Friday, February 21, 2025
Homeರಾಜ್ಯಶಿವರಾತ್ರಿ ವೇಳೆಗೆ ಮತ್ತೆ ಹಾಲಿನ ದರ ಏರಿಕೆ 'ಗ್ಯಾರಂಟಿ'..!?

ಶಿವರಾತ್ರಿ ವೇಳೆಗೆ ಮತ್ತೆ ಹಾಲಿನ ದರ ಏರಿಕೆ ‘ಗ್ಯಾರಂಟಿ’..!?

Milk price hike again 'guaranteed' by Shivaratri..!?

ಬೆಂಗಳೂರು,ಫೆ.19- ಎಲ್ಲವೂ ನಿರೀಕ್ಷೆಯಂತೆ ನಡೆದರೆ, ಶಿವರಾತ್ರಿ ಹಬ್ಬದ ದಿನದಿಂದಲೇ ಅನ್ವಯವಾಗುವಂತೆ ಪ್ರತಿ ಲೀಟರ್ ನಂದಿನಿ ಹಾಲಿನ ದರವನ್ನು 5 ರೂ. ಏರಿಕೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಜನತೆಗೆ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟಲಿದೆ. ಬಸ್, ಮೆಟ್ರೋ ಪ್ರಯಾಣ ದರ ಏರಿಕೆ ಮಾಡಿದ ಬೆನ್ನಲ್ಲೇ ಇದೀಗ ನಂದಿನಿ ಹಾಲಿನ ದರ ಏರಿಕೆಗೆ ಸರ್ಕಾರ ತಯಾರಿ ನಡೆಸಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ಶೀಘ್ರದಲ್ಲೇ ನಂದಿನಿ ಹಾಲಿನ ದರ ಪರಿಷ್ಕರಣೆಯಾಗಲಿದೆ.

ಕೆಎಂಎಫ್ ಅಧಿಕಾರಿಗಳ ಮಟ್ಟದಲ್ಲಿ ದರ ಏರಿಕೆ ಕುರಿತು ಸದ್ಯ ಚಿಂತನೆ ನಡೆದಿದ್ದು, ಸರ್ಕಾರ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಿದರೆ ಶಿವರಾತ್ರಿ ಹಬ್ಬದ ಆರಂಭದಲ್ಲೇ ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆಯಿದೆ. ಈ ಹಿಂದೆ 5 ರೂ. ಹೆಚ್ಚಳ ಮಾಡುವಂತೆ ಸರ್ಕಾರಕ್ಕೆ ಕೆಎಂಎಫ್ ಮನವಿ ಮಾಡಿತ್ತು. ಆದರೆ ಸರ್ಕಾರ ಅಕ್ಟೋಬರ್‌ನಲ್ಲಿ ಕೇವಲ 3 ರೂಪಾಯಿ ಮಾತ್ರ ಏರಿಕೆ ಮಾಡಿತ್ತು. ಈಗ 14 ಹಾಲು ಒಕ್ಕೂಟ ಗಳಿಂದ ಮನವಿ ಬಂದಲ್ಲಿ ಕೂಡಲೇ ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಲು ಕೆಎಂಎಫ್ ತಯಾರಿ ನಡೆಸುತ್ತಿದೆ.

ಕಳೆದ ಬಾರಿ 3 ರೂ. ನೇರವಾಗಿ ರೈತರಿಗೆ ನೀಡಿದ ಹಿನ್ನೆಲೆ ಒಕ್ಕೂಟಗಳಿಗೆ ನಷ್ಟ ಸರಿದೂಗಿಸಲು ದರ ಪರಿಷ್ಕರಣೆ ಅನಿವಾರ್ಯ ಎನ್ನುತ್ತಿದ್ದಾರೆ ಕೆಎಂಎಫ್ ಅಧಿಕಾರಿಗಳು, ಸದ್ಯ ಜನವರಿಯಲ್ಲಿ ಒಕ್ಕೂಟಗಳ ಸಭೆ ಕರೆದು ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಲು ಕೆಎಂಎಫ್ ಚಿಂತನೆ ನಡೆಸಿದೆ.

