ಸರ್ಕಾರಿ ಶಾಲಾ ಮಕ್ಕಳಿಗೆ ಬಿಸಿಯೂಟ ಸಿಗೋದು ಡೌಟ್..!

Social Share

ಬೆಂಗಳೂರು,ಆ.16- ಇಂದಿನಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಬಿಸಿಯೂಟ ಸಿಗೋದು ಡೌಟ್..! ಯಾಕೆ ಅಂತೀರಾ.. ಬಿಸಿಯೂಟ ಕಾರ್ಯಕರ್ತೆ ಯರು ಇಂದಿನಿಂದ ತಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ಹಾದಿ ಹಿಡಿದಿರುವುದರಿಂದ ಶಾಲಾ ಮಕ್ಕಳಿಗೆ ಬಿಸಿಯೂಟ ಸಿಗುವ ಸಾಧ್ಯತೆಗಳಿಲ್ಲ.

ಇದುವರೆಗೂ ಬಿಸಿಯೂಟ ಕಾರ್ಯಕರ್ತೆಯರಾಗಿ ಸೇವೆ ಸಲ್ಲಿಸಿಕೊಂಡು ಬರುತ್ತಿದ್ದ 60 ವರ್ಷ ಮೇಲ್ಪಟ್ಟ ಕಾರ್ಯಕರ್ತೆಯರನ್ನು ಸೇವೆಯಿಂದ ತೆಗೆದುಹಾಕಿರುವ ಸರ್ಕಾರದ ಕ್ರಮ ಖಂಡಿಸಿ ಇಂದಿನಿಂದ ಬಿಸಿಯೂಟ ಕಾರ್ಯಕರ್ತೆಯರು ಪ್ರತಿಭಟನೆ ಹಾದಿ ಹಿಡಿದಿದ್ದಾರೆ.

ಇದುವರೆಗೂ ಸುಮಾರು 6500ಕ್ಕೂ ಹೆಚ್ಚು ಕಾರ್ಯಕರ್ತೆಯರನ್ನು ಕೆಲಸದಿಂದ ವಜಾ ಮಾಡಿರುವುದರಿಂದ ಇಂದಿನಿಂದ ರಾಜ್ಯಾದ್ಯಂತ ಬಿಸಿಯೂಟ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದರ ಜೊತೆಗೆ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿರುವ ಬಿಸಿಯೂಟ ಕಾರ್ಯಕರ್ತೆಯರು ಫ್ರೀಡಂ ಪಾರ್ಕ್‍ನಲ್ಲಿ ಅರ್ನಿಧಿಷ್ಟಾವಧಿ ಪ್ರತಿಭಟನೆ ಮಾಡಲು ನಿರ್ಧರಿಸಿದ್ದಾರೆ.

ರಾಜ್ಯದಲ್ಲಿ 50 ಲಕ್ಷ ಬಡ, ರೈತ, ಕೃಷಿ ಕಾರ್ಮಿಕರು ಹಾಗೂ ದಿನ ದಲಿತರ ಮಕ್ಕಳಿಗೆ ದಿನನಿತ್ಯ ಬಿಸಿ ಆಹಾರ ತಯಾರಿಸಿ ನೀಡುತ್ತಿರುವ ಬಿಸಿಯೂಟ ಕಾರ್ಯಕರ್ತೆಯರಿಗೆ ಈ ಕೆಲಸ ಆಧಾರ ಇಂತಹ ತಾಯಂದಿರಿಗೆ ವಂತಿಗೆ ಆಧಾರಿತ ನಿವೃತ್ತಿ ವೇತನ ನಿಗದಿಪಡಿಸಬೇಕು ಎಂದು ನಾವು ಹೋರಾಟ ನಡೆಸುತ್ತಿದ್ದರೂ ಸರ್ಕಾರ ನಮ್ಮ ಬೇಡಿಕೆ ಈಡೇರಿಸದೆ 60 ವರ್ಷದ ಗಡಿ ದಾಟಿರುವ 6500 ಕಾರ್ಯಕರ್ತೆಯರನ್ನು ಸೇವೆಯಿಂದ ತೆಗೆದು ಹಾಕಿದೆ.

ಸುಪ್ರೀಂ ಕೋರ್ಟ್ ತೀರ್ಪಿನ ಆಧಾರದ ಮೇಲೆ ವಜಾಗೊಂಡಿರುವ ಕಾರ್ಯಕರ್ತೆಯರಿಗೂ ಗ್ರಾಚ್ಯುಟಿ ಜಾರಿ ಮಾಡಬೇಕು ಎಂದು ಒತ್ತಾಯಿಸಿ ರಾಜ್ಯಾದ್ಯಂತ ಆಡುಗೆ ಕೆಲಸ ಬಂದ್ ಮಾಡಿ ನಾವು ಹೋರಾಟಕ್ಕೆ ಧುಮುಕಿದ್ದೇವೆ. ನಮ್ಮ ಬೇಡಿಕೆ ಈಡೇರುವವರೆಗೆ ಪ್ರತಿಭಟನೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ
ಸಂಘದ ಅಧ್ಯಕ್ಷೆ ಲಕ್ಷ್ಮೀದೇವಿ ತಿಳಿಸಿದ್ದಾರೆ.

Articles You Might Like

Share This Article