ಬೆಂಗಳೂರು,ಡಿ.1- ಎರಡು ದಿನಗಳ ನವದೆಹಲಿ ಪ್ರವಾಸ ಮುಗಿಸಿಕೊಂಡು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಿಂತಿರುಗಿದ ಬೆನ್ನಲ್ಲೇ ಸಚಿವ ಸ್ಥಾನದ ಆಕಾಂಕ್ಷಿಗಳು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಆರ್‍ಟಿನಗರದ ನಿವಾಸಕ್ಕೆ ಸಚಿವರಾದ ಡಾ.ಕೆ.ಸುಧಾಕರ್, ಆನಂದ್ ಸಿಂಗ್ ಹಾಗೂ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಸಿ.ಪಿ.ಯೋಗೇಶ್ವರ್, ಇತ್ತೀಚೆಗಷ್ಟೇ ಪಕ್ಷಕ್ಕೆ ಸೇರ್ಪಡೆಯಾಗಿರುವ ಮಾಜಿ ಸಂಸದ ಮುದ್ದಹನುಮೇಗೌಡ ಮತ್ತಿತರರು ಭೇಟಿಯಾಗಿದ್ದರು.
ಎರಡು ದಿನಗಳ ಕಾಲ ದೆಹಲಿಯಲ್ಲಿ ಇದ್ದ ಸಿಎಂ ಬೊಮ್ಮಾಯಿ ಅವರು, ಕೇಂದ್ರದ ವಿವಿಧ ಇಲಾಖೆಯ ಸಚಿವರನ್ನು ಭೇಟಿಯಾಗಿ ರಾಜ್ಯದ ಯೋಜನೆಗಳ ಅನುಷ್ಠಾನ ಕುರಿತು ಮಾತುಕತೆ ನಡೆಸಿದ್ದರು.
ಕನ್ನಡ ಧ್ವಜ ಹಾರಿಸಿದ ವಿದ್ಯಾರ್ಥಿಗೆ ಮರಾಠಿ ಪುಂಡರಿಂದ ಹಲ್ಲೆ
ಪಕ್ಷದ ವರಿಷ್ಠರನ್ನು ಭೇಟಿಯಾಗಬೇಕೆಂದು ಬಯಸಿದ್ದರಾದರೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರುಗಳು ಗುಜರಾತ್ ಪ್ರವಾಸದಲ್ಲಿದ್ದ ಕಾರಣ ಭೇಟಿಗೆ ಅವಕಾಶ ಸಿಗಲಿಲ್ಲ.
ರ‍್ಯಾಗಿಂಗ್ ಮಾಡಿದ ಸರ್ಕಾರಿ ವೈದ್ಯಕೀಯ ಕಾಲೇಜಿನ 6 ವಿದ್ಯಾರ್ಥಿಗಳ ಅಮಾನತು
ಈ ಹಿನ್ನೆಲೆಯಲ್ಲಿ ದೆಹಲಿಯಿಂದ ಹಿಂತಿರುಗಿದ ಬೊಮ್ಮಾಯಿ ಅವರ ಜೊತೆ ಅಲ್ಲಿನ ಬೆಳವಣಿಗೆಗಳ ಕುರಿತಂತೆ ಸಂಪುಟದ ಸಹೋದ್ಯೋಗಿಗಳ ಜೊತೆ ಆಪ್ತವಾಗಿ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
Minister, aspirants, meeting, CM Bommai,