ಸಚಿವರಿಗೆ ಬ್ಲಾಕ್ ಮೇಲ್ ಯತ್ನ

Spread the love

ಮುಂಬೈ, ಏ.21- ಮಹಾರಾಷ್ಟ್ರ ಸಚಿವ ಧನಂಜಯ್ ಮುಂಡೆ ಅವರಿಂದ 5 ಕೋಟಿ ರೂಪಾಯಿ ಸುಲಿಗೆಗೆ ಯತ್ನಿಸಿದ ಆರೋಪದ ಮೇಲೆ ಮಹಿಳೆಯೊಬ್ಬರ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್‍ಐಆರ್) ದಾಖಲಿಸಲಾಗಿದೆ. ಮಲಬಾರ್ ಹಿಲ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಿಸಿದ ನಂತರ, ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಮುಂಬೈ ಪೊಲೀಸರ ಅಪರಾಧ ವಿಭಾಗಕ್ಕೆ ವರ್ಗಾಯಿಸಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.

ದೂರಿನ ಪ್ರಕಾರ ಎನ್‍ಸಿಪಿ ನಾಯಕರೂ ಆಗಿರುವ ಸಾಮಾಜಿಕ ನ್ಯಾಯ ಸಚಿವ ಮುಂಡೆ ಅವರಿಗೆ ಮಹಿಳೆ ಪರಿಚಯವಿದೆ. ಈ ವರ್ಷದ ಫೆಬ್ರವರಿ ಮತ್ತು ಮಾರ್ಚ್‍ನಲ್ಲಿ ಮಹಳೆ ಸಚಿವರಿಗೆ ಅಂತರರಾಷ್ಟ್ರೀಯ ಮೊಬೈಲ್ ಸಂಖ್ಯೆಗಳಿಂದ ಕರೆ ಮಾಡಿದ್ದಾರೆ. ಶಾಪಿಂಗ್ ಮತ್ತು ದುಬಾರಿ ಮೊಬೈಲ್ ಫೋನ್ ಕೊಡಿಸುವಂತೆ ಬೇಡಿಕೆಯಿಟ್ಟಿದ್ದಾಳೆ.

ತನ್ನ ಬೇಡಿಕೆಗಳನ್ನು ಈಡೇರಿಸದಿದ್ದರೆ ಸಾಮಾಜಿಕ ಮಾಧ್ಯಮದಲ್ಲಿ ಮಾನಹಾನಿ ಫೋಸ್ಟ್ ಹಾಕುವುದಾಗಿ ಬೆದರಿಕೆ ಹಾಕಿದ್ದಾಳೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಪ್ರಕರಣದಲ್ಲಿ ಈವರೆಗೆ ಯಾವುದೇ ಬಂಧನವಾಗಿಲ್ಲ ಎಂದು ಅವರು ತಿಳಿಸಲಾಗಿದೆ.

Facebook Comments