ಬೂಸ್ಟರ್ ಡೋಸ್ ಪಡೆದ ಸಚಿವ ಬಿ.ಸಿ.ಪಾಟೀಲ್

Social Share

ಹಾವೇರಿ,ಜ.10- ಹಾವೇರಿ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಅವರು ಇಂದು ಬೂಸ್ಟರ್ ಡೋಸ್ ಲಸಿಕೆ ಪಡೆದರು. ಮತಕ್ಷೇತ್ರ ಹಿರೇಕೆರೂರಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 60 ವರ್ಷ ಮೇಲ್ಪಟ್ಟ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಕಾರ್ಯಕರ್ತೆಯರು ಬೂಸ್ಟರ್ ಡೋಸ್ ಲಸಿಕೆ ಹಾಕಿದರು.
ದೇಶದಲ್ಲಿ ಆರೋಗ್ಯ, ಮುಂಚೂಣಿ ಕಾರ್ಯಕರ್ತರು ಮತ್ತು 60 ವರ್ಷ ಹಾಗೂ ಅದಕ್ಕಿಂತ ಮೇಲ್ಪಟ್ಟವರಿಗೆ ಕೊರೊನಾ ವೈರಸ್ ವಿರುದ್ಧ ಮುನ್ನೆಚ್ಚರಿಕಾ ಡೋಸ್‍ಅನ್ನು ಇಂದಿನಿಂದ ನೀಡಲಾಗುತ್ತಿದ್ದು, ಬೂಸ್ಟರ್ ಡೋಸ್ ಲಸಿಕೆ ವೇಳೆ ಮಿಕ್ಸ್   ಡೋಸ್ ನೀಡಲು ಅವಕಾಶವಿಲ್ಲ.
ಈ ಹಿಂದೆ ಮೊದಲ ಹಾಗೂ ಎರಡನೆ ಡೋಸ್ ಯಾವ ಲಸಿಕೆ ಪಡೆಯಲಾಗಿದೆಯೋ ಅದೇ ಲಸಿಕೆ ಪಡೆಯಬೇಕು. ಎಲ್ಲರೂ ತಪ್ಪದೆ ಲಸಿಕೆ ಹಾಕಿಸಿಕೊಳ್ಳುವಂತೆ ಈ ವೇಳೆ ಬಿ.ಸಿ.ಪಾಟೀಲ್ ಕರೆ ನೀಡಿದರು. ಮೂರನೆ ಡೋಸ್ ಲಸಿಕೆಯು ಓಮೈಕ್ರಾನ್ ರೂಪಾಂತರ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗುವ ವಿರುದ್ಧ ಶೇ.88ರಷ್ಟು ರಕ್ಷಣೆ ನೀಡುತ್ತದೆ ಎಂಬುದನ್ನು ಯುಕೆ ಅಧ್ಯಯನವು ಕಂಡುಹಿಡಿದಿದೆ ಎಂದು ಸಚಿವರು ಹೇಳಿದರು.

Articles You Might Like

Share This Article