ಬೆಂಗಳೂರು, ಫೆ.15- ಅರ್ನಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ವಿಧಾನಸೌಧ ಮುತ್ತಿಗೆ ಹಾಕಲು ಯತ್ನಿಸಿದ ಬಿಸಿಯೂಟ ನೌಕರರನ್ನು ಪೊಲೀಸರು ವಶಕ್ಕೆ ಪಡೆದು ಕರೆದೋಯ್ದರು.
ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 13 ರಿಂದ ಫ್ರೀಡಂ ಪಾರ್ಕ್ನಲ್ಲಿ ಬಿಸಿಯೂಟ ನೌಕರರು ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರ ಯಾವುದೆ ನಿರ್ಧಾರ ಕೈಗೊಳ್ಳದ ಹಿನ್ನೆಲೆಯಲ್ಲಿ ಇಂದು ವಿಧಾನಸೌಧ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ಕಾರ್ಯಕರ್ತೆಯರನ್ನು ವಶಕ್ಕೆ ಪಡೆದಿದ್ದಾರೆ.
ನಿವೃತ್ತಿ ಹೊಂದುವ ಅಕ್ಷರ ದಾಸೋಹದ ನೌಕರರಿಗೆ ಒಂದು ಲಕ್ಷ ಇಡುಗಂಟು ನೀಡಬೇಕು. ಬೇಸಿಗೆ ಮತ್ತು ದಸರಾ ರಜೆಗಳ ವೇತನವನ್ನು ಕಡ್ಡಾಯವಾಗಿ ನೀಡಬೇಕು.
ಅಡುಗೆ ಸಿಬ್ಬಂದಿ ಅಪಘಾತದಲ್ಲಿ ನಿಧನರಾದರೆ ಅವರ ಕುಟುಂಬದವರಿಗೆ ಉದ್ಯೋಗ ನೀಡಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಬಿಸಿಯೂಟ ನೌಕರರು ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರ ಮಾತ್ರ ಯಾವುದೆ ನಿರ್ಧಾರ ಕೈ ಗೊಳ್ಳದ ಹಿನ್ನೆಲೆಯಲ್ಲಿ ಒಂದು ವಿಧಾನಸೌಧ ಮುತ್ತಿಗೆ ಹಾಕಲು ಯತ್ನಿಸಿದ್ದರು.
ಪ್ರತಿಭಟನೆಯಲ್ಲಿ ಸುಮಾರು ಸಾವಿರಕ್ಕೂ ಹೆಚ್ಚು ಮಹಿಳೆಯರು ಪಾಲ್ಗೊಂಡಿದ್ದು ಸರ್ಕಾರದ ವಿರುದ್ದ ಘೋಷಣೆಗಳ್ನು ಕೂಗಿದರು, ಕಣ್ಣಿರು ಹಾಕಿದರೂ ಬಿಡದೆ ಪೊಲೀಸರು ಕರೆದೊಯ್ದರೂ ಮಹಿಳೆಯರ ಮೇಲೆ ಸರ್ಕಾರಕ್ಕೆ ಕನಿಕರವಿಲ್ಲ .
#MiddayMeal, #Employees, #Protest,