ಹಾರೋಹಳ್ಳಿ, ಫೆ.21- ರಾಮನಗರ ಜಿಲ್ಲೆಯಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಹಾರೋಹಳ್ಳಿ ತಾಲ್ಲೂಕಿನ ನೂತನ ತಾಲ್ಲೂಕು ಕಚೇರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ನೂತನ ತಾಲ್ಲೂಕು ಒಟ್ಟು 11 ಗ್ರಾಮ ಪಂಚಾಯತಿಗಳನ್ನು ಒಳಗೊಂಡಿದ್ದು, 82 ಗ್ರಾಮಗಳಿವೆ. ಹೊಸ ತಾಲ್ಲೂಕಿನ ಜನಸಂಖ್ಯೆಯು 90 ಸಾವಿರ ಆಗಿದೆ ಎಂದು ತಿಳಿಸಿದರು.
ತಾಲ್ಲೂಕು ಕಚೇರಿಗೆ ಬೇಕಾದ ಹುದ್ದೆಗಳನ್ನು ಬಿಜೆಪಿ ಸರಕಾರ ಸೃಜಿಸಿದ್ದು, ಎಲ್ಲ ಕಚೇರಿಗಳಿಗೂ ಜಾಗ ಒದಗಿಸಿದೆ.
ಅಗತ್ಯವಿದ್ದರೆ ಕಚೇರಿಗಳ ಕಟ್ಟಡ ನಿರ್ಮಿಸಲು 30 ಗುಂಟೆ ಜಮೀನನ್ನು ಮೀಸಲಿಡಲಾಗಿದೆ ಎಂದು ನುಡಿದರು.
ಹಿಂದಿನ ಸರಕಾರ ಹಾರೋಹಳ್ಳಿಯನ್ನು ತಾಲ್ಲೂಕು ಎಂದು ಘೋಷಿಸಿತ್ತಷ್ಟೆ. ಆದರೆ ಅದಕ್ಕೆ ಅಗತ್ಯವಾದ ಪ್ರಕ್ರಿಯೆಗಳನ್ನು ನಡೆಸಿದ ಶ್ರೇಯಸ್ಸು ಬಿಜೆಪಿ ಸರಕಾರಕ್ಕೆ ಸಲ್ಲಬೇಕು ಎಂದು ಅವರು ಪ್ರತಿಪಾದಿಸಿದರು.
BIG NEWS : ಬೀದಿ ಗುದ್ದಾಟಕ್ಕಿಳಿದ ರೋಹಿಣಿ – ರೂಪಾಗೆ ವರ್ಗಾವಣೆ ಶಿಕ್ಷೆ ನೀಡಿದ ಸರ್ಕಾರ
ಬಿಜೆಪಿಯಿಂದ ಅಭಿವೃದ್ಧಿ ಪರ್ವ: ಬಿಜೆಪಿ ಸರಕಾರವು ರಾಮನಗರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಂಕಲ್ಪ ಮಾಡಿದೆ. ಸಂಸದ ಡಿ.ಕೆ. ಸುರೇಶ್ ಇದನ್ನು ಮೆಚ್ಚಬೇಕಾಗಿತ್ತು. ಆದರೆ, ಅವರು ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಅಷ್ಟೆ ಎಂದು ಸಚಿವರು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
ನೂತನ ತಾಲ್ಲೂಕು ಕಚೇರಿಯನ್ನು ವ್ಯವಸ್ಥಿತವಾಗಿ ಮಾಡಲಾಗಿದೆ. ಇದನ್ನು ಚುನಾವಣೆ ಮೇಲೆ ಕಣ್ಣಿಟ್ಟುಕೊಂಡು ಕಾಟಾಚಾರಕ್ಕೇನೂ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.
ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಜಿಟಿಟಿಸಿ, ಶ್ರೀರಂಗ ಮತ್ತು ಸತ್ತೇಗಾಲ ನೀರಾವರಿ ಯೋಜನೆ, ಜಲಜೀವನ್
ಮಿಷನ್, ಇಂಡೋ ಜರ್ಮನ್ ಟೆಕ್ನಾಲಜಿ ಸೆಂಟರ್, ಸ್ನಾತಕೋತ್ತರ ಕೇಂದ್ರ, ಸರಕಾರಿ ಎಂಜಿನಿಯರಿಂಗ್ ಕಾಲೇಜು ಉನ್ನತೀಕರಣ, ಹೈಟೆಕ್ ರೇಷ್ಮೆ ಮಾರುಕಟ್ಟೆ, ಮಾವು ಸಂಸ್ಕರಣಾ ಘಟಕ ಇವೆಲ್ಲವನ್ನೂ ತಂದಿದ್ದು ನಮ್ಮ ಸರ್ಕಾರ. ಬೇರೆ ಯಾರೇ ಆಗಿದ್ದರೂ 30 ವರ್ಷವಾದರೂ ಇವೆಲ್ಲ ಬರುತ್ತಿರಲಿಲ್ಲ ಎಂದು ಎದುರೇಟು ಕೊಟ್ಟರು.
ಏ.1ರಿಂದಲೇ ಮಹಿಳೆಯರು, ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್
ನನ್ನ ವಿರುದ್ಧ ಮಾತನಾಡುವವರ ಕೈಯಲ್ಲಿ ನಾಡಪ್ರಭು ಕೆಂಪೇಗೌಡರ ಸಮಾ ಸ್ಥಳವನ್ನು ಏಕೆ ಅಭಿವೃದ್ಧಿ ಪಡಿಸಲು ಆಗಲಿಲ್ಲ? ನಮ್ಮ ಸರಕಾರ ಇಡೀ ಕೆಂಪಾಪುರದ ಜನರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ ಈ ಕೆಲಸವನ್ನು ಕೈಗೆತ್ತಿಕೊಂಡಿದೆ. ಟೀಕಿಸುವವರು ಮೊದಲು ಇದನ್ನೆಲ್ಲ ಯೋಚಿಸಬೇಕು ಎಂದು ಅಶ್ವತ್ಥ ನಾರಾಯಣ ಅಭಿಪ್ರಾಯ ಪಟ್ಟರು.
ಶಾಸಕಿ ಅನಿತಾ ಕುಮಾರಸ್ವಾಮಿ, ಜಿಲ್ಲಾಧಿಕಾರಿ ಅವಿನಾಶ್ ಮೆನನ್, ಜಿಪಂ ಸಿಇಒ ದಿಗ್ವಿಜಯ ಘೋಡ್ಕೆ, ಕರ್ನಾಟಕ ರೇಷ್ಮೆ ಉದ್ದಿಮೆಗಳ ನಿಗಮದ ಅಧ್ಯಕ್ಷ ಗೌತಮಗೌಡ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
minister, Ashwathnarayan, Harohalli, new taluk,