ಕೆಲ ದಿನಗಳ ಹಿಂದಷ್ಟೇ ರೈತರಿಗೆ ನೀಡುವ ಹಾಲಿನ ದರ ಏರಿಸುವಂತೆ ಕೆಎಂಎಫ್ ಮುಂದೆ ರೈತರು ಪ್ರತಿಭಟನೆ ಮಾಡಿದ್ದರು. ಜತೆಗೆ ಹಾಲು ಒಕ್ಕೂಟಗಳಿಂದ ನಂದಿನಿ ಹಾಲಿನ ದರ ಏರಿಸುವಂತೆ ಕೆಎಂಎಫ್ ಗೆ ಒತ್ತಡ ಹೇರಲಾಗಿತ್ತು. ಈ ಎಲ್ಲವುಗಳನ್ನು ಪರಿಗಣಿಸಿ ಇದೀಗ ಕೆಎಂಎಫ್ ಆಡಳಿತ ಮಂಡಳಿ ಸರ್ಕಾರಕ್ಕೆ ಮನವಿ ಮಾಡಿದ್ದವು. ಕೆಎಂಎಫ್ ಪ್ರತಿ ಲೀಟರ್‌5 ರೂಪಾಯಿ ಹೆಚ್ಚಳ ಮಾಡಲು ಕೋರಲಾಗಿತ್ತು.

ಸದ್ಯ ಸಿಎಂ ಅಂಗಳದಲ್ಲಿ ನಂದಿನಿ ಹಾಲಿನ ದರದ ಮನವಿ ತಲುಪಿದೆ. ಮುಖ್ಯಮಂತ್ರಿಗಳ ಅನುಮತಿಗಾಗಿ ಕೆಎಂಎಫ್ ಆಡಳಿತ ಮಂಡಳಿ ಕಾದು ಕುಳಿತಿದ್ದು, ಸಿಎಂ ಅನುಮತಿ ನೀಡಿದ ಬೆನ್ನಲ್ಲೇ ಕೆಎಂಎಫ್ ಹಾಲಿನ ದರ ಏರಿಕೆ ಮಾಡುತ್ತೆ ಎನ್ನಲಾಗಿದೆ.

ಕಳೆದ ವರ್ಷ ಜೂನ್ ನಲ್ಲಿ ಹಾಲಿನ ದರ ಏರಿಕೆ ಮಾಡಿದ್ದ ಕೆಎಂಎಫ್, ಇದೀಗ ಮತ್ತೆ ದರ ಹೆಚ್ಚಳ ಮಾಡಲು ಮುಂದಾಗಿದ್ದು ಆರ್ಥಿಕ ಸಂಕಷ್ಟದಿಂದ ಈ ನಿರ್ಧಾರಕ್ಕೆ ಮುಂದಾಗಿದೆ ಎನ್ನಲಾಗುತ್ತಿದೆ.
ಬೆಲೆಏರಿಸುವ ಸಂಬಂಧ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ ಅವರು ಸುಳಿವು ನೀಡಿದ್ದರು. ಈ ಹಿಂದೆ ಕೆಎಂಎಫ್ ಪ್ರತಿ ಲೀಟರ್ ಹಾಲಿನ ಪ್ಯಾಕೆಟ್‌ಗೆ ಹೆಚ್ಚುವರಿಯಾಗಿ 50 ಮಿಲಿಲೀಟರ್ ಸೇರಿಸಿ, ಲೀಟರ್ ಮೇಲೆ 2 ರೂ. ಏರಿಕೆ ಮಾಡಿತ್ತು.

