದರಿಂದ ಯಾವುದೇ ರೀತಿಯ ಅಡ್ಡ ಪರಿಣಾಮ ಬೀರುವುದಿಲ್ಲ ಮತ್ತು ಇದು ಪ್ರಾಣಿಗಳ ಜೀವನ ಪರ್ಯಂತ ಶಾಶ್ವತ ಗುರುತಾಗಿ ಬಳಸಬಹುದಾಗಿರುತ್ತದೆ. ಇದು ಪ್ರಪಂಚದಾದ್ಯಂತ ಬಳಸಲಾಗುವ ಯೂನಿಕ್‌ ಸಂಖ್ಯೆಯಾಗಿರುತ್ತದೆ.

ಯಶಸ್ವಿಯಾದರೆ ಇತರೆೆ ವಲಯಗಳಲ್ಲೂ ಅಳವಡಿಕೆ :
ಪ್ರಾಯೋಗಿಕ ಮೈಕೋ ಚಿಪ್‌ ಅಳವಡಿಸುವ ಕಾರ್ಯ ಯಶಸ್ವಿಯಾದರೆ, ಅದನ್ನು ಪಾಲಿಕೆಯ ಎಲ್ಲಾ ವಲಯ ಗಳಲ್ಲಿಯೂ ಬೀದಿ ನಾಯಿಗಳಿಗೆ ಅಳವಡಿಸಲು ಸೂಕ್ತ ಕ್ರಮ ಕೈಗೊಳ್ಳ ಲಾಗುವುದು. ಪಾಲಿಕೆ ವತಿಯಿಂದ ಬೀದಿ ನಾಯಿಗಳಿಗೆ ಸಂಯೋಜಿತ ಲಸಿಕಾ ಕಾರ್ಯಕ್ರಮ ಹಮಿಕೊಳ್ಳಲು ಉದ್ದೇಶಿಸಿದ್ದು, ಮೈಕೋ ಚಿಪ್‌ ಅಳವಡಿಸುವ ತಂತ್ರಜ್ಞಾನದಿಂದ ಬೀದಿ ನಾಯಿಗಳಿಗೆ ಮತ್ತೆ-ಮತ್ತೆ ಲಸಿಕೆ ಹಾಕುವುದನ್ನು ತಡೆಯಬಹುದಾಗಿರುತ್ತದೆ.

ಪ್ರಸ್ತುತ ಬಣ್ಣ ಬಳಸಿ ಗುರುತಿಸಲಾಗುತ್ತಿದೆ :
ಪಾಲಿಕೆ ವ್ಯಾಪ್ತಿಯಲ್ಲಿ ಪ್ರಸ್ತುತ ಲಸಿಕೆ ಹಾಕಿದ ಬೀದಿನಾಯಿಗಳಿಗೆ ಬಣ್ಣವನ್ನು ಬಳಸಿ ಗುರುತಿಸಲಾಗುತ್ತಿದ್ದು, ಒಂದು ವಾರ ಮಾತ್ರ ಬಣ್ಣದ ಗುರುತು ಪತ್ತೆ ಹಚ್ಚಬಹುದಾಗಿರುತ್ತದೆ. ಆದುದರಿಂದ ಬೀದಿನಾಯಿಗಳಿಗೆ ಪದೇ ಪದೇ ಲಸಿಕೆ ಹಾಕುವ ಸಾಧ್ಯತೆಯಿರುತ್ತದೆ. ಮೈಕೋ ಚಿಪ್‌ ತಂತ್ರಜ್ಞಾನದಿಂದ ಈ ನ್ಯೂನತೆಯನ್ನು ಸರಿಪಡಿಸಬಹುದಾಗಿರುತ್ತದೆ ಹಾಗು ನಾಯಿಗಳಲ್ಲಿ ಲಸಿಕೆ ಹಾಕಿರುವ ಮಾಹಿತಿಯನ್ನು ನಿಖರವಾಗಿ ತಿಳಿಯಬಹುದಾಗಿರುತ್ತದೆ.

ಪಾಲಿಕೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಮೈಕೋ ಚಿಪ್‌ ಅಳವಡಿಸುವ ಕಾರ್ಯದಿಂದ, ಬೀದಿ ನಾಯಿಗಳ ನಿಖರವಾದ ಮಾಹಿತಿಯನ್ನು ಪಡೆಯಬಹುದಾಗಿದೆ. ಅಲ್ಲದೆ ಬೀದಿ ನಾಯಿಗಳಿಗೆ ಮತ್ತೆಮತ್ತೆ ಲಸಿಕೆ ಹಾಕುವುದನ್ನು ತಡೆಯಬಹುದಾಗಿರುತ್ತದೆ.

RELATED ARTICLES

Latest News