ಆಗ ಅರ್ಧ ಲೀಟರ್ ಹಾಲಿನ ಪ್ಯಾಕೆಟ್ ದರ 24 ರೂ. ಆಗಿತ್ತು. ಒಂದು ಲೀಟರ್ ಹಾಲಿನ ದರ 44 ರೂ.ಗೆ ಏರಿತ್ತು. ಕಳೆದ ಜೂನ್ ತಿಂಗಳಲ್ಲಿ ಹಾಲಿನ ದರ ಏರಿತ್ತು. ನಂದಿನಿ ಹಾಲಿನ ಪ್ಯಾಕೇಟ್ಗಳಲ್ಲಿ ಹಾಲಿನ ಪ್ರಮಾಣವನ್ನು 50 ಎಂ.ಎಲ್ ಹೆಚ್ಚಳ ಮಾಡಿ, ಹೆಚ್ಚುವರಿ ಹಾಲಿಗೆ 2 ರೂಪಾಯಿ ದರ ನಿಗದಿಪಡಿಸಲಾಗಿದೇ ವಿನಃ ಹಾಲಿನ ಬೆಲೆಯಲ್ಲಿ ಏರಿಕೆ ಮಾಡಿಲ್ಲ. ಅರ್ಧ ಲೀಟರ್ ಹಾಲಿನ ಪ್ಯಾಕೆಟ್‌ನಲ್ಲಿ 550 ಎಂ.ಎಲ್ ಹಾಗೂ ಒಂದು ಲೀಟರ್ ಪ್ಯಾಕೆಟ್‌ನಲ್ಲಿ 1.050 ಎಂ.ಎಲ್ ಹಾಲು ಸಿಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದರು.

ಕಳೆದ ಕೆಲವು ತಿಂಗಳುಗಳಿಂದ ರಾಜ್ಯದಲ್ಲಿ ಹಾಲಿನ ಉತ್ಪಾದನೆ ಗಣನೀಯ ಏರಿಕೆ ಕಂಡಿದ್ದು, ಮಾರುಕಟ್ಟೆ ವಿಸ್ತರಿಸಲು ನಮ್ಮ ನಂದಿನಿ ಹಾಲು ಮತ್ತು ಮೊಸರು ಈಗ ದೆಹಲಿಗೂ ಕಾಲಿಟ್ಟಿದೆ ಎಂದು ಹೇಳಿದ್ದರು. ಕೆಎಂಎಫ್ ಈಗಾಗಲೇ ವಿಶ್ವದ ಅನೇಕ ರಾಷ್ಟ್ರಗಳಲ್ಲಿ ತನ್ನ ಮಾರಾಟ ಕೇಂದ್ರಗಳನ್ನು ಹೊಂದಿದ್ದು, ಕನ್ನಡದ ರೈತರ ಶ್ರಮದ ಸಂಸ್ಥೆಯೊಂದು ಕನ್ನಡತನವನ್ನು ಉಳಿಸಿಕೊಂಡು ವಿಶ್ವವ್ಯಾಪಿಯಾಗಿ ಬೆಳೆಯುತ್ತಿರುವುದು ಹೆಮ್ಮೆಯ ವಿಷಯ. ಕರ್ನಾಟಕದ ಹೆಮ್ಮೆಯ ನಂದಿನಿ ಹಾಲಿಗೆ ದೇಶದಾದ್ಯಂತ ಬೇಡಿಕೆ ಹೆಚ್ಚುತ್ತಿದೆ. ದೆಹಲಿಯಲ್ಲಿ ನಿರೀಕ್ಷೆಗಿಂತಲೂ ಹೆಚ್ಚು ನಂದಿನಿ ಹಾಲು ಮಾರಾಟವಾಗಿದೆ ಎಂದಿದ್ದರು.

ರಾಜ್ಯದಲ್ಲಿ ಪ್ರತಿದಿನ 92 ರಿಂದ 93 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದ್ದು, ರೈತರಿಂದ ಲೀಟ‌ರ್ಗೆ 32 ರೂ.ಗಳಿಗೆ ಹಾಲು ಖರೀದಿಸಲಾಗುತ್ತಿದ್ದು, ರಾಜ್ಯ ಸರ್ಕಾರ ಕ್ಷೀರಧಾರೆ ಯೋಜನೆಯಡಿ ಹಾಲು ಉತ್ಪಾದಕರಿಗೆ ಪ್ರತಿ ಲೀಟರಿಗೆ 5 ರೂ.ಗಳ ಪ್ರೋತ್ಸಾಹಧನವನ್ನು ನೀಡುತ್ತಿದೆ. ನಾನು ಮುಖ್ಯಮಂತ್ರಿ ಯಾದ ನಂತರ ಇದನ್ನು 5 ರೂ.ಗಳಿಗೆ ಹೆಚ್ಚಿಸಿದ್ದೆ. ಪ್ರೋತ್ಸಾಹಧನಕ್ಕಾಗಿ ಪ್ರತಿ ದಿನ 5 ಕೋಟಿ ರೂಪಾಯಿಗಳನ್ನು ಸರ್ಕಾರ ವೆಚ್ಚ ಮಾಡುತ್ತಿದೆ ಎಂದು ಹೇಳಿದ್ದರು.

ಈ ಹಿಂದೆ ಕೆಎಂಎಫ್‌ಗೆ ಹೆಚ್ಚಿನ ಹಾಲು ಹರಿದು ಬಂದಿದ್ದ ಹಿನ್ನೆಲೆಯಲ್ಲಿ ಪ್ಯಾಕೆಟ್‌ನಲ್ಲಿ ನೀಡಲಾಗುತ್ತಿದ್ದ ಹಾಲಿನ ಪ್ರಮಾಣವನ್ನು 50 ಎಂಎಲ್ ಹೆಚ್ಚಿಸಿ ದರವನ್ನೂ 2 ರೂ. ಏರಿಕೆ ಮಾಡಲಾಗಿತ್ತು. ಇದೀಗ ಹಾಲಿನ ಜೊತೆ ದರವನ್ನೂ ಹಿಂಪಡೆಯುವುದಾಗಿ ಭೀಮಾನಾಯ್ಡ್ ತಿಳಿಸಿದ್ದರು.

ಈ ಹಿಂದೆ ಜೂನ್ 25ರಂದು 1000 ಎಂಎಲ್ ಹಾಲಿಗೆ 50 ಎಂಎಲ್ ಹಾಲನ್ನು ಹೆಚ್ಚುವರಿಯಾಗಿ ಸೇರಿಸಿ ಮಾರಾಟ ಮಾಡುವ ಘೋಷಣೆ ಮಾಡಲಾಗಿತ್ತು. ಜೂನ್ 26ರಿಂದಲೇ ಹೊಸ ತೀರ್ಮಾನ ಜಾರಿಗೆ ಬಂದಿತ್ತು. ಈ ವೇಳೆ ಹಾಲಿನ ದರವನ್ನು ಲೀಟರ್‌ಗೆ 44 ರೂ.ನಿಂದ 46 ರೂ.ಗೆ ಏರಿಕೆ ಮಾಡಲಾಗಿತ್ತು. ಹಾಗೆಯೇ 22 ರೂ. ಇದ್ದ 500 ಎಂಎಲ್ ಪ್ಯಾಕೆಟ್ ಹಾಲಿಗೂ 50 ಎಂಎಲ್ ಹೆಚ್ಚುವರಿ ಸೇರಿಸಲಾಗಿತ್ತು. ಹಾಗೂ ದರವನ್ನು 24 ರೂ.ಗೆ ಏರಿಕೆ ಮಾಡಲಾಗಿತ್ತು.

ಹಾಲು ಉತ್ಪಾದಕ ರೈತರು ತೀವ್ರ ಸಂಕಷ್ಟದಲ್ಲಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗಮನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹೊಸ ವರ್ಷದಲ್ಲಿ ರೈತರಿಗೆ ಕನಿಷ್ಟ 5 ರೂ.ನಷ್ಟು ಹಾಲಿನ ದರ ಹೆಚ್ಚಿಸುವ ಮೂಲಕ ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ ನೀಡಲಿದ್ದಾರೆ. ಸಿಎಂ ಶೀಘ್ರದಲ್ಲೇ ರಾಜ್ಯದ ಒಕ್ಕೂಟಗಳ ಅಧ್ಯಕ್ಷರ ಸಭೆ ಕರೆದು, ಹಾಲು ಉತ್ಪಾದಕ ರೈತರಹಿತ ನಿರ್ಣಯ ಕೈಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದ್ದರು.

RELATED ARTICLES

Latest News